–  ರಾಘವೇಂದ್ರ ಅಡಿಗ ಎಚ್ಚೆನ್.

ಕೊರೊನಾ ಸಂದರ್ಭದಲ್ಲಿ ದೇಶಾದ್ಯಂತ ಜಾರಿಯಾದ 21 ದಿನಗಳ ಲಾಕ್‌ಡೌನ್ ಪ್ರತಿಯೊಬ್ಬರ ಜೀವನದಲ್ಲೂ ದೊಡ್ಡ ಆರ್ಥಿಕ ಹೊಡೆತ ಹಾಗೂ ಗೊಂದಲಗಳನ್ನು ಸೃಷ್ಟಿಸಿತ್ತು. ಸಾಮಾನ್ಯ ಜನರ ಬದುಕು-ಬವಣೆ ಹಾಗೂ ಅವರು ಎದುರಿಸಿದ ನೈಜ ಸವಾಲುಗಳನ್ನು ಸೂಚ್ಯಂಕವಾಗಿಟ್ಟುಕೊಂಡು ನಿರ್ಮಾಣವಾಗುತ್ತಿರುವ ಚಿತ್ರವೇ ‘ಲಾಕ್‌ಡೌನ್ 21 ಡೇಸ್’.

​ಈ ಹಿಂದೆ ಹಲವು ಯಶಸ್ವಿ ಕಿರುಚಿತ್ರಗಳನ್ನು ನಿರ್ದೇಶಿಸಿ ಸೈ ಎನಿಸಿಕೊಂಡಿದ್ದ ಜೋಡಿ ನಿರ್ದೇಶಕರಾದ ಮಧುಮೋಹನ್ ಮತ್ತು ಮಾಚಯ್ಯ ಅವರು ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಹಿರಿತೆರೆಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಅಂದ್ಹಾಗೆ ಈ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗಷ್ಟೇ ಶ್ರೀ ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ಲಾಕ್ ಡೌನ್ 21ಡೇಸ್ ಚಿತ್ರದ ಮುಹೂರ್ತ ನೇರವೇರಿತು.ನಮ್ ಗಣಿ ಬಿಕಾಂ ಪಾಸ್ ನಿರ್ದೇಶಕ ಅಭಿಶೇಕ್ ಶೆಟ್ಟಿಯಿಂದ ಲಾಕ್ ಡೌನ್ 21ಡೇಸ್ ಚಿತ್ರಕ್ಕೆ ಚಾಲನೆ ನೀಡಲಾಯಿತ್ತು.

1001764783

ಈ ಚಿತ್ರದಲ್ಲಿ ಅನಿಲ್ ಸಿ ಕೆ,ಅರುಣ ಯಾದವ್, ಪ್ರಿಯಾಂಕಾ ರಾಜ್, ಮಂಜು ನಂಜನಗೂಡು,ಅಕ್ಷಯ್, MK ಮಠ,  ಚಂದನ್ ಗೌಡ ಮುಖ್ಯ ಪಾತ್ರಗಳಲ್ಲಿ ಅಭಿನಯಿಸ್ತಿದ್ಧಾರೆ.

1001764773

​ಸಿನಿಮಾದ ಪ್ರಮುಖ ಮುಖ್ಯಾಂಶಗಳು:

  • ​ಕಥಾಹಂದರ: ದೇಶವೇ ಸ್ತಬ್ಧವಾಗಿದ್ದ 21 ದಿನಗಳ ಕಠಿಣ ಲಾಕ್‌ಡೌನ್ ಸಮಯದಲ್ಲಿ ಅರಳುವ ಒಂದು ಸುಂದರ ಪ್ರೇಮಕಥೆ ಹಾಗೂ ಮಾನವ ಸಂಬಂಧಗಳ ಗಟ್ಟಿತನವನ್ನು ಈ ಸಿನಿಮಾದಲ್ಲಿ ಆಕರ್ಷಕವಾಗಿ ಹೆಣೆಯಲಾಗಿದೆ.
  • ​ನಿರ್ಮಾಣ:’ಅರುಣಾ ಯಾದವ್ ಫಿಲ್ಮ್ ಹೌಸ್’ ಬ್ಯಾನರ್ ಅಡಿಯಲ್ಲಿ ಮಹಿಳಾ ನಿರ್ಮಾಪಕಿ ಅರುಣಾ ಯಾದವ್ ಅವರು ಅತ್ಯಂತ ಸದಭಿರುಚಿಯಿಂದ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

1001764770

ಚಿತ್ರತಂಡದ ಮಾತು:

​”ಶಾರ್ಟ್ ಫಿಲ್ಮ್‌ಗಳನ್ನು ನಿರ್ದೇಶಿಸಿದ ನಂತರ ದೊಡ್ಡ ಮಟ್ಟದ ಸಿನಿಮಾ ಮಾಡಬೇಕೆಂಬುದು ನನ್ನ ಕನಸಾಗಿತ್ತು. ನನ್ನ ಈ ಕನಸಿಗೆ ಸಾಥ್ ನೀಡಿ, ಅವಕಾಶ ಮಾಡಿಕೊಟ್ಟ ನಿರ್ಮಾಪಕರಿಗೆ ಧನ್ಯವಾದಗಳು.”

— ಮಧುಮೋಹನ್ ಮಾಚಯ್ಯ (ನಿರ್ದೇಶಕ)

​”ಒಬ್ಬ ಮಹಿಳಾ ನಿರ್ಮಾಪಕಿಯಾಗಿ ಸಮಾಜಕ್ಕೆ ಹತ್ತಿರವಾದ ಹಾಗೂ ಉತ್ತಮ ಅಭಿರುಚಿಯುಳ್ಳ ಇಂತಹ ಕಥೆಯನ್ನು ತೆರೆಯ ಮೇಲೆ ತರುತ್ತಿರುವುದು ನಮ್ಮ ಇಡೀ ತಂಡಕ್ಕೆ ಹೆಮ್ಮೆ ಮತ್ತು ಸಂತಸ ತಂದಿದೆ.”

— ಚಿತ್ರತಂಡ

​ಸಾಮಾಜಿಕ ಗಂಭೀರತೆಯ ಜೊತೆಗೆ ಹೃದಯಸ್ಪರ್ಶಿ ಪ್ರೇಮಕಥೆಯನ್ನು ಹೊಂದಿರುವ ‘ಲಾಕ್‌ಡೌನ್ 21 ಡೇಸ್’ ಶೀಘ್ರದಲ್ಲೇ ಚಿತ್ರೀಕರಣ ಆರಂಭಿಸಲಿದೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ