ಸ್ಯಾಂಡಲ್​ವುಡ್​ನ ‘ಕಿಸ್’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿಕೊಟ್ಟ ದಕ್ಷಿಣ ಭಾರತದ ಖ್ಯಾತ ನಟಿ ಶ್ರೀಲೀಲಾ ತಮ್ಮ ವೃತ್ತಿಜೀವನದ ಆಯ್ಕೆಗಳ ಬಗ್ಗೆ ಒಂದು ಕುತೂಹಲಕಾರಿ ವಿಷಯ ಹಂಚಿಕೊಂಡಿದ್ದಾರೆ.

ಹೈದರಾಬಾದ್‌ನಲ್ಲಿ ನಡೆದ ‘ಓಂ’ (OM) ಚಿತ್ರದ ಪೂರ್ವ-ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ನಟಿ ಶ್ರೀಲೀಲಾ, ತಾವು ಚಿಕ್ಕ ವಯಸ್ಸಿನಲ್ಲೇ ಚಿತ್ರರಂಗಕ್ಕೆ ಪ್ರವೇಶಿಸಿದ್ದರ ಬಗ್ಗೆ ಮತ್ತು ಸಿನಿಮಾ ಆಯ್ಕೆಗಳ ಬಗ್ಗೆ ಹೆಚ್ಚು ಯೋಚಿಸದೆ ಒಪ್ಪಿಕೊಂಡಿದ್ದರ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ.

ಧನುಷ್, ಸಾಯಿ ಪಲ್ಲವಿ ಅಭಿನಯದ ‘ಓಂ’ ಸಿನಿಮಾ ಸಮಾರಂಭದಲ್ಲಿ ಮಾತನಾಡಿದ ನಟಿ, ಚಿಕ್ಕ ವಯಸ್ಸಿನಲ್ಲಿ ಕಥೆಗಳ ಆಯ್ಕೆ ವಿಚಾರದಲ್ಲಿ ನಾನು ದೊಡ್ಡ ತಪ್ಪು ಮಾಡಿದೆ. ಇನ್ನುಮುಂದೆ ವಿಭಿನ್ನ ಕಥೆಗಳನ್ನು ಮಾತ್ರ ಆಯ್ಕೆ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ.Sreeleela (4)“ನಾನು ಬಹಳ ಚಿಕ್ಕ ವಯಸ್ಸಿನಲ್ಲೇ ಚಿತ್ರರಂಗಕ್ಕೆ ಬಂದೆ. ನನಗೆ ಸಿಕ್ಕ ಸಿನಿಮಾಗಳನ್ನೆಲ್ಲಾ ಮಾಡುತ್ತಾ ಹೋದೆ. ಆಗ ಕಥೆಗಳನ್ನು ಅಳೆದು ತೂಗಿ ಆಯ್ಕೆ ಮಾಡುವಷ್ಟು ಪ್ರಬುದ್ಧತೆ ನನಗಿರಲಿಲ್ಲ. ಬಂದ ಸಿನಿಮಾ ಅವಕಾಶಗಳನ್ನೆಲ್ಲಾ ಒಪ್ಪಿಕೊಂಡು ನಟಿಸಿದ್ದೆ. ಆದರೂ ಪ್ರೇಕ್ಷಕರು ನನ್ನ ಮೇಲೆ ಅಪಾರ ಪ್ರೀತಿ ತೋರಿಸಿದ್ದಾರೆ. ಆದರೆ, ಈಗ ನನ್ನ ವೃತ್ತಿಜೀವನದ ಬಗ್ಗೆ ಗಂಭೀರವಾಗಿ ಯೋಚಿಸುತ್ತಿದ್ದೇನೆ. ನಾನು ಎಲ್ಲಿ ತಪ್ಪು ಮಾಡಿದ್ದೇನೆ ಎಂಬುದನ್ನು ಅರಿತಿದ್ದೇನೆ. ಇನ್ಮುಂದೆ ಸ್ವತಃ ನಿರ್ಧಾರ ತೆಗೆದುಕೊಂಡು, ನನಗೆ ಇಷ್ಟವಾದ ಹಾಗೂ ವಿಭಿನ್ನ ಕಥೆಗಳನ್ನು ಮಾತ್ರ ಆಯ್ಕೆ ಮಾಡಿಕೊಳ್ಳುತ್ತೇನೆ” ಎಂದು ಅವರು ಹೇಳಿದ್ದಾರೆ.

ಶ್ರೀಲೀಲಾ ತೆಲುಗು ಚಿತ್ರರಂಗದಲ್ಲಿ ಅತ್ಯಂತ ಬೇಡಿಕೆಯಿರುವ ನಟಿಯರಲ್ಲಿ ಒಬ್ಬರು. ಅನೇಕ ಪ್ರಮುಖ ನಟರೊಂದಿಗೆ ತೆರೆ ಹಂಚಿಕೊಂಡಿದ್ದಾರೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ