- ರಾಘವೇಂದ್ರ ಅಡಿಗ ಎಚ್ಚೆನ್.

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಹಾಗೂ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಇಂದು (ಏಪ್ರಿಲ್ 12) ನಿಧನರಾಗಿದ್ದಾರೆ.
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಮುಂಬೈನ ಬ್ರಿಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅವರು ಕೊನೆಯುಸಿರೆಳೆದಿದ್ದಾರೆ.
ಭಾರತೀಯ ಸಂಗೀತ ಲೋಕದಲ್ಲಿ ತಮ್ಮ ಅಪಾರ ಕೊಡುಗೆಯಿಂದ ಗುರುತಿಸಿಕೊಂಡಿದ್ದ ಆಶಾ ಭೋಸ್ಲೆ ಅವರ ನಿಧನದಿಂದ ಸಂಗೀತ ಕ್ಷೇತ್ರದಲ್ಲಿ ದೊಡ್ಡ ಶೂನ್ಯತೆ ಉಂಟಾಗಿದೆ. 20ಕ್ಕೂ ಹೆಚ್ಚು ಭಾಷೆಗಳಲ್ಲಿ ಸಾವಿರಾರು ಹಾಡುಗಳನ್ನು ಹಾಡಿರುವ ಅವರು ತಮ್ಮ ವಿಶಿಷ್ಟ ಧ್ವನಿಯಿಂದ ಹಲವು ತಲೆಮಾರುಗಳ ಹೃದಯ ಗೆದ್ದಿದ್ದರು.
ಅವರ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಅನೇಕ ರಾಜಕೀಯ ನಾಯಕರು ಎಕ್ಸ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂದೇಶದಲ್ಲಿ, “ಆಶಾ ಭೋಸ್ಲೆ ಅವರ ಸಂಗೀತವು ವಿಶ್ವದಾದ್ಯಂತ ಲಕ್ಷಾಂತರ ಜನರ ಹೃದಯಗಳನ್ನು ಮುಟ್ಟಿದೆ. ಅವರ ಅಗಲಿಕೆ ಸಂಗೀತ ಲೋಕಕ್ಕೆ ಅಪಾರ ನಷ್ಟ” ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ಅವರು, “ಅವರ ಧ್ವನಿಯ ಮೂಲಕ ಅವರ ಕಲೆ ಸದಾ ಅಮರವಾಗಿರುತ್ತದೆ” ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಸುಮಾರು 12,000ಕ್ಕೂ ಅಧಿಕ ಹಾಡುಗಳ ಮೂಲಕ ಸಂಗೀತ ಪ್ರೇಮಿಗಳನ್ನು ರಂಜಿಸಿದ ಮಹಾನ್ ಗಾಯಕಿಯನ್ನು ಕಳೆದುಕೊಂಡಿರುವುದು ದುಃಖಕರ” ಎಂದು ಸಂತಾಪ ಸೂಚಿಸಿದ್ದಾರೆ.
ಡಿ.ಕೆ. ಶಿವಕುಮಾರ್ ಅವರು, “ಹಳೆಯ ಮತ್ತು ಹೊಸ ತಲೆಮಾರಿನ ಸಂಗೀತವನ್ನು ಕೊಂಡಿಯಾಗಿ ಜೋಡಿಸಿದ್ದ ಮಹಾನ್ ಕಲಾವಿದೆಯ ಅಗಲಿಕೆ ಅಪಾರ ನಷ್ಟ” ಎಂದು ಹೇಳಿದ್ದಾರೆ.
ಹೀಗೆ ಸಂಗೀತ ಲೋಕದ ದಂತಕಥೆ ಆಶಾ ಭೋಸ್ಲೆ ಅವರ ಅಗಲಿಕೆ ದೇಶಾದ್ಯಂತ ಶೋಕದ ವಾತಾವರಣವನ್ನುಂಟುಮಾಡಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ