- ರಾಘವೇಂದ್ರ ಅಡಿಗ ಎಚ್ಚೆನ್.

ಧರ್ಮ ಕೀರ್ತಿರಾಜ್ ಅಭಿನಯದ ಬೆಂಗಳೂರಿನಲ್ಲಿ ನಡೆಯುವ ರೋಚಕ ಮರ್ಡರ್ ಮಿಸ್ಟರಿ ಸಸ್ಪೆನ್ಸ್ ಥ್ರಿಲ್ಲರ್ ’ಬೆಂಗಳೂರು ಇನ್’ ಚಿತ್ರದ ಟ್ರೈಲರ್ ಬಿಡುಗಡೆ ಆಗಿದೆ. ಇದೇ ತಿಂಗಳ 17ಕ್ಕೆ ಚಿತ್ರ ತೆರೆ ಕಾಣುತ್ತಿದ್ದು, ಬೆಂಗಳೂರಿನ ಮಾಗಡಿ ರಸ್ತೆಯ ಉತ್ಸವ್ ಲೆಗೆಸಿಯಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ "ಮೈನಾ" ಖ್ಯಾತಿಯ ಅಹಿಂಸಾ ಚೇತನ್ ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದರು. ಒಬ್ಬ ಫುಡ್ ಡೆಲಿವರಿ ಏಜೆಂಟ್ ಸುತ್ತ ಕಥೆ ಹೆಣೆಯುವ ಈ ಚಿತ್ರ, ಆಧುನಿಕ ನಗರದ ಅಂಧಕಾರವನ್ನು ಬಯಲಿಗೆಳೆಯುವ ಪ್ರಯತ್ನದಲ್ಲಿದೆ. ಕಾರ್ತಿಕ್ ಕೆ. ಮೂರ್ತಿ ಅವರ ಚೊಚ್ಚಲ ನಿರ್ದೇಶನದ ಚಿತ್ರ ಇದಾಗಿದೆ. ಈ ಮೊದಲು ಅವರು ಪ್ರೆಸೆಂಟ್ ಪ್ರಪಂಚ 0% ಲವ್ ಚಿತ್ರಕ್ಕೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿ ಅನುಭವ ಗಳಿಸಿದ್ದರು. ಧರ್ಮ ಕೀರ್ತಿರಾಜ್ ಈ ಚಿತ್ರದ ನಾಯಕನಾಗಿದ್ದರೆ, ರಿಷಾ ಗೌಡ ಮತ್ತು ಅನುಷಾ ರೈ ಧರ್ಮ ಕೀರ್ತಿರಾಜ್ಗೆ ನಾಯಕಿಯರಾಗಿದ್ದಾರೆ. ಹಿರಿಯ ನಟ ಶಶಿಕುಮಾರ್ ಚಿತ್ರದಲ್ಲಿ ಸಹಾಯಕ ಪೊಲೀಸ್ ಆಯುಕ್ತರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅನುಷಾ ರೈ ಈ ಚಿತ್ರದಲ್ಲಿ ಪತ್ರಿಕಾ ವರದಿಗಾರ್ತಿಯಾಗಿ ಅಭಿನಯಿಸಿದ್ದಾರೆ. ಏಪ್ರಿಲ್ 17 ರಂದು ಚಿತ್ರ ರಾಜ್ಯಾದ್ಯಂತ ತೆರೆಗೆ ಬರುತ್ತಿದೆ.

Bangalore 3

ನಿರ್ಮಾಪಕ ವೆಂಕಟೇಶಮೂರ್ತಿ ಮಾತನಾಡಿ "ನಾನು ಕಷ್ಟಪಟ್ಟು ಇಷ್ಟಪಟ್ಟು ಈ ಸಿನಿಮಾ ಮಾಡಿದ್ದೇನೆ. ಈಗ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ನಿಮ್ಮೆಲ್ಲರ ಸಹಕಾರ ಪ್ರೋತ್ಸಾಹ ಸಿಗಬೇಕಿದೆ" ಎಂದು ಹೇಳಿದರು.
ನಿಜ ಜೀವನದ ಒಂದು ಘಟನೆ ಈ ಚಿತ್ರಕ್ಕೆ ಸ್ಕ್ರಿಪ್ಟ್ ಬರೆಯಲು ನನಗೆ ಸ್ಫೂರ್ತಿ ನೀಡಿತು ಎಂದು ನಿರ್ದೇಶಕ ಕಾರ್ತಿಕ್ ಹೇಳಿದರು. "ನಾನು ಧರ್ಮ ಕೀರ್ತಿರಾಜ್ ಅವರಿಗೆ ಸ್ಕ್ರಿಪ್ಟ್ ಹೇಳಿದಾಗ ಅವರು ಗ್ರೀನ್ ಸಿಗ್ನಲ್ ನೀಡಿದರು. ಈ ಸಿನಿಮಾದಲ್ಲಿ ಪೋಷಕರಿಗೆ ಒಂದು ಸಂದೇಶವಿದೆ. ಜೊತೆಗೆ ಕಮರ್ಷಿಯಲ್ ಅಂಶಗಳು ಮತ್ತು ಮನರಂಜನೆಯೂ ಇದ್ದು, ಮಾಧ್ಯಮದ ಮಿತ್ರರು ಸೇರಿದಂತೆ ಪ್ರತಿಯೊಬ್ಬರ ಬೆಂಬಲ ನಮ್ಮ ಚಿತ್ರಕ್ಕಿರಲಿ" ಎಂದು ನಿರ್ದೇಶಕರು ಕೇಳಿಕೊಂಡರು.
ನಾಯಕ ನಟ ಧರ್ಮ ಕೀರ್ತಿರಾಜ್ ಮಾತನಾಡಿ "ವೆಂಕಟೇಶಮೂರ್ತಿ ಹಾಗೂ ಕಾರ್ತಿಕ್ ಸೇರಿ ಈ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ಈ ಹಿಂದೆ ನಿರ್ಮಾಪಕರು ಮತ್ತು ನಾನು "ಚಾಣಾಕ್ಷ" ಎನ್ನುವ ಸಿನಿಮಾ ಮಾಡಿದ್ದೆವು, ಆದರೆ ಈ ಸಿನಿಮಾದ ಕಥೆ ಅದಕ್ಕಿಂತ ತೀರಾ ವಿಭಿನ್ನವಾಗಿದೆ.

Bangalore 4

ಕಾರ್ತಿಕ್ ಕಾರ್ಪೊರೇಟ್ ಬದುಕನ್ನು ತೊರೆದು ಚಿತ್ರನಿರ್ದೇಶಕರಾಗಿದ್ದಾರೆ. ಚಿತ್ರತಂಡದ ಎಲ್ಲರೂ ಒಟ್ಟಾಗಿ ಈ ಚಿತ್ರ ಸುಂದರವಾಗಿ ಮೂಡಿಬಂದಿದೆ. ಚಿತ್ರದಲ್ಲಿ ನನ್ನದು ಪಿಜ್ಜಾ ಡೆಲಿವರಿ ಬಾಯ್ ಪಾತ್ರ. ಅವನು ಜೀವನದಲ್ಲಿ ಏನನ್ನಾದರೂ ಸಾಧಿಸಬೇಕೆನ್ನುವ ಮನೋಭಾವದಲ್ಲಿರುವ ವ್ಯಕ್ತಿ. ಹಾಗೆ ಸಿನಿಮಾ ಕಥೆ ಸಾಗುತ್ತದೆ. ಇದರಲ್ಲೊಂದು ಲವ್ ಸ್ಟೋರಿ ಸಹ ಇದೆ. ಒಟ್ಟಾರೆ ಪ್ರೇಕ್ಷಕರಿಗೆ ಬೇಕಾಗುವ ಅಂಶಗಳೆಲ್ಲಾ ಇದರಲ್ಲಿದೆ. ಪ್ರತಿಯೊಬ್ಬರೂ ಬಹಳ ಡೆಡಿಕೇಟೆಡ್ ಆಗಿ ಸಿನಿಮಾ ಮಾಡಿದ್ದಾರೆ. ಹಾಗಾಗಿ ಈ ಸಿನಿಮಾ ಇಷ್ಟು ಉತ್ತಮವಾಗಿ ಬಂದಿದೆ. ಇನ್ನು ನಿಮ್ಮೆಲ್ಲರ ಸಹಕಾರ ಬೇಕಿದೆ" ಎಂದು ಹೇಳಿದರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ