ರಾಜ್ಯ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರೇಗೌಡ ಇಂದು ಮುಂಜಾನೆ ನಿಧನರಾಗಿದ್ದಾರೆ.

ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯ ಮತ್ತು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ರಾಮಚಂದ್ರೇಗೌಡ ರಾಜಾಜಿನಗರದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಬೆಳೆಸುವಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಾಥ್ ನೀಡಿದ್ದ ಪ್ರಮುಖ ನಾಯಕರಲ್ಲಿ ರಾಮಚಂದ್ರೇಗೌಡರು ಒಬ್ಬರು. ಪಕ್ಷದ ಆರಂಭದ ದಿನಗಳಿಂದಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು, ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಆರ್‌ಎಸ್‌ಎಸ್‌ ಹಿನ್ನೆಲೆ ಹೊಂದಿದ್ದ ರಾಮಚಂದ್ರೇಗೌಡರು, 1953ರಲ್ಲೇ ಸಂಘವನ್ನು ಸೇರುವ ಮೂಲಕ ತಮ್ಮ ಸಾರ್ವಜನಿಕ ಜೀವನ ಆರಂಭಿಸಿದ್ದರು. ತದನಂತರ 1970 ರಲ್ಲಿ ಅಧಿಕೃತವಾಗಿ ರಾಜಕೀಯಕ್ಕೆ ಪ್ರವೇಶ ಪಡೆದರು.

ರಾಜ್ಯ ರಾಜಕಾರಣದಲ್ಲಿ ಮೇಲ್ಮನೆಯ ಅತ್ಯಂತ ಪ್ರಭಾವಿ ನಾಯಕರಾಗಿದ್ದ ಅವರು, ಸತತವಾಗಿ ಐದು ಬಾರಿ ವಿಧಾನ ಪರಿಷತ್ (MLC) ಸದಸ್ಯರಾಗಿ ಆಯ್ಕೆಯಾಗಿ ದಾಖಲೆ ಬರೆದಿದ್ದರು. ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರದಲ್ಲಿ ಇವರು ವೈದ್ಯಕೀಯ ಶಿಕ್ಷಣ ಸಚಿವರಾಗಿ ಮಹತ್ವದ ಜವಾಬ್ದಾರಿ ನಿಭಾಯಿಸಿದ್ದರು.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ