ಜಾಗೀರ್ದಾರ್*

ಹೆಸರಾಂತ ನಿರ್ದೇಶಕ ಯೋಗರಾಜ್ ಭಟ್, ಶ್ರೀನಿಧಿ ಹಾಗೂ ಪ್ರಸನ್ನ ಅವರು ನಿರ್ಮಿಸಿರುವ, ಯೋಗರಾಜ್ ಭಟ್ ನಿರ್ದೇಶನದ ಹಾಗೂ ಕರಾವಳಿ ಮೂಲದ ನೂತನ ಪ್ರತಿಭೆ ಸಂಜನ್ ಕಜೆ ನಾಯಕನಾಗಿ ನಿಧಿ ಸುಬ್ಬಯ್ಯ, ಅಮೀತ ಎಸ್ ಕುಲಾಲ್, ದೇವಿಕಾ ಶಿಂಧೆ ಹಾಗೂ ಅಂಜಲಿ ಗೌಡ ನಾಯಕಿಯರಾಗಿ ನಟಿಸಿರುವ ಗೀತಗುಚ್ಛ (ಆಲ್ಬಂ) "ಮತ್ತೆ ಮೊದಲಿಂದ". ಈ ಆಲ್ಬಂ ನಲ್ಲಿ ನಾಲ್ಕು ಹಾಡುಗಳಿದೆ. ನಾಡಿನ ಜನಪ್ರಿಯ ಗಾಯಕ - ಗಾಯಕಿಯರು ಈ ಹಾಡುಗಳನ್ನು ಹಾಡಿದ್ದಾರೆ.

ನಾಲ್ಕು ಬಣ್ಣಗಳ ಅಚ್ಚ ಕನ್ನಡ ಹಾಡುಗಳ ʼಮತ್ತೆ ಮೊದಲಿಂದʼ ಆಲ್ಬಂನ ಮೊದಲ ಹಾಡು " ಮೋಹದ ಬಣ್ಣ ನೀಲಿ" ಇತ್ತೀಚಿನ ಸುಂದರಸಂಜೆಯಲ್ಲಿ ಬಿಡುಗಡೆಯಾಗಿದೆ. ಯೋಗರಾಜ್ ಭಟ್ ಅವರು ಬರೆದಿರುವ ಈ ಹಾಡನ್ನು ಖ್ಯಾತ ಗಾಯಕ ವಿಜಯ್ ಪ್ರಕಾಶ್ ಹಾಡಿದ್ದಾರೆ. ಅನಿರುದ್ಧ್ ಶಾಸ್ತ್ರಿ ಸಂಗೀತ ನೀಡಿದ್ದಾರೆ.

ಶೀರ್ಷಿಕೆಯನ್ನು ಪರಿಚಯಿಸಿದ ಯೋಗರಾಜ್‌ ಭಟ್‌ ಅವರು ಇನ್ನಷ್ಟು ವಿವರ ನೀಡುತ್ತಾ, ಈ ಆಲ್ಬಂನಲ್ಲಿ ನಾಲ್ಕು ಗೀತೆಗಳಿದ್ದು, ನಾಲ್ಕು ಸಂಗೀತ ನಿರ್ದೇಶಕರು, ನಾಲ್ಕು ಗಾಯಕರು, ನಾಲ್ಕು ನಾಯಕಿಯರು ಇರುವುದು ವಿಶೇಷ. ಜೊತೆಗೆ ನವ ಪ್ರತಿಭೆ ಸಂಜನ್‌ ಕಜೆ ಹೆಸರಿನ ಅಪ್ಪಟ ಕನ್ನಡದ ಕರಾವಳಿ ಮೂಲದ ಯುವ ಪ್ರತಿಭಾನ್ವಿತ ನಟನನ್ನು ಪರಿಚಯಿಸುತ್ತಿದ್ದೇನೆ ಎಂದರು.

ನಾಲ್ಕೂ ಗೀತೆಗಳಿಗೆ ಭಟ್ರ ಸಾಹಿತ್ಯ ಮತ್ತು ನಿರ್ದೇಶನ ಇದ್ದು ಸಂಗೀತ ನಿರ್ದೇಶಕರಾಗಿ ಮನೋ ಮೂರ್ತಿ, ವಿ. ಹರಿಕೃಷ್ಣ, ಚೇತನ್‌-ಡ್ಯಾವಿ, ಅನಿರುದ್ಧ ಶಾಸ್ತ್ರಿ ಇದ್ದಾರೆ. ವಿಜಯ ಪ್ರಕಾಶ್‌, ಚೇತನ್‌ ಸೋಸ್ಕ, ವಾಸುಕಿ ವೈಭವ್‌, ಅದಿತಿ ಖಂಡೇಗಲ ರವರ ಗಾಯನ ಇದೆ. ನಾಲ್ಕು ಗೀತೆಗಳ ವೀಡಿಯೋದಲ್ಲಿ ಸಂಜನ್‌ ಕಜೆ ಜೊತೆ ನಿಧಿ ಸುಬ್ಬಯ್ಯ, ಅಮೀತ ಎಸ್‌. ಕುಲಾಲ್‌, ದೇವಿಕಾ ಶಿಂಧೆ, ಅಂಜಲಿ ಗೌಡ ನಾಯಕಿಯರಾಗಿ ಜೊತೆಯಾಗಿದ್ದಾರೆ. ಪ್ರಸ್ತುತ ಮೊದಲ ಹಾಡಾಗಿ "ಮೋಹದ ಬಣ್ಣ ನೀಲಿ" ಬಿಡುಗಡೆಯಾಗಿದೆ ಎಂದರು.

album 1

ಇತ್ತೀಚಿನ ಸುಂದರ ಸಂಜೆಯಲ್ಲಿ ಖ್ಯಾತ ಲೇಖಕರು, ಇತಿಹಾಸ ತಜ್ಞರೂ ಆದ ಧರ್ಮೇಂದ್ರ ಕುಮಾರ್‌ ಆರೇನಹಳ್ಳಿ ಅವರು ಮೊದಲ ಗೀತೆಯಾದ ʼನಿನ್ನ ಕಣ್ಣು ನೀಲಿʼ (ಮೋಹದ ಬಣ್ಣ ನೀಲಿ) ಹಾಡನ್ನು ಪಂಚರಂಗಿ ಆಡಿಯೋ ಯೂಟ್ಯೂಬ್‌ ಚಾನಲ್‌ನಲ್ಲಿ ಬಿಡುಗಡೆ ಮಾಡಿ ಸುಗಮ ಸಂಗೀತ, ಭಾವಗೀತೆಗಳು ವಿರಳವಾಗಿರುವ ಈ ಸಂದರ್ಭದಲ್ಲಿ ಇದೊಂದು ಶ್ಲಾಘನೀಯ ಪ್ರಯತ್ನ ಎಂದು ಯೋಗರಾಜ್‌ ಭಟ್ಟರನ್ನು ಪ್ರಶಂಶಿಸಿದರು. ತಮ್ಮ ಬಾಲ್ಯದ ದಿನಗಳಲ್ಲಿ ಮೈಸೂರು ಅನಂತಸ್ವಾಮಿಯವರ ಗೀತೆಗಳನ್ನು ಮೈಸೂರಿನಲ್ಲಿ ಕೇಳುತ್ತಿದ್ದದ್ದನ್ನು ನೆನಪು ಮಾಡಿಕೊಳ್ಳುತ್ತಾ ಭಾವಗೀತೆಗಳು ಕನ್ನಡ ನೆಲದ ಸೊಗಡು, ಇದನ್ನು ಉಳಿಸಿ ಬೆಳಸುವುದು ಸಾಹಿತಿಗಳ ಕರ್ತವ್ಯ. ಬಹಳ ವರ್ಷಗಳ ನಂತರ ಅದೇ ರೀತಿಯ ಗೀತೆಯನ್ನು ಕೇಳಿ ತುಂಬಾ ಸಂತೋಷವಾಯಿತು ಎನ್ನುತ್ತಾ ಈ ಗೀತೆಯನ್ನು ಮಾಧುರ್ಯವಾಗಿ ಹಾಡಿದ ವಿಜಯ ಪ್ರಕಾಶ್‌ ರವರನ್ನು ಪ್ರಶಂಶಿಸುತ್ತಲೇ ಅಭಿನಂದಿಸಿದರು.

ವಿಜಯ ಪ್ರಕಾಶ್‌ ರವರು ಮಾತನಾಡುತ್ತಾ ಈ ಗೀತೆಯನ್ನು ಹಾಡಲು ಚಿತ್ರಗೀತೆಗಳಿಗಿಂತ ಹೆಚ್ಚು ಮುತುವರ್ಜಿ ವಹಿಸಿದ್ದಾಗಿ ಹೇಳುತ್ತಾ ರೇಕಾರ್ಡಿಂಗ್‌ಗೆ ಬಂದರೂ ಹಾಡದೆ ಗೀತೆಯನ್ನು ಗಂಟೆಗಟ್ಟಲೆ ಕೇಳಿ ಮರುದಿನ ಬಂದು ಹಾಡಿದ್ದಾಗಿ ಹೇಳಿದರು. ಅದಕ್ಕೆ ಕಾರಣ ಈ ಗೀತೆಯಲ್ಲಿನ ವಿಶೇಷತೆ ಮತ್ತು ಸಾಹಿತ್ಯ ಸಾಲುಗಳಲ್ಲಿರುವ ಸೂಕ್ಷ್ಮತೆ. ಹಾಗು ಭಾವಗೀತೆಗಳಿಗಳ ಬಗ್ಗೆ ತಮಗಿರುವ ಅಪಾರ ಗೌರವ, ಪ್ರೀತಿ, ಭಟ್ಟರ ಜೊತೆಗಿನ ಸ್ನೇಹ ಎಲ್ಲವೂ ಸೇರಿ ಗೀತೆಯನ್ನು ಎದೆ ತುಂಬಿ ಮನಸಾರೆ ಹಾಡಿದ್ದಾಗಿ ಹೇಳಿದರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ