Sj*

ಯುವ ರಾಜಕಾರಣಿ ಹಾಗೂ ನಟ ಅನಿಲ್ ಶೆಟ್ಟಿ ಸಮಾಜಸೇವೆ..ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವೇತನ ವಿತರಣೆ..ನಟಿ ಮಾನುಷಿ ಚಿಲ್ಲರ್ ಭಾಗಿ*

ಲಂಬೋದರ 2.0 ಸಿನಿಮಾ ಮೂಲಕ ಕನ್ನಡ ಇಂಡಸ್ಟ್ರೀಯಲ್ಲಿ ಅದೃಷ್ಟ ಪರೀಕ್ಷೆಗಿಳಿದಿರುವ ನಟ ಹಾಗೂ ಯುವ ರಾಜಕಾರಣಿ ಅನಿಲ್ ಶೆಟ್ಟಿ ಸಮಾಜಸೇವೆಯಲ್ಲಿಯೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ತಮ್ಮದೇ ನವ ಬೆಂಗಳೂರು ಫೌಂಡೇಶನ್ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳ ಕನಸ್ಸಿಗೆ ಸಾಥ್ ಕೊಟ್ಟಿದ್ದಾರೆ.

ಕಳೆದ ಕೆಲ ವರ್ಷಗಳಿಂದ ಅನಿಲ್ ಶೆಟ್ಟಿಯವರು ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬಂದಿದ್ದಾರೆ. ನವ ಬೆಂಗಳೂರು ಫೌಂಡೇಷನ್ ಮೂಲಕ ಕಳೆದ ಹತ್ತು ವರ್ಷಗಳಿಂದ ವಿದ್ಯಾರ್ಥಿಗಳಿಗೆ ವೇತನ ನೀಡುತ್ತಾ ಬಂದಿದ್ದಾರೆ. ಇದರ ಮುಂದುವರಿದ ಭಾಗವಾಗಿ ನಿನ್ನೆ ಬೆಂಗಳೂರಿನ ಕೋರಮಂಗಲದ ಸತ್ಯಸಾಯಿ ಸದನದಲ್ಲಿ ವಿದ್ಯಾರ್ಥಿಗಳಿಗೆ ಸ್ಕಾಲರ್ಷಿಪದ ವಿತರಣೆ ಮಾಡಲಾಯಿತು.

awards 1

ನವ ಬೆಂಗಳೂರು ಫೌಂಡೇಷನ್ ಹಾಗೂ ಅಸ್ಟ್ಫೋಟಾಕ್ ಫೌಂಡೇಷನ್ ವತಿಯಿಂದ 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವೇತನ ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ವಿಶ್ವ ಸುಂದರಿ ಮತ್ತು ಬಾಲಿವುಡ್ ನಟಿ ಮಾನುಷಿ ಚಿಲ್ಲರ್ ಹಾಗೂ ಅನಿಲ್ ಶೆಟ್ಟಿ ವಿದ್ಯಾರ್ಥಿಗಳಿಗೆ ವೇತನ ವಿತರಣೆ ಮಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಯ ನಗರ ಶಾಸಕ ಸಿಕೆ ರಾಮಮೂರ್ತಿ, ಎಂಎಲ್ಸಿ ಗೋಪಿನಾಥ್ ರೆಡ್ಡಿ ಹಾಗೂ ನಿರ್ದೇಶಕ ಸಿಂಪಲ್ ಸುನಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ