ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಮೂವರು ಪ್ರಯಾಣಿಕರು ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಧಾರವಾಡ ತಾಲೂಕಿನ ವೆಂಕಟಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂಜಾನೆ ಸಂಭವಿಸಿದೆ.

ಧಾರವಾಡ ತಾಲೂಕಿನ ವೆಂಕಟಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಘಟನೆ ಸಂಭವಿಸಿದ್ದು, ದಾವಣಗೆರೆ ಮೂಲದ ವಿನಾಯಕ್ (25), ಮಂಜುನಾಥ್ (29) ಹಾಗೂ ಬಸವರಾಜ (34) ಸಾವನ್ನಪ್ಪಿದ್ದಾರೆ, ಅಭಿಷೇಕ, ಅಜಯ್ ಹಾಗೂ ಬಸನಗೌಡ ತೀವ್ರವಾಗಿ ಗಾಯಗೊಂಡಿದ್ದಾರೆ.

ಬೆಳಗಾವಿ‌ ಕಡೆಯಿಂದ ಧಾರವಾಡಕ್ಕೆ ಬರುತ್ತಿದ್ದಾಗ ಮುಂದಿದ್ದ ವಾಹನ ಡಿಕ್ಕಿ ತಪ್ಪಿಸಲು ಹೋಗಿ ಡಿವೈಡರ್​ಗೆ ಗುದ್ದಿ ಕಾರ್​ ಪಲ್ಟಿಯಾಗಿದೆ. ಇದರ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೂವರ ಶವಗಳನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಗಾಯಗೊಂಡವರನ್ನೂ ಜಿಲ್ಲಾತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರು ಬೆಳಗಾವಿ ಕಡೆಯಿಂದ ದಾವಣಗೆರೆಯತ್ತ ಹೊರಟಿತ್ತು ಎನ್ನಲಾಗಿದೆ. ಸ್ಥಳಕ್ಕೆ ಗರಗ ಠಾಣೆ ಪಿಎಸ್ಐ ಪ್ರವೀಣ ಗಂಗೋಳ ಸೇರಿದಂತೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ