ರಾಘವೇಂದ್ರ ಅಡಿಗ ಎಚ್ಚೆನ್. 

ಕನ್ನಡ ಸಂಗೀತ ಲೋಕದ ಮಧುರ ಕಂಠದ ಹಿನ್ನೆಲೆ ಗಾಯಕಿ ಅನನ್ಯ ಭಟ್ ಹಸೆಮಣೆ ಏರಿದ್ದಾರೆ.
‘ಸೋಜುಗಾದ ಸೂಜಿ ಮಲ್ಲಿಗೆ’ ಹಾಡಿನಿಂದ ಜನಪ್ರಿಯತೆ ಪಡೆದ ಅನನ್ಯ ಅವರು, ಅಂತಾರಾಷ್ಟ್ರೀಯ ಖ್ಯಾತಿಯ ಮ್ಯೂಜಿಷಿಯನ್ ಮತ್ತು ಡ್ರಮ್ಮರ್ ಮಂಜು ಅವರೊಂದಿಗೆ ತಿರುಪತಿಯಲ್ಲಿ ಸಪ್ತಪದಿ ತುಳಿದಿದ್ದಾರೆ.
ಖ್ಯಾತ ಜ್ಯೋತಿಷ್ಯ ಶಾಸ್ತ್ರಜ್ಞ ಹಾಗೂ ಪಂಡಿತರಾದ ಪಂಡಿತ್ ಡಾ. ಅರುಣ್ ಗುರೂಜಿ ಅವರ ನೇತೃತ್ವದಲ್ಲಿ ನಡೆದ ಈ ಮದುವೆ, ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ಸರಳವಾಗಿ ನೆರವೇರಿತು.
ಅನನ್ಯ ಭಟ್ ಅವರು ಕನ್ನಡ ಚಿತ್ರರಂಗದಲ್ಲಿ ಹಲವಾರು ಹಿಟ್ ಹಾಡುಗಳ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದಾರೆ. ಸಂಗೀತ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಅವರು, ತಮ್ಮ ಪತಿ ಮಂಜು ಅವರೊಂದಿಗೆ ಸಂಗೀತದ ಹಾದಿಯಲ್ಲಿ ಹೊಸ ಜೀವನಕ್ಕೆ ಪಾದಾರ್ಪಣೆ ಮಾಡಿದ್ದಾರೆ.
ಕುಟುಂಬದ ಮೂಲಗಳ ಪ್ರಕಾರ, ಇಬ್ಬರಿಗೂ ಸಂಗೀತದ ಮೇಲಿನ ಆಳವಾದ ಪ್ರೀತಿ ಮತ್ತು ಒಡನಾಟವೇ ಈ ಬಾಂಧವ್ಯವನ್ನು ಇನ್ನಷ್ಟು ವಿಶೇಷಗೊಳಿಸಿದೆ. “ಇದು ಪರಿಪೂರ್ಣ ಜೋಡಿ,” ಎಂದು ಅನನ್ಯ ಅವರ ತಾಯಿ ಹರ್ಷ ವ್ಯಕ್ತಪಡಿಸಿದ್ದಾರೆ.

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ