ಜಾಗೀರ್ದಾರ್*

ವಿನೋದ್ ಪ್ರಭಾಕರ್ ಅವರ ಅಭಿನಯದ "ಮಾದೇವ" ಚಿತ್ರ ಭರ್ಜರಿ ಯಶಸ್ಸು ಕಂಡಿದೆ. ಆ ಚಿತ್ರದ ನಂತರ ವಿನೋದ್ ಪ್ರಭಾಕರ್ ಅವರು ನಾಯಕರಾಗಿ ನಟಿಸುತ್ತಿರುವ "ಬಲರಾಮನ ದಿನಗಳು" ಚಿತ್ರ ಸಹ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಪ್ರಸ್ತುತ ಬಹು ನಿರೀಕ್ಷಿತ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಮೈಸೂರು, ಶಿವಮೊಗ್ಗ, ಸಕಲೇಶಪುರ ಮುಂತಾದ ಕಡೆ 80 ದಿನಗಳ ಚಿತ್ರೀಕರಣ ನಡೆದಿದೆ. ಸದ್ಯದಲ್ಲೇ ಪೋಸ್ಟ್ ಪ್ರೊಡಕ್ಷನ್ ವರ್ಕ್ ಆರಂಭವಾಗಲಿದೆ.

balram 1

ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ಅವರ ಚೊಚ್ಚಲ ನಿರ್ಮಾಣದಲ್ಲಿ ಅದ್ದೂರಿಯಾಗಿ ಮೂಡಿಬರುತ್ತಿರುವ ಈ ಚಿತ್ರವನ್ನು "ಆ ದಿನಗಳು" ಖ್ಯಾತಿಯ ಕೆ‌.ಎಂ.ಚೈತನ್ಯ ನಿರ್ದೇಶಿಸುತ್ತಿದ್ದಾರೆ. ಟೈಗರ್ ವಿನೋದ್ ಪ್ರಭಾಕರ್ ಅವರಿಗೆ ನಾಯಕಿಯಾಗಿ ಪ್ರಿಯಾ ಆನಂದ್ ಅಭಿನಯಿಸುತ್ತಿದ್ದಾರೆ‌‌. ಹೆಸರಾಂತ ಕಲಾವಿದರಾದ ಅತುಲ್ ಕುಲಕರ್ಣಿ, ಆಶಿಶ್ ವಿದ್ಯಾರ್ಥಿ ಅವರಂತಹ ಅನುಭವಿ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. "ಬಿಗ್ ಬಾಸ್" ಖ್ಯಾತಿಯ ವಿನಯ್ ಗೌಡ ಸಹ ಈ ಚಿತ್ರದಲ್ಲ ನಟಿಸಿದ್ದಾರೆ.‌‌ ಕನ್ನಡ ಸೇರಿದಂತೆ ಅನೇಕ ಭಾಷೆಗಳಲ್ಲಿ ಅಭಿನಯಿಸಿರುವ ಖ್ಯಾತ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದು, ಮುಂದಿನ ದಿನಗಳಲ್ಲಿ ಚಿತ್ರತಂಡ ಈ ಕುರಿತು ವಿವರ ನೀಡಲಿದೆ.

1980ರ ಕಾಲಘಟ್ಟದಲ್ಲಿ ನಡೆಯುವ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಭಾರತದ ಹೆಸರಾಂತ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಸಂಗೀತ ನೀಡುತ್ತಿದ್ದಾರೆ. ಇದು ಸಂತೋಷ್ ನಾರಾಯಣನ್ ಸಂಗೀತ ನೀಡುತ್ತಿರುವ ಮೊದಲ ಕನ್ನಡ ಚಿತ್ರವಾಗಿದೆ. ವೇಣು "ಬಲರಾಮನ ದಿನಗಳು" ಚಿತ್ರಕ್ಕೆ ಛಾಯಾಗ್ರಹಣ ಮಾಡಿದ್ದಾರೆ.

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ