ರಾಘವೇಂದ್ರ ಅಡಿಗ ಎಚ್ಚೆನ್.

ನಟಿ ರಮ್ಯಾ ಅವರಿಗೆ ಅಶ್ಲೀಲ ಸಂದೇಶ ಹಾಗೂ ಕಾಮೆಂಟ್‌ಗಳನ್ನು ಮಾಡಿದ್ದ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ವಾಪಸ್ ಪಡೆಯುವಂತೆ ಆರೋಪಿಗಳ ಕುಟುಂಬಸ್ಥರು ಮನವಿ ಮಾಡಿದ್ದು, ಯಾವುದೇ ಕಾರಣಕ್ಕೂ ಕೇಸ್ ವಾಪಸ್ ಪಡೆಯುವುದಿಲ್ಲ ಎಂದು ರಮ್ಯಾ ಸ್ಪಷ್ಟಪಡಿಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳ ಕುಟುಂಬಸ್ಥರು ಕ್ಷಮೆ ಕೋರಿ, ಈ ಬಾರಿ ತಪ್ಪಾಗಿದೆ, ದಯವಿಟ್ಟು ಪ್ರಕರಣ ವಾಪಸ್ ಪಡೆಯಿರಿ ಎಂದು ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಆದರೆ ಈ ಮನವಿಗೆ ರಮ್ಯಾ ಒಪ್ಪಿಗೆ ನೀಡಿಲ್ಲ. ‘ಇದೊಂದು ಪಾಠ ಆಗಬೇಕು. ನಾನು ಯಾವುದೇ ಕಾರಣಕ್ಕೂ ಕೇಸ್ ವಾಪಸ್ ತೆಗೆದುಕೊಳ್ಳಲ್ಲ’ ಎಂದು ಅವರು ಖಡಕ್ಕಾಗಿ ಹೇಳಿದ್ದಾರೆ ಎಂದು ಮೂಲಗಳು ‘ಪಬ್ಲಿಕ್ ಟಿವಿ’ಗೆ ತಿಳಿಸಿವೆ.

ಮೊಬೈಲ್ ಇದೆ ಅಂತ ಹೇಗೆ ಬೇಕಾದರೂ ಕಾಮೆಂಟ್ ಮಾಡಬಹುದಾ?’

ಸೋಷಿಯಲ್ ಮೀಡಿಯಾ ಹಾಗೂ ಮೊಬೈಲ್ ಬಳಸಿಕೊಂಡು ಯಾರ ಬಗ್ಗೆಯಾದರೂ ಮನಬಂದಂತೆ ಕೆಟ್ಟದಾಗಿ ಕಾಮೆಂಟ್ ಮಾಡುವುದು ಸರಿಯಲ್ಲ ಎಂದು ರಮ್ಯಾ ಹೇಳಿದ್ದಾರೆ. ಒಬ್ಬ ಹೆಣ್ಣುಮಗಳ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡುವ ಮೊದಲು ಸಾವಿರ ಬಾರಿ ಯೋಚಿಸುವಂತಾಗಬೇಕು. ಈ ಪ್ರಕರಣ ಎಲ್ಲರಿಗೂ ಒಂದು ಪಾಠವಾಗಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಪ್ರಕರಣದ ವಿಚಾರಣೆಗೆ ಎಷ್ಟು ಬಾರಿ ಸಾಕ್ಷ್ಯ ಹೇಳಲು ಕರೆದರೂ ನ್ಯಾಯಾಲಯಕ್ಕೆ ಹಾಜರಾಗಿ ಸಾಕ್ಷ್ಯ ನೀಡಲು ಸಿದ್ಧವಿರುವುದಾಗಿ ರಮ್ಯಾ ಹೇಳಿದ್ದಾರೆ. ಆದರೆ ಆರೋಪಿಗಳನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಈಗಾಗಲೇ ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಪ್ರಕರಣದ ವಿಚಾರಣೆ 6ನೇ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಆರೋಪಿಗಳ ಕುಟುಂಬಸ್ಥರಿಂದ ಪ್ರಕರಣ ವಾಪಸ್ ಪಡೆಯುವಂತೆ ಮನವಿ ಮಾಡಲಾಗಿದೆ ಎನ್ನಲಾಗಿದೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ