– ರಾಘವೇಂದ್ರ ಅಡಿಗ ಎಚ್ಚೆನ್.

ಭಕ್ತಿಪ್ರಧಾನ ಚಿತ್ರಗಳನ್ನೇ ಹೆಚ್ಚಾಗಿ ನಿರ್ದೇಶಿಸುತ್ತಾ ಬಂದಿರುವ ನಿರ್ದೇಶಕ ಓಂಕಾರ್‍ ಪುರುಷೋತ್ತಮ್‍, ಇದೀಗ ಸಾಮಾಜಿಕ ಕಳಕಳಿಯ ಚಿತ್ರವೊಂದನ್ನು ಸದ್ದಿಲ್ಲದೆ ಮುಗಿಸಿದ್ದಾರೆ. ರಸ್ತೆ ಬದಿಯಲ್ಲಿ ಚಿಂದಿ ಆಯುತ್ತ ಜೀವನ ಸಾಗಿಸುವ ಮಹಿಳೆಯೊಬ್ಬಳ ಜೀವನ, ತನ್ನ ಪುಟ್ಟ ಮಗನಿಗಾಗಿ ಆಕೆ ಪಡುವ ಕಷ್ಟವನ್ನು ‘ಬೀದಿ ಬದುಕು’ ಎಂಬ ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡಿದ್ದಾರೆ. ರೇಖಾ ಸಾಗರ್ (ರೇಖಾ ರಾಣಿ) ಈ ಚಿತ್ರದ ನಾಯಕಿಯಾಗಿದ್ದು, ಅಭಿನಯದ ಜೊತೆಗೆ ಚಿತ್ರವನ್ನೂ ನಿರ್ಮಿಸಿದ್ದಾರೆ. ಈ ಚಿತ್ರದ ಟ್ರೇಲರ್ ಇತ್ತಿಚೆಗೆ ಬಿಡುಗಡೆ ಆಗಿದೆ. ರೇಖಾ ಸಾಗರ್, ನಿರ್ದೇಶಕ ಪುರುಷೋತ್ತಮ್, ಗಣೇಶರಾವ್ ಕೇಸರಕರ್, ರಾಜ್ ಭಾಸ್ಕರ್, ಸಂಕಲನಕಾರ ಅನಿಲ್, ಮಾ. ಸಾಕೇತ್, ಡಾ. ರೂಪೇಶ್ ಮುಂತಾದವರು ಈ ಸಂದರ್ಭದಲ್ಲಿ ಹಾಜಜರಿದ್ದರು.

FB_IMG_1760494577908

ಕುಡುಕ ಗಂಡನ ಉಪಟಳದ ಮಧ್ಯೆ ತನ್ನ ಮಗನಿಗಾಗಿ ಆಕೆ ಏನೆಲ್ಲ ಕಷ್ಟಪಡುತ್ತಾಳೆ ಎಂಬುದೇ ಈ ಚಿತ್ರದ ಕಥಾಹಂದರ. ನಿಜವಾದ ಸ್ಲಂ, ಗುಡಿಸಲುಗಳು, ಸ್ಮಶಾನ ಹಾಗೂ ಆಸ್ಪತ್ರೆಯಲ್ಲಿ  ಹೀಗೆ ಎಲ್ಲಾ ರಿಯಲ್ ಲೊಕೇಶನ್‍ಗಳಲ್ಲೇ‌ 25 ದಿನಗಳ ಕಾಲ ಈ ಚಿತ್ರಕ್ಕೆ ಚಿತ್ರೀಕರಣ ಮಾಡಲಾಗಿದೆ. ಈಗಾಗಲೇ ಪೋಸ್ಟ್ ಪ್ರೊಡಕ್ಷನ್ ಮುಗಿಸಿಕೊಂಡು ಬಿಡುಗಡೆಗೆ ಸಿದ್ದವಾಗಿರುವ ಈ ಚಿತ್ರಕ್ಕೆ ರಾಜ್ ಭಾಸ್ಕರ್ ಅವರ ಸಂಗೀತ, ಮುತ್ತುರಾಜ್ ಛಾಯಾಗ್ರಹಣವಿದೆ.

FB_IMG_1760494574046

‘ಬೀದಿ ಬದುಕು’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ನಟಿ ರೇಖಾ ಸಾಗರ್, ನಿರ್ದೇಶಕ ಪುರುಷೋತ್ತಮ್, ರಾಜ್ ಭಾಸ್ಕರ್, ಗಣೇಶ್ ರಾವ್ ಕೇಸರ್ಕರ್, ಸಂಕಲನಕಾರ ಅನಿಲ್, ಮಾ. ಸಾಕೇತ್, ಡಾ. ರೂಪೇಶ್ ಮುಂತಾದವರು ಹಾಜರಿದ್ದರು. ಸಾಕಷ್ಟು ಸೀರಿಯಲ್​​ಗಳಲ್ಲಿ ನಟಿಸಿದ ಅನುಭವ ರೇಖಾ ಸಾಗರ್ ಅವರಿಗೆ ಇದೆ. ಕುಡುಕ ಗಂಡನ ಉಪಟಳದ ನಡುವೆ ತನ್ನ ಮಗನಿಗಾಗಿ ಚಿಂದಿ ಆಯುವ ಮಹಿಳೆಯು ಏನೆಲ್ಲ ಕಷ್ಟಪಡುತ್ತಾಳೆ ಎಂಬುದೇ ‘ಬೀದಿ ಬದುಕು’ ಸಿನಿಮಾದ ಕಥಾಸಾರಾಂಶ

FB_IMG_1760494580223

ವಿಶೇಷ ಏನೆಂದರೆ ನಿಜವಾದ ಸ್ಲಂ, ಗುಡಿಸಲುಗಳು, ಸ್ಮಶಾನ ಮತ್ತು ಆಸ್ಪತ್ರೆಯಲ್ಲಿ ‘ಬೀದಿ ಬದುಕು’ ಸಿನಿಮಾದ ಶೂಟಿಂಗ್ ಮಾಡಲಾಗಿದೆ. ‘ಎಲ್ಲ ರಿಯಲ್ ಲೊಕೇಶನ್​​ಗಳಲ್ಲಿ 25 ದಿನಗಳ ಕಾಲ ಚಿತ್ರೀಕರಣ ಮಾಡಿದ್ದೇವೆ. ಅಲ್ಲದೇ, ಇಡೀ ಸಿನಿಮಾವನ್ನು ಸಿಂಕ್ ಸೌಂಡ್​​ನಲ್ಲಿ ಮಾಡಿದ್ದೇವೆ’ ಎಂದು ಚಿತ್ರತಂಡದವರು ಮಾಹಿತಿ ಹಂಚಿಕೊಂಡಿದ್ದಾರೆ.

FB_IMG_1760494577908

ಸಿನಿಮಾದ ಶೂಟಿಂಗ್ ಅನುಭವವನ್ನು ನಟಿ, ನಿರ್ಮಾಪಕಿ ರೇಖಾ ಸಾಗರ್ ಅವರು ಹಂಚಿಕೊಂಡರು. ‘ಈ ಪಾತ್ರವನ್ನು ನಾನೇ ಮಾಡಬೇಕೆಂದು ಸವಾಲಾಗಿ ತೆಗೆದುಕೊಂಡೆ‌. ಸ್ಲಂಗಳಿಗೆ ಹೋಗಿ ಅವರು ಹೇಗಿರುತ್ತಾರೆ ಎಂಬುದನ್ನು ತಿಳಿದುಕೊಂಡೆ. ಇರುವವರು ಇಲ್ಲವರಿಗೆ ಸಹಾಯ ಮಾಡಬೇಕು ಎಂಬುದೇ ನಮ್ಮ ಚಿತ್ರದ ಆಶಯ. ಚಿತ್ರವೀಗ ಬಿಡುಗಡೆಗೆ ಸಜ್ಜಾಗಿದೆ. ಸದ್ಯದಲ್ಲೇ ರಿಲೀಸ್ ಮಾಡುತ್ತಿದ್ದೇವೆ’ ಎಂದು ರೇಖಾ ಸಾಗರ್ ತಿಳಿಸಿದರು.

 

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ