Sj*

ಧುವನ್ ಫಿಲಂಸ್ ಲಾಂಛನದಲ್ಲಿ ಅಖಿಲೇಶ್ ಎಂ ಅವರು ನಿರ್ಮಿಸಿರುವ , ವಿಜಯ್ ಪಾಳೇಗಾರ್ ನಿರ್ದೇಶಿಸಿರುವ ಹಾಗೂ ಸುಪ್ರೀಂ ಹೀರೋ ಶಶಿಕುಮಾರ್ ಅವರ ಪುತ್ರ ಆದಿತ್ಯ ಶಶಿಕುಮಾರ್ ನಾಯಕನಾಗಿ ನಟಿಸಿರುವ “ರಾಶಿ” ಚಿತ್ರದ ಪ್ರಮೋಷನ್ ಗೆ ಮಂಡ್ಯದ ಶ್ರೀಕಾಳಿಕಾಂಬ ದೇವಸ್ಥಾನದಲ್ಲಿ ಚಾಲನೆ ನೀಡಲಾಗಿದೆ‌‌. ನಾಯಕ ಆದಿತ್ಯ ಶಶಿಕುಮಾರ್, ನಾಯಕಿ ಸಮೀಕ್ಷ, ವಿನೋದ್ ಗೊಬ್ಬರಗಾಲ, ಉಗ್ರಂ ರವಿ, ಪ್ರವೀಣ್, ನಿರ್ದೇಶಕ ವಿಜಯ್ ಪಾಳೇಗಾರ್ ಹಾಗೂ ಮಂಡ್ಯದ ಚಿದಂಬರಂ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಚಿತ್ರದ ಟ್ಯಾಬ್ಲೊ ಮಂಡ್ಯ, ಮೈಸೂರು, ಹಾಸನ, ದಾವಣಗೆರೆ, ಹುಬ್ಬಳ್ಳಿ ಹಾಗೂ ಶಿವಮೊಗ್ಗ ಮುಂತಾದ ಕಡೆ ಸಂಚರಿಸಲಿದೆ. ಹುಬ್ಬಳ್ಳಿಯಲ್ಲಿ ಬೈಕ್ ರ‍್ಯಾಲಿ ಸಹ ನಡೆಯಲಿದೆ.

promotion1

ಈಗಾಗಲೇ ಚಿತ್ರೀಕರಣ ಪೂರೈಸಿ ತೆರೆಗೆ ಬರಲು ಅಣಿಯಾಗಿರುವ ಈ ಚಿತ್ರವನ್ನು ಅಖಿಲೇಶ್ ಅವರು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಕಾಮಿಡಿ, ಲವ್ ಹಾಗೂ ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ಮಾಪಕ ಅಖಿಲೇಶ್ ಕಥೆ ಬರೆದಿದ್ದಾರೆ. ಚಿತ್ರಕಥೆ ನಿರ್ದೇಶಕ ವಿಜಯ್ ಪಾಳೇಗಾರ್ ಅವರದು. ನವೀನ್ ಸೂರ್ಯ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ಮಹೇಶ್ ಸಾತನೂರು ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

ಆದಿತ್ಯ ಶಶಿಕುಮಾರ್ ಅವರಿಗೆ ನಾಯಕಿಯಾಗಿ ಸಮೀಕ್ಷ ನಟಿಸಿದ್ದಾರೆ. ರಮೇಶ್ ಇಂದಿರಾ, ತಬಲ‌ ನಾಣಿ, ವೀಣಾ ಸುಂದರ್, ಮಂಜು ಪಾವಗಡ, ಕರಿ ಸುಬ್ಬು, ವಿನೋದ್ ಗೊಬ್ಬರಗಾಲ, ಹುಲಿ ಕಾರ್ತಿಕ್, ವರ್ಧನ್ ತೀರ್ಥಹಳ್ಳಿ, ಉಗ್ರಂ ರವಿ, ಭಜರಂಗಿ ಪ್ರಸನ್ನ ಮುಂತಾದವರು “ರಾಶಿ” ಚಿತ್ರದ ತಾರಾಬಳಗದಲ್ಲಿದ್ದಾರೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ