ನಂದಿನಿ ಹಾಲು ಮತ್ತು ಮೊಸರಿನ ದರ ಏರಿಕೆಗೆ ಜನಾಕ್ರೋಶ ವ್ಯಕ್ತವಾಗುತ್ತಿದ್ದು, ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ನಂದಿನಿ ಮೊಸರಿನ ಬೆಲೆಯನ್ನು ಸ್ವಲ್ಪ ಕಡಿಮೆ ಮಾಡುವಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು  ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇತ್ತೀಚಿನ ಬೆಲೆ ಏರಿಕೆ ಜನರಿಗೆ ಹೆಚ್ಚು ಹೊರೆಯಾಗುತ್ತಿದೆ. ಹಾಲು ಮತ್ತು ಮೊಸರು ದೈನಂದಿನ ಬಳಕೆಯ ಅಗತ್ಯ ವಸ್ತುವಾಗಿದ್ದು ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿತ್ತು. ಬೆಲೆ ಇಳಿಸುವಂತೆ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿದೆ.

ಈ ಕುರಿತು ಪತ್ರಕರ್ತರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮೊಸರಿನ ಬೆಲೆಯನ್ನು ಸ್ವಲ್ಪ ಕಡಿಮೆ ಮಾಡುವಂತೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.

ಹಾಲಿನ ದರದಲ್ಲಿ ಯಾವುದೇ ಬದಲಾವಣೆ ಮಾಡುವ ಪ್ರಸ್ತಾಪವಿಲ್ಲ. ಆದರೆ ನಂದಿನಿ ಮೊಸರಿನ ಬೆಲೆಯನ್ನು ಸ್ವಲ್ಪ ಇಳಿಸುವ ಕುರಿತು ಸರ್ಕಾರ ಚಿಂತನೆ ನಡೆಸಿದೆ. ಈ ನಿಟ್ಟಿನಲ್ಲಿ ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದರೊಂದಿಗೆ ಲೀಟರ್ ಮೊಸರಿಗೆ 14 ರೂ. ಹೆಚ್ಚಿಸಿದ್ದನ್ನು 12 ರೂ.ಗೆ ಇಳಿಕೆ ಮಾಡಲಾಗುತ್ತಿದೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ