ಬೆಂಗಳೂರಿನ ರಾಗಿಗುಡ್ಡ ಮೆಟ್ರೋ ನಿಲ್ದಾಣದ (ಹಳದಿ ಮಾರ್ಗ) ಸಮೀಪವಿರುವ ಕಸ ಹಾಕುವ ಸ್ಥಳದಲ್ಲಿ ಶನಿವಾರ (ನವೆಂಬರ್ 21) ಸಂಜೆ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ನಿಲ್ದಾಣದ ಪಕ್ಕದಲ್ಲೇ ಇದ್ದ ತ್ಯಾಜ್ಯ ವಿಲೇವಾರಿ ಸ್ಥಳದಲ್ಲಿ ಸಂಜೆ ಸುಮಾರು 6:20ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಸುತ್ತಮುತ್ತ ದಟ್ಟವಾದ ಹೊಗೆ ಆವರಿಸಿ, ಸ್ಥಳೀಯ ನಿವಾಸಿಗಳು ಮತ್ತು ಮೆಟ್ರೋ ಪ್ರಯಾಣಿಕರಲ್ಲಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.
ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಮೆಟ್ರೋ ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ.
ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ದೊಡ್ಡ ಮಟ್ಟದ ಅನಾಹುತ ಸಂಭವಿಸಿಲ್ಲ. ಅಗ್ನಿ ಅವಘಡಕ್ಕೆ ನಿಖರ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ. ಯಾರಾದರೂ ಬೆಂಕಿ ಹಚ್ಚಿದ್ದರೋ ಅಥವಾ ಶಾರ್ಟ್ ಸರ್ಕ್ಯೂಟ್ನಿಂದ ಈ ದುರ್ಘಟನೆ ಸಂಭವಿಸಿದೆಯೋ ಎಂಬುದು ತಿಳಿದುಬಂದಿಲ್ಲ. ಘಟನೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.





