- ರಾಘವೇಂದ್ರ ಅಡಿಗ ಎಚ್ಚೆನ್.

ಆದಿಬಟ್ಲಾ ಸಮೀಪದ ಹೊರ ವರ್ತುಲ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತೆಲುಗು ನಟ ಭರತ್ ಕಾಂತ್ ಹಾಗೂ ಅವರ ಸ್ನೇಹಿತ ಸಾಯಿ ತ್ರಿಲೋಕ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇಬ್ಬರೂ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯವರಾಗಿದ್ದು, ಭಾನುವಾರ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ಮುಂದೆ ಸಾಗುತ್ತಿದ್ದ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದ ರಭಸ ಎಷ್ಟಿತ್ತಂದರೆ, ಲಾರಿಯ ಹಿಂದಿನ ಚಕ್ರಗಳೇ ಕಳಚಿ ಬಿದ್ದಿವೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಭರತ್ ಕಾಂತ್ ಮತ್ತು ಸಾಯಿ ತ್ರಿಲೋಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.
31 ವರ್ಷದ ಭರತ್ ಕಾಂತ್ ತೆಲುಗು ಡಿಜಿಟಲ್ ವಲಯದಲ್ಲಿ ನಟ ಹಾಗೂ ಡ್ಯಾನ್ಸರ್ ಆಗಿ ಜನಪ್ರಿಯರಾಗಿದ್ದರು. ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್‌ನಲ್ಲಿ ಸಾವಿರಾರು ಅಭಿಮಾನಿಗಳನ್ನು ಹೊಂದಿದ್ದ ಅವರು, ಹಲವು ಕಿರುಚಿತ್ರಗಳು ಮತ್ತು ತೆಲುಗು ಸಿನಿಮಾಗಳಲ್ಲೂ ನಟಿಸಿದ್ದರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ