–  ರಾಘವೇಂದ್ರ ಅಡಿಗ ಎಚ್ಚೆನ್.

ಕನ್ನಡ ಭಾಷೆಯಲ್ಲಿ ವೈದ್ಯಕೀಯ ಸಾಹಿತ್ಯವನ್ನು ಸೃಷ್ಟಿಸುವ, ಬೆಳೆಸುವ, ಉಳಿಸುವ ಮತ್ತು ಅದರ ಶ್ರೀಮಂತ ಪರಂಪರೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಪ್ರಯತ್ನಕ್ಕೆ ರಾಜ್ಯ ಸರ್ಕಾರದ ಸಂಪೂರ್ಣ ಬೆಂಬಲವಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ಆಯೋಜಿಸಲಾಗುತ್ತಿರುವ “ಮೊದಲ ಕನ್ನಡ ವೈದ್ಯಕೀಯ ಸಾಹಿತ್ಯ ಸಮ್ಮೇಳನ–2026’ದ ಲಾಂಛನ ಮತ್ತು ಕಿರುಹೊತ್ತಿಗೆಯನ್ನು ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

1001961661

“ಕನ್ನಡ ನಮ್ಮೆಲ್ಲರ ಬದುಕು. ಕನ್ನಡ ಭಾಷೆಯನ್ನು ವೈದ್ಯಕೀಯ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಹೆಚ್ಚು ಹೆಚ್ಚು ಬಳಸಲು ಹಾಗೂ ಕನ್ನಡ ವೈದ್ಯಕೀಯ ಸಾಹಿತ್ಯಕ್ಕೆ ಪ್ರೋತ್ಸಾಹ ನೀಡಲು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ನಿರಂತರವಾಗಿ ಶ್ರಮಿಸುತ್ತಿದೆ. ಇಂತಹ ಪ್ರಯತ್ನಗಳಿಗೆ ಯಾವಾಗಲೂ ನಮ್ಮ ಬೆಂಬಲ ಇರುತ್ತದೆ ಎಂದು ಅವರು ತಿಳಿಸಿದರು.

1001961658

ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಭಗವಾನ್ ಬಿ.ಸಿ. ಮಾತನಾಡಿ, ಕನ್ನಡದಲ್ಲಿ ವೈದ್ಯಕೀಯ ಜ್ಞಾನ, ಸಂಶೋಧನೆ ಮತ್ತು ಆರೋಗ್ಯ ಸಂಬಂಧಿತ ಮಾಹಿತಿಯನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಮೊದಲ ಕನ್ನಡ ವೈದ್ಯಕೀಯ ಸಾಹಿತ್ಯ ಸಮ್ಮೇಳನ ಮಹತ್ವದ ವೇದಿಕೆಯಾಗಲಿದೆ ಎಂದರು.

1001961652

ಈ ಸಂದರ್ಭದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್, ಶಾಸಕ ಎ.ಆರ್. ಕೃಷ್ಣಮೂರ್ತಿ, ಡಾ. ಎನ್.ಟಿ. ಶ್ರೀನಿವಾಸ್, ಡಾ. ಬಿ.ಟಿ. ರುದ್ರೇಶ್, ಡಾ. ವಸುಂಧರಾ ಭೂಪತಿ, ಮಾಜಿ ಶಾಸಕ ಐವಾನ್ ನಿಗ್ಲಿ, ಡಾ. ಸರೋಜಾ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಸಚಿವರಾದ ಅರ್ಜುನ್ ಒಡೆಯರ್, ಹಣಕಾಸು ಅಧಿಕಾರಿ ಬಿ.ಕೆ. ಗಂಗಾಧರ್ ಹಾಗೂ ಅಧಿಕಾರಿಗಳು ಹಾಜರಿದ್ದರು.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ