–  ರಾಘವೇಂದ್ರ ಅಡಿಗ ಎಚ್ಚೆನ್.

ಸ್ಯಾಂಡಲ್‌ವುಡ್ ನಟಿ ಶರ್ಮಿಳಾ ಮಾಂಡ್ರೆ ಹೊಸ ಬಾಳಿಗೆ ಹೆಜ್ಜೆ ಇಟ್ಟಿದ್ದಾರೆ. ತಮಿಳು ಚಿತ್ರರಂಗದ ಖ್ಯಾತ ನಿರ್ಮಾಪಕ ಸುಧನ್ ಸುಂದರಂ ಅವರೊಂದಿಗೆ ಶರ್ಮಿಳಾ ಮಾಂಡ್ರೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ಆಪ್ತರು ಹಾಗೂ ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ನಟಿ ರಮ್ಯಾ ಹಾಗೂ ಧನ್ಯ ರಾಮ್‌ಕುಮಾರ್ ಸೇರಿದಂತೆ ಹಲವರು ಭಾಗಿಯಾಗಿ ನವದಂಪತಿಗೆ ಶುಭ ಹಾರೈಸಿದ್ದಾರೆ.

sharmila1

ಸುಧನ್ ಸುಂದರಂ ತಮಿಳು ಚಿತ್ರರಂಗದ ಜನಪ್ರಿಯ ನಿರ್ಮಾಪಕರಾಗಿದ್ದು, ‘ಮಹಾರಾಜ’, ‘ಪಾರ್ಕಿಂಗ್’, ‘ತಾಯ್ ಕೆಳವಿ’, ‘ರಿವಾಲ್ವರ್ ರೀಟಾ’ ಹಾಗೂ ‘ಆಸೈ’ ಸೇರಿದಂತೆ ಹಲವು ಸಿನಿಮಾಗಳ ನಿರ್ಮಾಣದಲ್ಲಿ ಗುರುತಿಸಿಕೊಂಡಿದ್ದಾರೆ.

ಶರ್ಮಿಳಾ ಮಾಂಡ್ರೆ ಹಾಗೂ ಸುಧನ್ ಸುಂದರಂ ಅವರ ವಿವಾಹದ ಸುದ್ದಿ ಅಭಿಮಾನಿಗಳ ಗಮನ ಸೆಳೆದಿದ್ದು, ನವಜೋಡಿಗೆ ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ