– ರಾಘವೇಂದ್ರ ಅಡಿಗ ಎಚ್ಚೆನ್.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ಮತ್ತೊಂದು ಭಾರಿ ಹಿನ್ನಡೆಯಾಗಿದೆ. ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಪ್ರದೋಷ್ ಮಾಫಿ ಸಾಕ್ಷಿಯಾಗುವ  ಅರ್ಜಿಯನ್ನು ಬೆಂಗಳೂರಿನ ಸಿಸಿಹೆಚ್ 59ನೇ ಕೋರ್ಟ್ ಸಮ್ಮತಿಸಿ ಅಂಗೀಕಾರ ಮಾಡಿದೆ.ಜೈಲಿನಲ್ಲಿ ಅಕ್ರಮ ಫೋನ್ ಕರೆ ಮಾಡಿರುವ ಆರೋಪ ಕೇಳಿಬರುತ್ತಿದ್ದಂತೆ, ಪ್ರದೋಷ್ ಮಾಫಿ ಸಾಕ್ಷಿಯಾಗುವ ಪ್ರಕ್ರಿಯೆಯನ್ನು ತಡೆಹಿಡಿಯುವಂತೆ ಕೋರಿ ನಟ ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿ ವಾದ-ಪ್ರತಿವಾದಗಳನ್ನು ಆಲಿಸಿದ ಸಿಸಿಹೆಚ್ 59ನೇ ಕೋರ್ಟ್, ದರ್ಶನ್ ಪರ ಸಲ್ಲಿಕೆಯಾಗಿದ್ದ ಮನವಿಯನ್ನು ಬದಿಗೊತ್ತಿ, ಪ್ರದೋಷ್ ಮಾಫಿ ಸಾಕ್ಷಿ ಅರ್ಜಿಯನ್ನು ಅಂಗೀಕರಿಸಿದೆ. ಇದೇ ವೇಳೆ ನ್ಯಾಯಾಲಯವು ಆರೋಪಿ ಪ್ರದೋಷ್‌ಗೆ ಮಾಫಿ ಸಾಕ್ಷಿಯ ನಿಯಮಗಳು ಹಾಗೂ ಷರತ್ತುಗಳನ್ನು ಸ್ಪಷ್ಟವಾಗಿ ವಿವರಿಸಿದ್ದು, ಹೇಳಿಕೆ ದಾಖಲಿಸಿಕೊಳ್ಳಲು ಶೀಘ್ರದಲ್ಲೇ ದಿನಾಂಕ ನಿಗದಿಪಡಿಸಲಿದೆ. ಈ ಹಿಂದೆ ಹೈಕೋರ್ಟ್, ಪ್ರದೋಷ್ ಮಾಫಿ ಸಾಕ್ಷಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ನೀಡಿದ್ದ ಆದೇಶವನ್ನು ಮಾರ್ಪಡಿಸಿ ಹೊಸ ಆದೇಶ ನೀಡುವಂತೆ ಸೆಷನ್ಸ್ ಕೋರ್ಟ್‌ಗೆ ನಿರ್ದೇಶಿಸಿತ್ತು. ಅದರಂತೆ ಇದೀಗ ಸೆಷನ್ಸ್ ಕೋರ್ಟ್ ಈ ನೂತನ ಆದೇಶವನ್ನು ಹೊರಡಿಸಿದೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ