– ರಾಘವೇಂದ್ರ ಅಡಿಗ ಎಚ್ಚೆನ್.

ಕೋಮಲ್‌ ಕುಮಾರ್‌, ಮೇಘನಾ ರಾಜ್‌, ಅನುಷಾ ರೈ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ʼಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಟ್‌ʼ ಚಿತ್ರದ ಫಸ್ಟ್ ಲುಕ್ ’60 ML’ ಟೀಸರ್‍ ಇತ್ತೀಚೆಗೆ ಬಿಡುಗಡೆ ಆಗಿದೆ.

ನಟ ಮತ್ತು ರಾಜ್ಯ ಸಭಾ ಸದಸ್ಯ ಜಗ್ಗೇಶ್‍ ಟೀಸರ್‍ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

1001969581

ಈ ಚಿತ್ರವನ್ನು ಸಂದೇಶ್‌ ಶೆಟ್ಟಿ ಆಜ್ರಿ ಕಥೆ ಬರೆದು ನಿರ್ದೇಶಿಸಿದ್ದು, ವಿಕಾಸ್‌ ಶೆಟ್ಟಿ ನಿರ್ಮಿಸುತ್ತಿದ್ದಾರೆ. ಈ ಚಿತ್ರದಲ್ಲಿ ಕೋಮಲ್‌ ದ್ವಿಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

1001969583

‘ಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಡ್‌ʼ ಚಿತ್ರದಲ್ಲಿ ಪ್ರಮೋದ್‌ ಶೆಟ್ಟಿ, ಪ್ರಕಾಶ್‌ ತುಮ್ಮಿನಾಡ್‌, ವಜ್ರಧೀರ್‌ ಜೈನ್‌, ರಾಘು ರಾಮನಕೊಪ್ಪ, ಎಂ. ಕೆ. ಮಠ, ಪ್ರಶಾಂತ್ ಸಿದ್ದಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ನಿರ್ದೇಶಕ ಸಂದೇಶ್‌ ಶೆಟ್ಟಿ ಆಜ್ರಿ ಕೂಡ ಚಿತ್ರದ ಪಾತ್ರವೊಂದಕ್ಕೆ ತೆರೆಮೇಲೆ ಬಣ್ಣ ಹಚ್ಚಿದ್ದಾರೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ