Sj*

ಮಂಡಿಮನೆ ಟಾಕೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ‘ಫಸ್ಟ್ ರ‍್ಯಾಂಕ್ ರಾಜು’ ಖ್ಯಾತಿಯ ನಟ ಗುರುನಂದನ್ ಹಾಗೂ ‘ಪ್ರೇಮದ ಊರಲಿ’ ಖ್ಯಾತಿಯ ನಟಿ ತಪಸ್ವಿನಿ ಪೂಣಚ್ಛ ನಾಯಕ-ನಾಯಕಿಯಾಗಿ ಅಭಿನಯಿಸಿರುವ ‘MR ಜಾಕ್’ ಚಿತ್ರ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿದೆ. ಸುಮಂತ್ ನಿರ್ದೇಶನದ ಈ ಚಿತ್ರ ಡಿಸೆಂಬರ್ 4ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಪ್ರೇಕ್ಷಕರ ಗಮನ ಸೆಳೆದಿದ್ದು, ಚಿತ್ರತಂಡದ ನಿರೀಕ್ಷೆಯನ್ನು ಹೆಚ್ಚಿಸಿವೆ.

ಇದೀಗ ಚಿತ್ರದ ಮತ್ತೊಂದು ಮನಮೋಹಕ ಹಾಡು ‘ಈ ಮಿಡಿತಕ್ಕೆ ಸೆಳೆತಕ್ಕೆ’ ಬಿಡುಗಡೆಯಾಗಿದೆ. ಖ್ಯಾತ ಸಾಹಿತಿ ಜಯಂತ್ ಕಾಯ್ಕಿಣಿ ಅವರು ಈ ಹಾಡಿಗೆ ಸಾಹಿತ್ಯ ರಚಿಸಿದ್ದು, ರಜತ್ ಹೆಗಡೆ ತಮ್ಮ ಸುಮಧುರ ಗಾಯನದ ಮೂಲಕ ಹಾಡಿಗೆ ಜೀವ ತುಂಬಿದ್ದಾರೆ. ಕಿರಣ್ ರವೀಂದ್ರನಾಥ್ ಸಂಗೀತ ಸಂಯೋಜಿಸಿರುವ ಈ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ.

1000472611

ಜಯಂತ್ ಕಾಯ್ಕಿಣಿ ಅವರ ಮನಮಿಡಿಯುವ ಸಾಹಿತ್ಯ, ರಜತ್ ಹೆಗಡೆ ಅವರ ಸುಮಧುರ ಗಾಯನ ಹಾಗೂ ಕಿರಣ್ ರವೀಂದ್ರನಾಥ್ ಅವರ ಸಂಗೀತ ಸಂಯೋಜನೆಯ ಸಂಗಮವಾಗಿರುವ ಈ ಹಾಡು ಬಿಡುಗಡೆಯಾದ ಕ್ಷಣದಿಂದಲೇ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಾಡು ಹೆಚ್ಚಿನ ವೀಕ್ಷಣೆ ಪಡೆಯುತ್ತಿದ್ದು, ಸಂಗೀತ ಪ್ರಿಯರ ಗಮನ ಸೆಳೆಯುತ್ತಿದೆ.

ಹಾಡಿನ ನೃತ್ಯ ಸಂಯೋಜನೆ ಹಾಗೂ ನಿರ್ದೇಶನವನ್ನು ಸುಮಂತ್ ನಿರ್ವಹಿಸಿದ್ದಾರೆ. ಶಿವಸೇನ ಅವರ ಛಾಯಾಗ್ರಹಣ ಮತ್ತು ವಿಜಯ್ ರಾಜ್ ಅವರ ಸಂಕಲನ ಹಾಡಿಗೆ ಮತ್ತಷ್ಟು ಮೆರುಗು ನೀಡಿದೆ.

ಆಕರ್ಷಕ ಹಾಡುಗಳು, ಕುತೂಹಲಕಾರಿ ಟ್ರೇಲರ್ ಹಾಗೂ ವಿಭಿನ್ನ ಕಥಾಹಂದರದೊಂದಿಗೆ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚಿಸಿರುವ ‘MR ಜಾಕ್’ ಚಿತ್ರ ಡಿಸೆಂಬರ್ 4ರಂದು ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಸಂಗೀತ, ಪ್ರೇಮ ಹಾಗೂ ಮನರಂಜನೆಯ ಸಮ್ಮಿಲನವಾಗಿರುವ ಈ ಚಿತ್ರ ಪ್ರೇಕ್ಷಕರ ಮನಗೆಲ್ಲುವ ನಿರೀಕ್ಷೆಯಿದೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ