ಗೌರಿ ಗಣೇಶ ಹಬ್ಬದ ಶುಭಾಶಯಗಳು.
ನಮ್ಮನ್ನ ಪ್ರೀತಿಸುವ ಜೀವಗಳು, ಮಗನನ್ನ ನಮಗೆ ಯಾವಾಗ ತೋರಿಸುತ್ತೀರಿ ಅಂತ ಕೇಳ್ತ ಇದ್ರಿ, ಏನು ಹೆಸರು ಅಂತ ಕೇಳ್ತ ಇದ್ರಿ. ಹಬ್ಬದ ದಿನ, ಇವತ್ತು ಪರಿಚಯಿಸುತ್ತ ಇದೀವಿ.
ಎರೆಯ | EREYA

‘ಎರೆಯ’— ಪುರಾತನ ಕನ್ನಡ ಪರಂಪರೆಯ ಗೌರವಪೂರ್ಣ ಪದ.
ಇದರ ಅರ್ಥ “ಒಡೆಯ, ಸ್ವಾಮಿ, ಅಧಿಪತಿ” —
ಒಂದು ಕಾಲದಲ್ಲಿ ರಾಜರು ಮತ್ತು ಅರಸರನ್ನು ಗೌರವದಿಂದ ಸಂಬೋಧಿಸಲು ಬಳಸುತ್ತಿದ್ದ ಹೆಸರು.
ಇತಿಹಾಸದ ಪುಟಗಳಲ್ಲಿ, ಚಾಲುಕ್ಯರ ಮಹಾರಾಜ ಇಮ್ಮಡಿ ಪುಲಕೇಶಿ ಅವರ ಬಾಲ್ಯದ ಹೆಸರಾಗಿಯೂ Ereya ಎಂಬ ಹೆಸರು ಕಾಣಿಸುತ್ತದೆ.

ಆ ರಾಜರ , ಪಾರಂಪರಿಕ ಮತ್ತು ಶಕ್ತಿಯುತ ಅರ್ಥವನ್ನು ಹೊತ್ತಿರುವ
ನಮ್ಮ ಬದುಕಿನ ಪುಟ್ಟ ಅಧಿಪತಿ…
ನಮ್ಮ ಹೃದಯದ ರಾಜ…
ನಮ್ಮ “ಎರೆಯ”.
ನಿಮ್ಮ ಪ್ರೀತಿ , ಆಶೀರ್ವಾದ ಸದಾ ಇರಲಿ.
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





