ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ.
ಯೋಜನೆಯಡಿ ಬಾಕಿ ಉಳಿದಿದ್ದ 34, 35 ಮತ್ತು 36ನೇ ಕಂತುಗಳ ಹಣವನ್ನು ಬಿಡುಗಡೆ ಮಾಡಲಾಗಿದ್ದು, ಒಟ್ಟು ₹7,405.86 ಕೋಟಿ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಿದೆ ಎಂದು ತಿಳಿಸಲಾಗಿದೆ.
ಗೃಹಲಕ್ಷ್ಮಿ ಯೋಜನೆಯಡಿ ಅರ್ಹ ಮಹಿಳಾ ಫಲಾನುಭವಿಗಳಿಗೆ ಪ್ರತಿ ತಿಂಗಳು ₹2,000 ಆರ್ಥಿಕ ನೆರವು ನೀಡಲಾಗುತ್ತಿದೆ.
ಈಗಾಗಲೇ 33 ಕಂತುಗಳ ಹಣ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮೆಯಾಗಿದ್ದು, ಇದೀಗ ಹೆಚ್ಚುವರಿಯಾಗಿ ಮೂರು ಕಂತುಗಳ ಹಣ ಬಿಡುಗಡೆ ಮಾಡಲಾಗಿದೆ.
ಈ ಹಣ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗುವುದರಿಂದ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮಹಿಳೆಯರಿಗೆ ಆರ್ಥಿಕವಾಗಿ ನೆರವಾಗಲಿದೆ.
ಹಣ ಜಮೆಯಾದ ಬಗ್ಗೆ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆ ಅಥವಾ ಪಾಸ್ಬುಕ್ ಮೂಲಕ ಪರಿಶೀಲಿಸಿಕೊಳ್ಳಬಹುದು.
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





