Sj*
ಮೂರು ದಶಕಗಳ ಹಿಂದೆ ಭರ್ಜರಿ ಯಶಸ್ಸು ಕಂಡ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ “ಅಮೇರಿಕಾ ಅಮೇರಿಕಾ” ಚಿತ್ರ ತೆರೆಕಂಡು ಭರ್ಜರಿ ಯಶಸ್ಸು ಕಂಡಿದ್ದು ಎಲ್ಲರಿಗೂ ತಿಳಿದ ಸಂಗತಿ. ಮೂರು ದಶಕಗಳ ನಂತರ ನಾಗತಿಹಳ್ಳಿ ಚಂದ್ರಶೇಖರ್ ಮತ್ತೆ ಅದೇ ಶೀರ್ಷಿಕೆಯ “ಅಮೇರಿಕಾ ಅಮೇರಿಕಾ ೨” ಚಿತ್ರವನ್ನು ನಿರ್ದೇಶಿಸಿದ್ದಾರೆ. ಆದರೆ ಇದು “ಅಮೇರಿಕಾ ಅಮೇರಿಕಾ” ಚಿತ್ರದ ಮುಂದುವರಿದ ಭಾಗ ಅಲ್ಲ.

ನಾಗತಿಹಳ್ಳಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ “ಅಮೇರಿಕಾ ಅಮೇರಿಕಾ ೨” ಚಿತ್ರ ಈ ವಾರ (ಸೆಪ್ಟೆಂಬರ್ 11)ರಂದು ಬಿಡುಗಡೆಯಾಗುತ್ತಿದೆ. ನಾಗತಿಹಳ್ಳಿ ಚಂದ್ರಶೇಖರ್ ಅವರೆ ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಮನೋಮೂರ್ತಿ ಸಂಗೀತ ನಿರ್ದೇಶನ, ಎಸ್ ಕೆ ರಾವ್ ಛಾಯಾಗ್ರಹಣ ಹಾಗೂ ಶ್ರೀ ಕ್ರೇಜಿಮೈಂಡ್ಸ್ ಸಂಕಲನವಿದೆ. ನಿರೂಪ್ ಭಂಡಾರಿ, ಪೃಥ್ವಿ ಅಂಬರ್, ಶಾನ್ವಿ ಶ್ರೀವಾಸ್ತವ್ ಪ್ರಮುಖಪಾತ್ರದಲ್ಲಿ ಅಭಿನಯಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಅಚ್ಯುತಕುಮಾರ್, ರೀತು ಸಿಂಗ್, ಮಂಡ್ಯ ರಮೇಶ್, ಮಾನಸಿ ಸುಧೀರ್ ಮುಂತಾದವರಿದ್ದಾರೆ.





