ರಾಘವೇಂದ್ರ ಅಡಿಗ ಎಚ್ಚೆನ್.

ಚಂದನವನದ ಹಿರಿಯ ನಟ ಅನಂತ್ ನಾಗ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮಭೂಷಣ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದಾರೆ. ಅನಂತ್ ನಾಗ್ ಅವರಿಗೆ ದೇಶದ ತೃತೀಯ ನಾಗರಿಕ ಗೌರವವಾದ ಪದ್ಮಭೂಷಣ ಗೌರವ ಸಂದಿದೆ.
76 ನೇ ಗಣರಾಜ್ಯೋತ್ಸವದ ಹಿಂದಿನ ದಿನ ನಟ ಅನಂತ್ ನಾಗ್ಗೆ ಕೇಂದ್ರ ಸರ್ಕಾರ ಪದ್ಮಭೂಷಣ ಪ್ರಶಸ್ತಿಯನ್ನ ಘೋಷಿಸಿತ್ತು. ಇಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಟ ಅನಂತ್ ನಾಗ್ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ್ದಾರೆ. ಸಿನಿಮಾರಂಗದಲ್ಲಿ ಸಾಧನೆ ಮಾಡಿದ ಅನಂತ್ ನಾಗ್ ಅವರಿಗೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು.

image-21

ಹಲವು ವರ್ಷಗಳಿಂದ ಅನಂತ್ ನಾಗ್‌ಗೆ ಪದ್ಮಭೂಷಣ ಪ್ರಶಸ್ತಿ ಸಿಗಬೇಕು ಎಂದು ಕನ್ನಡಿಗರು ಆಶಿಸಿದ್ದರು. ಇದೀಗ ಹಿರಿಯ ನಟನಿಗೆ ಸಿಕ್ಕಿರುವ ಪ್ರಶಸ್ತಿಗೆ ಅಭಿಮಾನಿಗಳು ಶುಭಹಾರೈಸಿದ್ದಾರೆ.
ಅನಂತ್ ನಾಗ್ ಅವರು ಕನ್ನಡ, ಹಿಂದಿ, ಮರಾಠಿ ಸೇರಿದಂತೆ 300ಕ್ಕೂ ಹೆಚ್ಚು ಸಿನಿಮಾದಲ್ಲಿ ನಟಿಸಿದ್ದಾರೆ. ಅಷ್ಟೇ ಅಲ್ಲದೆ ಅವರು ರಂಗಭೂಮಿಯಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದಾರೆ.

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ