–  ರಾಘವೇಂದ್ರ ಅಡಿಗ ಎಚ್ಚೆನ್.

‘ಬೇಲ್’ ಸಿನಿಮಾ ಪ್ರಮೋಷನ್‌ಗಾಗಿ ಚಿತ್ರದುರ್ಗಕ್ಕೆ ತೆರಳಿದ್ದ ನಟ ಶಿವರಾಜ್‌ಕುಮಾರ್ ಅವರಿಗೆ ಅಭಿಮಾನಿಗಳು ಅದ್ದೂರಿ ಸ್ವಾಗತ ಕೋರಿದ್ದಾರೆ. ಆದರೆ, ಅಭಿಮಾನಿಗಳ ಸಂಭ್ರಮದ ನಡುವೆ ನಡೆದ ಪಟಾಕಿ ಅವಘಡ ಕೆಲಕಾಲ ಆತಂಕ ಮೂಡಿಸಿತು  ಶಿವರಾಜ್‌ಕುಮಾರ್ ಖಾಸಗಿ ಶೋರೂಂಗೆ ಆಗಮಿಸುತ್ತಿದ್ದಂತೆ ಅಭಿಮಾನಿಗಳು ಪಟಾಕಿ ಸಿಡಿಸಿ ಸ್ವಾಗತಿಸಿದ್ದಾರೆ. ಇದೇ ವೇಳೆ ಫ್ಲವರ್ ಪಾಟ್ ಏಕಾಏಕಿ ಸ್ಫೋಟಗೊಂಡಿದ್ದು, ಸಿಡಿತದ ಪರಿಣಾಮ ಶಿವಣ್ಣ ಅವರ ಮೇಲೂ ಬಿದ್ದಿದೆ.

ಘಟನೆ ನಡೆದ ತಕ್ಷಣ ಸ್ಥಳದಲ್ಲಿದ್ದ ಅಭಿಮಾನಿಗಳು ಹಾಗೂ ಸಿಬ್ಬಂದಿ ಆತಂಕಗೊಂಡಿದ್ದಾರೆ. ಆದರೆ ಅದೃಷ್ಟವಶಾತ್ ಶಿವರಾಜ್‌ಕುಮಾರ್ ಅವರಿಗೆ ಯಾವುದೇ ಗಾಯವಾಗಿಲ್ಲ. ಅವರು ಸುರಕ್ಷಿತವಾಗಿದ್ದು, ಬಳಿಕ ಅಭಿಮಾನಿಗಳೊಂದಿಗೆ ಮಾತನಾಡಿದ್ದಾರೆ.

ನಂತರ ‘ಬೇಲ್’ ಸಿನಿಮಾ ಕುರಿತು ಮಾತನಾಡಿದ ಶಿವರಾಜ್‌ಕುಮಾರ್, ಚಿತ್ರಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿರುವುದು ಸಂತಸ ತಂದಿದೆ ಎಂದು ಹೇಳಿದರು. ಜನರನ್ನು ನೇರವಾಗಿ ಭೇಟಿ ಮಾಡಿ ಪ್ರತಿಕ್ರಿಯೆ ತಿಳಿದುಕೊಳ್ಳಲು ಚಿತ್ರದುರ್ಗಕ್ಕೆ ಬಂದಿರುವುದಾಗಿ ತಿಳಿಸಿದರು.

ಕುಟುಂಬ ಸಮೇತ ಕುಳಿತು ನೋಡುವಂತಹ ಸಿನಿಮಾ ‘ಬೇಲ್’ ಎಂದು ಹೇಳಿದ ಶಿವಣ್ಣ, ಸಿನಿಮಾ ಯಶಸ್ಸಿಗೆ ಬಜೆಟ್‌ ಒಂದೇ ಮಾನದಂಡವಲ್ಲ. ದೊಡ್ಡ ಬಜೆಟ್ ಸಿನಿಮಾ ಮಾಡಿದರೆ ಮಾತ್ರ ಯಶಸ್ಸು ಸಿಗುತ್ತದೆ ಎನ್ನುವುದು ತಪ್ಪು ಕಲ್ಪನೆ ಎಂದರು.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ