ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದಲ್ಲಿ ಸೀತಾ ದೇವಿಯಾಗಿ ನಟಿಸಿರುವ ಸಾಯಿ ಪಲ್ಲವಿ ಅವರ ಹೊಸ ಪ್ರೋಮೋ ಬಿಡುಗಡೆಯಾಗಿದೆ.

ದೈವಿಕ ಹಾಗೂ ಶಾಂತ ಸ್ವಭಾವದ ಸಾಯಿ ಪಲ್ಲವಿ ಅವರ ಲುಕ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನವೆಂಬರ್ 5 ರಂದು ಸಿನಿಮಾ ತೆರೆಕಾಣಲಿದೆ.

ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾ ಬಿಡುಗಡೆಗೆ ದಿನಗಣನೆ ಅರಂಭವಾಗಿದ್ದು, ಚಿತ್ರತಂಡವು ಪ್ರಮುಖ ಪಾತ್ರಗಳ ಪರಿಚಯವನ್ನು ಒಂದೊಂದಾಗಿ ಮಾಡುತ್ತಿದೆ. ಇದೀಗ ಚಿತ್ರದಲ್ಲಿ ಸೀತಾ ದೇವಿಯಾಗಿ ನಟಿಸಿರುವ ನಟಿ ಸಾಯಿ ಪಲ್ಲವಿ ಅವರ ಕ್ಯಾರೆಕ್ಟರ್ ಪ್ರೋಮೋ ಬಿಡುಗಡೆಯಾಗಿದೆ. ರವಿ ದುಬೆ ಅವರ ಲಕ್ಷ್ಮಣನ ಪೋಸ್ಟರ್ ಬೆನ್ನಲ್ಲೇ ಈ ವಿಡಿಯೋ ಹೊರಬಂದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್​ ಆಗಿದೆ.

ಸಾಯಿ ಪಲ್ಲವಿ ಅವರ ಕಾಸ್ಟಿಂಗ್ ಬಗ್ಗೆ ಆರಂಭದಲ್ಲಿ ಕೆಲವರಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದವು. ಆದರೆ ಹೊಸ ಪ್ರೋಮೋ ಬಿಡುಗಡೆಯಾದ ಬಳಿಕ ಎಲ್ಲರ ಅಭಿಪ್ರಾಯ ಬದಲಾಗಿದೆ. ಪ್ರೋಮೋದಲ್ಲಿ ಸಾಯಿ ಪಲ್ಲವಿ ಅವರ ಹಾವಭಾವ ಹಾಗೂ ಸೌಮ್ಯ ಸ್ವಭಾವ ಎಲ್ಲರ ಗಮನ ಸೆಳೆದಿದೆ.

 

ಪ್ರೋಮೋ ಹಂಚಿಕೊಂಡಿರುವ ಚಿತ್ರತಂಡ, ‘ಭೂಮಿ ಪುತ್ರಿ, ಮಿಥಿಲೆಯ ರಾಜಕುಮಾರಿ. ಪ್ರೀತಿಯಿಂದ ಬಂಧಿತಳಾಗಿ, ಧರ್ಮದಿಂದ ಮಾರ್ಗದರ್ಶಿಸಲ್ಪಟ್ಟವಳು’ ಎಂದು ಬರೆದುಕೊಂಡಿದೆ. ವಿಡಿಯೋದಲ್ಲಿ ಸಾಯಿ ಪಲ್ಲವಿ ಅವರ ಮುಖದಲ್ಲಿನ ಶಾಂತತೆ ಮತ್ತು ದೈವಿಕ ಕಳೆ ಪ್ರೇಕ್ಷಕರನ್ನು ಮಂತ್ರಮುಗ್ಧರನ್ನಾಗಿಸಿದೆ.

ಈ ಸಿನಿಮಾದಲ್ಲಿ ರಣ್‌ಬೀರ್ ಕಪೂರ್ ರಾಮನಾಗಿ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಯಶ್ ರಾವಣನ ಪಾತ್ರದಲ್ಲಿ ಹಾಗೂ ಸಾಯಿ ಪಲ್ಲವಿ ಸೀತೆಯಾಗಿ ಅಭಿನಯಿಸಿದ್ದಾರೆ. ನಿತೇಶ್ ತಿವಾರಿ ನಿರ್ದೇಶನದ ಈ ಚಿತ್ರವು ಎರಡು ಭಾಗಗಳಲ್ಲಿ ತೆರೆಗೆ ಬರಲಿದೆ. ಮೊದಲ ಭಾಗವು ಇದೇ ನವೆಂಬರ್ 5ರಂದು ವಿಶ್ವದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

ಚಿತ್ರದ ಬಿಡುಗಡೆಗೂ ಮುನ್ನವೇ ಮುಂಗಡ ಬುಕಿಂಗ್ ಭರ್ಜರಿಯಾಗಿ ನಡೆದಿದೆ. ಸ್ಟಾರ್ ನಟರ ಬಹುಕೋಟಿ ವೆಚ್ಚದ ಈ ಸಿನಿಮಾದ ಮೇಲೆ ಪ್ರೇಕ್ಷಕರಿಗೆ ಭಾರೀ ನಿರೀಕ್ಷೆಗಳಿವೆ. ಮೊದಲ ಭಾಗದ ಬಿಡುಗಡೆಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ