- ರಾಘವೇಂದ್ರ ಅಡಿಗ ಎಚ್ಚೆನ್.

ಕನ್ನಡ ಚಿತ್ರರಂಗ ಕಂಡ ಅಪರೂಪದ ಕಲಾವಿದ, ಹಾಸ್ಯ ನಟ ಬ್ಯಾಂಕ್‌ ಜನಾರ್ಧನ್‌ (76) ಅವರು ನಿಧನರಾಗಿದ್ದಾರೆ.

ಮಧ್ಯರಾತ್ರಿ 2.30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಬ್ಯಾಂಕ್‌ ಜನಾರ್ಧನ್‌ ಅವರು ಕೊನೆಯುಸಿರೆಳೆದಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ನಟ ಬ್ಯಾಂಕ್‌ ಜನಾರ್ಧನ್‌ ಸುಲ್ತಾನ್ ಪಾಳ್ಯದ

ಅವರ ಮನೆ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.  ಜನಾರ್ಧನ್ ಪುತ್ರ ಗುರುಪ್ರಸಾಸ್ ಈ ಮಾಹಿತಿ ನೀಡಿದ್ದಾರೆ.

1949ರ ಸಮಯದಲ್ಲಿ ಬ್ಯಾಂಕ್ ಜನಾರ್ಧನ್ ಅವರು ಚಿತ್ರದುರ್ಗದ ಹೊಳಲ್​ಕೆರೆಯಲ್ಲಿ ಜನಿಸಿದರು. 1985ರಲ್ಲಿ ‘ಪಿತಾಮಹ’ ಚಿತ್ರದ ಮೂಲಕ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು. ನಂತರ ‘ಬೆಟ್ಟದ ತಾಯಿ’, ‘ಪೊಲೀಸ್ ಹೆಂಡತಿ’, ‘ಶ್​..’, ‘ತರ್ಲೆ ನನ್ಮಗ’ ಹೀಗೆ ಹಲವು ಚಿತ್ರಗಳಲ್ಲಿ ಅವರು ನಟಿಸಿದರು. 2016ರಿಂದ ಈಚೆಗೆ ಅವರು ಚಿತ್ರರಂಗದಲ್ಲಿ ಅಷ್ಟಾಗಿ ಆ್ಯಕ್ಟೀವ್ ಆಗಿರಲಿಲ್ಲ. 2022ರ ‘ಮಠ’ ಹಾಗೂ 2023ರ ‘ಉಂಡೇನಾಮ’ ಚಿತ್ರದಲ್ಲಿ ಅವರು ನಟಿಸಿದ್ದರು.

ಹೆಸರು ಬಂದಿದ್ದು ಹೇಗೆ?

ಜನಾರ್ಧನ್ ಅವರಿಗೆ ಬ್ಯಾಂಕ್ ಜನಾರ್ಧನ್ ಎಂದು ಹೆಸರು ಬರಲೂ ಕೂಡ ಕಾರಣವಿದೆ. ಜನಾರ್ಧನ್ ಅವರು ಚಿತ್ರದುರ್ಗದ ಸಮೀಪದ ಹೊಳಲ್​ಕೆರೆ ಬಳಿಯ ಬ್ಯಾಂಕ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ಅವರಿಗೆ ಕಲೆಯ ಬಗ್ಗೆ ಆಸಕ್ತಿ ಇತ್ತು. ಹೀಗಾಗಿ, ನಾಟಕಗಳನ್ನು ಮಾಡಿಕೊಂಡಿದ್ದರು. ಅವರ ನಾಟಕವನ್ನು ನೋಡಿ ಧೀರೇಂದ್ರ ಗೋಪಾಲ್ ಅವರು ಇಂಪ್ರೆಸ್ ಆದರು. ಬೆಂಗಳೂರಿಗೆ ಬರುವಂತೆ ಅವರು ಹೇಳಿದ್ದರು.

ನಂತರ ಒಂದೂವರೆ ವರ್ಷ ಬಿಟ್ಟು ಜನಾರ್ಧನ್ ಅವರು ಬೆಂಗಳೂರಿಗೆ ಬಂದರು. ಅವರು ‘ಊರಿಗೆ ಉಪಕಾರಿ’ ಸಿನಿಮಾದಲ್ಲಿ ವಜ್ರಮುನಿ ಬಾಡಿಗಾರ್ಡ್ ಪಾತ್ರ ಮಾಡಿದರು. ವಿಷ್ಣುವರ್ಧನ್ ಅವರು ಈ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಇದ್ದರು. ಅವರು ಸುಮಾರು 800ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ.

ನಾಟಕಗಳಿಂದ ಆರಂಭ ಆದ ಅವರ ಬದುಕು ನಂತರ ಸಿನಿಮಾಗಳತ್ತ ಹೊರಳಿತು. ಸಣ್ಣ ಪುಟ್ಟ ಪಾತ್ರಗಳನ್ನು ಮಾಡಿಕೊಂಡೇ ಅವರು ಆರಂಭದಲ್ಲಿ ಚಿತ್ರರಂಗದಲ್ಲಿ ಸಮಯ ಕಳೆದರು. ನಂತರದ ದಿನಗಳಲ್ಲಿ ಅವರಿಗೆ ದೊಡ್ಡ ದೊಡ್ಡ ಆಫರ್​ಗಳು ಬರೋಕೆ ಆರಂಭ ಆದವು.

 

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ