-  ರಾಘವೇಂದ್ರ ಅಡಿಗ ಎಚ್ಚೆನ್.

ರಂಗಿತರಂಗಖ್ಯಾತಿಯ ನಿರೂಪ್ ಭಂಡಾರಿ ಅಭಿನಯದ ಬಹುನಿರೀಕ್ಷಿತ ಅತಿಕಾಯಚಿತ್ರಕ್ಕೆ ಬಹುಭಾಷಾ ನಟಿ ಸ್ವಾತಿಷ್ಟ ಕೃಷ್ಣನ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈಗಾಗಲೇ ರಗಡ್ ಲುಕ್ನಿಂದ ಗಮನ ಸೆಳೆದಿರುವ ನಿರೂಪ್, ಚಿತ್ರದಲ್ಲಿ ಸಂಪೂರ್ಣ ವಿಭಿನ್ನ ಮಾಸ್ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಮೂಲತಃ ಧಾರವಾಡದವರಾದ ಸ್ವಾತಿಷ್ಟ ಕೃಷ್ಣನ್ ಕನ್ನಡ, ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ತಮಿಳಿನ ಸವರಕತ್ತಿವಿಕ್ರಮ್, ತೆಲುಗಿನ ಗುಂಡೇ ಕಥಾ ವಿಂಟಾರ ಹಾಗೂ ಕನ್ನಡದ ಒಂದು ಸರಳ ಪ್ರೇಮಕಥೆರಕ್ಕಸಪುರದೋಳ್ ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಿಸಿರುವ ಅವರು ಇದೀಗ ‘ಅತಿಕಾಯ’ ಚಿತ್ರದ ಪ್ರಮುಖ ಪಾತ್ರದ ಮೂಲಕ ಮತ್ತೊಮ್ಮೆ ಕನ್ನಡಕ್ಕೆ ಮರಳಿದ್ದಾರೆ.

ಇದುವರೆಗೆ ಚಾಕೊಲೇಟ್ ಬಾಯ್ ಹಾಗೂ ಲವರ್ ಬಾಯ್ ಇಮೇಜ್‌ನಲ್ಲಿ ಕಾಣಿಸಿಕೊಂಡಿದ್ದ ನಿರೂಪ್ ಭಂಡಾರಿ, ಈ ಚಿತ್ರದಲ್ಲಿ ಸಂಪೂರ್ಣ ವಿಭಿನ್ನವಾಗಿ ರಕ್ತಸಿಕ್ತ, ರಗಡ್ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪಾತ್ರಕ್ಕಾಗಿ ವಿಶೇಷ ವರ್ಕೌಟ್ ಮಾಡಿ ದೇಹದಾರ್ಢ್ಯ ಬೆಳೆಸಿಕೊಂಡಿದ್ದು, ಡೈಲಾಗ್ ಡೆಲಿವರಿ ಮತ್ತು ಗೆಟಪ್‌ನಲ್ಲೂ ಹೊಸತನ ತಂದಿದ್ದಾರೆ.

ಪದೇ ಪದೇ ಮತ್ತು ನಮಕ್ ಹರಾಮ್ ಚಿತ್ರಗಳ ನಿರ್ದೇಶಕ ನಾಗರಾಜ್ ಪೀಣ್ಯ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಬೆಂಗಳೂರು ನಗರದ ಜನಜಂಗುಳಿ ಪ್ರದೇಶಗಳಲ್ಲಿ ಹೆಚ್ಚಿನ ಭಾಗದ ಚಿತ್ರೀಕರಣ ನಡೆಸಲಾಗಿದ್ದು, ಚಿತ್ರವನ್ನು ನೈಜತೆಯೊಂದಿಗೆ ಮೂಡಿಸಲು ವಿಶೇಷ ಒತ್ತು ನೀಡಲಾಗಿದೆ.

ನಿರ್ದೇಶಕರ ಪ್ರಕಾರ, ಸ್ವಾತಿಷ್ಟ ಅವರ ಪಾತ್ರ ಕೇವಲ ನಾಯಕಿಯದ್ದಲ್ಲ; ಕಥೆಯ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸಲಿದ್ದು, ನಿರೂಪ್ ಅವರ ಪಾತ್ರದಷ್ಟೇ ಪ್ರಾಮುಖ್ಯತೆ ಹೊಂದಿದೆ.

.ಎನ್. ಮೂವಿ ಮೇಕರ್ಸ್ ಹಾಗೂ ನಿಹಾಲ್ ಮೂವೀಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರವನ್ನು ಜೆ. ಮಹೇಶ್ ಕುಮಾರ್ ಅರ್ಪಿಸುತ್ತಿದ್ದಾರೆ. ಹರೀಶ್ ರಾಯ್, ದಿನೇಶ್ ಮಂಗಳೂರು, ಬಿ. ಸುರೇಶ್, ಕಾಕ್ರೋಚ್ ಸುಧೀ, ವಜ್ರಧೀರ್ ಜೈನ್, ವರ್ಧನ್ ತೀರ್ಥಹಳ್ಳಿ, ಮಹಾಂತೇಶ್ ಹಾಗೂ ಜಾಕ್ ಜಾಲಿ ಸೇರಿದಂತೆ ಹಲವು ಕಲಾವಿದರು ನಟಿಸಿದ್ದಾರೆ. ಉದಯಲೀಲ ಛಾಯಾಗ್ರಹಣ, ಶ್ರೀನಿವಾಸ್ ಪಿ. ಬಾಬು ಸಂಕಲನ ಹಾಗೂ ಸಚಿನ್ ಬಸ್ರೂರು ಸಂಗೀತ ಚಿತ್ರಕ್ಕಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ