ಜಾಗೀರ್ದಾರ್ *
ದೇವರಾಜ್ ಕುಮಾರ್ ನಿರ್ಮಾಣ, ನಿರ್ದೇಶನ ಹಾಗೂ ನಟನೆಯ " ಆಯುಧ " ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಎ ಪ್ರಮಾಣ ಪತ್ರ ನೀಡಿದೆ. ಚಿತ್ರ ಸದ್ಯದಲ್ಲೇ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಚಿತ್ರ ಇದೇ ವರ್ಷ ಅಥವಾ ಮುಂದಿನ ವರ್ಷದ ಆರಂಭದಲ್ಲಿ ತೆರೆಗೆ ಬರಲಿದೆ.
ದೇವರಾಜ್ ಕುಮಾರ್ ಅವರು ಸದ್ದಿಲ್ಲದೆ ಚಿತ್ರಿಕರಣ ಮುಗಿಸಿ
ದೇವರಾಜ್ ಪಿಚ್ಚರ್ ಸ್ಟುಡಿಯೋ ಬ್ಯಾನರ್ ನಲ್ಲೇ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ನಿರ್ದೇಶನದ ಜವಾಬ್ದಾರಿಯನ್ನು ಹೊತ್ತಿರುವ ದೇವರಾಜ್ ಕುಮಾರ್ ನಾಯಕ ನಟನಾಗಿಯೂ ಕೂಡ ಕಾಣಿಸಿಕೊಂಡಿದ್ದಾರೆ.
ಹೊನ್ನಾವರ ಬೈಂದೂರು, ಚನ್ನಪಟ್ಟಣ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ. ನಾಲ್ಕು ಹಾಡುಗಳು ಹಾಗೂ ನಾಲ್ಕು ಸಾಹಸ ಸನ್ನಿವೇಶಗಳಿರುವ ಈ ಚಿತ್ರ ಆಕ್ಷನ್ ಥ್ರಿಲ್ಲರ್ ಫ್ಯಾಮಿಲಿ ಡ್ರಾಮಾ ಚಿತ್ರವಾಗಿರುತ್ತದೆ. ಡೇಂಜರ್ ಜೋನ್, ನಿಶಬ್ದ 2, ಅನುಷ್ಕಾ,
ತಾಜ್ ಮಹಲ್ 2 ಚಿತ್ರಗಳನ್ನು ನಿರ್ದೇಶಿಸಿರುವ ದೇವರಾಜ್ ಕುಮಾರ್, ತಮ್ಮ ಐದನೇ ಚಿತ್ರವಾಗಿ
"ಆಯುಧ" ಚಿತ್ರ ಚಿತ್ರವನ್ನು ನಿರ್ದೇಶಿಸಿದ್ದಾರೆ.
ದೇವರಾಜ್ ಕುಮಾರ್ ಅವರಿಗೆ ನಾಯಕಿಯರಾಗಿ
ಅಮೃತ ಹಾಗೂ ಸಂಹಿತ ವಿನ್ಯ ನಟಿಸಿದ್ದಾರೆ. ಖಳ ನಟ ರಘು ಹಾಗೂ ಸೂರಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಸತೀಶ ಸ್ಟೀವನ್
ಸಂಗೀತ ನಿರ್ದೇಶನ, ವೀನಸ್ ಮೂರ್ತಿ ಛಾಯಾಗ್ರಹಣ, ಮನವರ್ಷಿ ನವಲಗುಂದ ಗೀತರಚನೆ, ಚಂದ್ರು ಬಂಡೆ ಸಾಹಸ ನಿರ್ದೇಶನ ಹಾಗೂ ವಿಜಯ್ ಎಂ ಕುಮಾರ್ & ಮಹೇಶ್ ಅವರ ಸಂಕಲನವಿರುವ ಈ ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಡಿಸೆಂಬರ್ ನಲ್ಲಿ ಅನಾವರಣವಾಗಲಿದೆ.