'ಘೋಸ್ಟ್' ನಂತರ ನಿರ್ದೇಶಕ ಶ್ರೀನಿ ಮತ್ತು ಶಿವರಾಜ್‌ಕುಮಾರ್ ಮತ್ತೆ 'ಎ ಫಾರ್ ಆನಂದ್' ಚಿತ್ರದ ಮೂಲಕ ಒಂದಾಗುತ್ತಿದ್ದಾರೆ. ಈ ಚಿತ್ರ ಹ್ಯಾಟ್ರಿಕ್ ಹೀರೋ ಅವರ ವೃತ್ತಿಜೀವನದಲ್ಲಿ ಭಾವನಾತ್ಮಕ ಮೌಲ್ಯ ಹೊಂದಿರುವ ಶೀರ್ಷಿಕೆಯಾಗಿದೆ.

ಗೀತಾ ಪಿಕ್ಚರ್ಸ್ ಈ ಪ್ರಾಜೆಕ್ಟ್ ಪ್ರಾರಂಭಿಸಲು ಸಿದ್ಧತೆ ನಡೆಸುತ್ತಿದ್ದು, ಶ್ರೀನಿ ನಿರ್ದೇಶನದ 'ಎ ಫಾರ್ ಆನಂದ್' ಸಿನಿಮಾವನ್ನು ಇನ್ನಷ್ಟು ವಿಶೇಷವಾಗಿಸಲು ಹೆಚ್ಚುವರಿ ಪ್ರಯತ್ನ ಮಾಡಲಾಗುತ್ತಿದೆ. ಮೂಲಗಳ ಪ್ರಕಾರ, ಚಿತ್ರದಲ್ಲಿ ಪ್ರಮುಖ ಪಾತ್ರಕ್ಕಾಗಿ ಮಾಧುರಿ ದೀಕ್ಷಿತ್ ಅವರನ್ನು ಸಂಪರ್ಕಿಸಿದ್ದಾರೆ ಎನ್ನಲಾಗಿದೆ. ಚರ್ಚೆಗಳು ಸದ್ದಿಲ್ಲದೆ ನಡೆಯುತ್ತಿವೆ, ಆದರೆ ಇನ್ನೂ ಅಧಿಕೃತವಾಗಿ ಧೃಢಪಟ್ಟಿಲ್ಲ.

ಚಿತ್ರದ ತಾರಾಗಣವನ್ನು ಗೌಪ್ಯವಾಗಿಡಲಾಗಿದ್ದು, ಮಾತುಕತೆಗಳು ಕಾರ್ಯರೂಪಕ್ಕೆ ಬಂದರೆ, 'ಎ ಫಾರ್ ಆನಂದ್' ಶಿವರಾಜ್‌ಕುಮಾರ್ ಮತ್ತು ಮಾಧುರಿ ದೀಕ್ಷಿತ್ ತೆರೆಯ ಮೇಲೆ ಕಾಣಿಸಿಕೊಳ್ಳಲಿದ್ದಾರೆ.

ಮಾಧುರಿ ದೀಕ್ಷಿತ್ ದಕ್ಷಿಣದಾದ್ಯಂತ ಚಲನಚಿತ್ರ ನಿರ್ಮಾಪಕರಿಂದ ಹಲವು ಆಫರ್‌ಗಳನ್ನು ಪಡೆದಿದ್ದಾರೆ. ಆದರೆ ಯಾರ ಸಿನಿಮಾದಲ್ಲಿಯೂ ಅವರು ನಟಿಸಿಲ್ಲ. ಬಾಲಿವುಡ್ ಐಕಾನ್ ಅನ್ನು ಕನ್ನಡ ಚಿತ್ರರಂಗಕ್ಕೆ ತರುವಲ್ಲಿ ಶ್ರೀನಿ ಯಶಸ್ವಿಯಾಗುತ್ತಾರೆಯೇ ಎಂಬುದು ಮಾತ್ರ ಸಸ್ಪೆನ್ಸ್​.

ಎ ಫಾರ್ ಆನಂದ್ ಕುರಿತು ಮಾತನಾಡಿರುವ ಶ್ರೀನಿ, ಈ ಚಿತ್ರವನ್ನು ಶಿಕ್ಷಕ-ವಿದ್ಯಾರ್ಥಿ ಬಾಂಧವ್ಯದ ಕಥೆ ಎಂದಿದ್ದಾರೆ. ಶಿವರಾಜ್‌ಕುಮಾರ್ ಅವರ ಆತ್ಮೀಯತೆ ಮತ್ತು ವಿಶಿಷ್ಟ ಪರದೆಯ ಉಪಸ್ಥಿತಿಯು ಆನಂದ್ ಪಾತ್ರಕ್ಕೆ ಅವರು ಸೂಕ್ತ ಆಯ್ಕೆಯನ್ನಾಗಿ ಮಾಡಿದೆ ಎಂದು ಹೇಳಿದ್ದಾರೆ. ಗೀತಾ ಪಿಕ್ಚರ್ಸ್ ಬ್ಯಾನರ್​ನಡಿ ಗೀತಾ ಶಿವರಾಜ್‌ಕುಮಾರ್ ನಿರ್ಮಿಸಿರುವ ಈ ಚಿತ್ರವು ಕಳೆದ ತಿಂಗಳು ಶಿವರಾಜ್‌ಕುಮಾರ್ ಅವರ ಹುಟ್ಟುಹಬ್ಬದಂದು ಅನಾವರಣಗೊಂಡಿತ್ತು ಹಾಗೂ ಶೀಘ್ರದಲ್ಲೇ ತೆರೆಗೆ ಬರುವ ನಿರೀಕ್ಷೆಯಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ