ಸ್ಯಾಂಡಲ್ವುಡ್ನ “45” ಸಿನಿಮಾದ ಗ್ರ್ಯಾಂಡ್ ಟ್ರೈಲರ್ ಲಾಂಚ್ ಕಾರ್ಯಕ್ರಮವು ಬೆಂಗಳೂರಿನ ಬಸವನಗುಡಿಯ ಶ್ರೀನಿವಾಸನಗರ ಮೈದಾನದಲ್ಲಿ ನಡೆಯಿತು.
ಜನರ ಸಮ್ಮುಖದಲ್ಲಿ ನಡೆದ ದೊಡ್ಡ ಈವೆಂಟ್ನಲ್ಲಿ, ರಾಜ್ಯದ ಏಳು ಜಿಲ್ಲೆಗಳಲ್ಲಿ ಏಕಕಾಲಕ್ಕೆ 45 ಸಿನಿಮಾದ ಟ್ರೈಲರ್ ಬಿಡುಗಡೆ ಮಾಡಲಾಯಿತು. ಈ ವೇಳೆ ನಟರಾದ ಶಿವಣ್ಣ, ಉಪೇಂದ್ರ, ರಾಜ್ ಬಿ ಶೆಟ್ಟಿ ಹಾಗೂ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಭಾಗಿಯಾಗಿದ್ದರು.
45 ಸಿನಿಮಾದ ಟ್ರೈಲರ್ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಅರ್ಜುನ್ ಜನ್ಯಾ ನಿರೀಕ್ಷೆಗೂ ಮೀರಿದ ಸಿನಿಮಾ ಕೊಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಟ್ರೈಲರ್ನ ಮೇಜರ್ ಹೈಲೈಟ್ ಅಂದ್ರೆ ಶಿವಣ್ಣ ಹುಡುಗಿಯ ಲುಕ್ನಲ್ಲಿ ಕಾಣಿಸಿಕೊಂಡಿದ್ದು, ಸಿನಿಮಾ ಮೇಲೆ ಮತ್ತಷ್ಟು ಕುತೂಹಲ ಹುಟ್ಟಲು ಕಾರಣವಾಗಿದೆ. ಟ್ರೈಲರ್ 15 ಲಕ್ಷಕ್ಕೂ ಅಧಿಕ ವೀವ್ಸ್ ಪಡೆದುಕೊಂಡಿದೆ.
ಅರ್ಜುನ್ ಜನ್ಯಾ ಅವರ ಚೊಚ್ಚಲ ನಿರ್ದೇಶನದ ಈ ಚಿತ್ರದಲ್ಲಿ ಶಿವಣ್ಣ, ಉಪೇಂದ್ರ, ರಾಜ್ ಬಿ ಶೆಟ್ಟಿ, ಪ್ರಮೋದ್ ಶೆಟ್ಟಿ ಹಾಗೂ ಸುಧಾರಾಣಿ ಪ್ರಮುಖ ಪಾತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ಎಂ ರಮೇಶ್ ರೆಡ್ಡಿ ಬಂಡವಾಳ ಹಾಕಿದ್ದಾರೆ.





