Sjj*

ಗುರುತೇಜ್ ಶೆಟ್ಟಿ ನಿರ್ದೇಶನದ, ಕಿರಣ್ ರಾಜ್ ನಾಯಕನಾಗಿ ನಟಿಸಿರುವ ಹಾಗೂ ಗೋಲ್ಡನ್ ಗೇಟ್ ಬ್ಯಾನರ್ ಅಡಿಯಲ್ಲಿ ಭಾರತಿ ಸತ್ಯನಾರಾಯಣ್ ನಿರ್ಮಾಣದ “ಜಾಕಿ 42” ಚಿತ್ರಕ್ಕೆ ಪ್ರಾದೇಶಿಕ ಸೆನ್ಸಾರ್ ಮಂಡಳಿ U/A ಪ್ರಮಾಣ ಪತ್ರ ನೀಡಿದೆ. ಇದು ಕುದುರೆ ರೇಸ್ ಹಿನ್ನೆಲೆಯಲ್ಲಿ ನೆಡೆಯುವ ಕಥೆಯಾಗಿದ್ದು ಫ್ಯಾಮಿಲಿ ಎಮೋಷನ್ ಕೂಡ ಚಿತ್ರದಲ್ಲಿ ಗಮನ ಸೆಳೆದಿದೆ.

jockey

ಪೂರ್ಣಪ್ರಮಾಣದಲ್ಲಿ ಹಾರ್ಸ್ ರೇಸ್ ಹಿನ್ನೆಲೆಯಲ್ಲಿ ಬರುತ್ತಿರುವ ಮೊದಲ ಭಾರತೀಯ ಚಿತ್ರವಿದು ಎನ್ನಲಾಗುತ್ತಿದೆ. ಇತ್ತೀಚಿಗೆ ಟಾಕ್ಸಿಕ್ ಚಿತ್ರದೊಂದಿಗೆ ಥಿಯೇಟ್ರಿಕಲ್ ಟ್ರೈಲರ್ ಬಿಡುಗಡೆ ಮಾಡಿ ಪ್ರೇಕ್ಷಕನ ಗಮನ ಸೆಳೆದಿದೆ. ಸದ್ಯದಲ್ಲೇ ಚಿತ್ರದ ಬಿಡುಗಡೆಯ ದಿನಾಂಕ ಘೋಷಣೆಯಾಗಲಿದೆ. ಕಿರಣ್ ರಾಜ್ , ಹೃತಿಕ ಶ್ರೀನಿವಾಸ್ ,ಯುಕ್ತ ಶೆಟ್ಟಿ, ರಾಜೇಂದ್ರ ಕಾರಂತ್,ಬಾಲರಾಜ್ ವಾಡೆ, ಗಿರೀಶ್ ಹೆಗ್ಡೆ ,ದೀಪಕ್ ರೈ ಅರುಣ್ ಆಚಾರ್,ಶಾಂತಲ ಕಾಮತ್ ಮುಂತಾದ ಕಲಾವಿದರು ತಾರಾಬಳಗದಲ್ಲಿದ್ದಾರೆ. ರಾಘವೇಂದ್ರ ಬಿ ಕೋಲಾರ ಛಾಯಾಗ್ರಹಣ, ಉಮೇಶ್ ಆರ್ ಬಿ ಸಂಕಲನ , ವಿನೋದ್ ಯಜಮಾನ್ಯ ಸಂಗೀತ ನಿರ್ದೇಶನ ಹಾಗೂ ಭೂಷಣ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ