ಕಲರ್ಸ್​ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್​​ಬಾಸ್ ಶೋನಲ್ಲಿ ವಿವಾದಗಳಿಗೇನೂ ಕಡಿಮೆ ಇಲ್ಲ. ಇದೀಗ ರಕ್ಷಿತಾ ವಿಚಾರದಲ್ಲಿ ಅಶ್ವಿನಿ ಗೌಡ ಮತ್ತು ನಟ ಕಿಚ್ಚ ಸುದೀಪ್ ವಿರುದ್ಧ ದೂರು ದಾಖಲಾಗಿದೆ.

ಬಿಗ್​​ಬಾಸ್ ಸ್ಪರ್ಧಿ ರಕ್ಷಿತಾ ಶೆಟ್ಟಿಗೆ ಅವಮಾನಕಾರಿ ಆಗುವಂತೆ ಹೇಳಿಕೆ ನೀಡಿರುವ ಆರೋಪದ ಮೇಲೆ ನಟ ಸುದೀಪ್ ಹಾಗೂ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲಾಗಿದೆ.ರಾಮನಗರ ಡಿವೈಎಸ್ಪಿ ಕಚೇರಿಯಲ್ಲಿ ಸಾಮಾಜಿಕ ಹೋರಾಟಗಾರ್ತಿ ಸಂಧ್ಯಾ ಪವಿತ್ರ ಎಂಬುವವರು ದೂರು ನೀಡಿದ್ದಾರೆ. ಸ್ಪರ್ಧಿ ಅಶ್ವಿನಿ ಗೌಡ ರಕ್ಷಿತಾ ಮೇಲೆ ಮಾನಹಾನಿಕರ ಪದ ಬಳಸಿದ್ದಾರೆ. ಕಾರ್ಯಕ್ರಮದ ನಿರೂಪಕರಾಗಿರುವ ನಟ ಕಿಚ್ಚ ಸುದೀಪ್ ಅವರು ರಕ್ಷಿತಾಗೆ ಬೆದರಿಕೆ ಹಾಕುವ ರೀತಿ ಮಾತನಾಡಿದ್ದಾರೆ. ಇದೆಲ್ಲವನ್ನೂ ಕೂಡಾ ಖಾಸಗಿ ವಾಹಿನಿ ಪ್ರಸಾರ ಮಾಡಿ ರಕ್ಷಿತಾ ಮಾನಹಾನಿಯಾಗುವಂತೆ ಮಾಡಿದೆ ಎಂದು ದೂರಿದ್ದಾರೆ.ಅಲ್ಲದೇ ಸ್ಪರ್ಧಿ ರಿಷಾ, ಸಹಸ್ಪರ್ಧಿ ಗಿಲ್ಲಿ ಮೇಲೆ ಹಲ್ಲೆ‌ ಮಾಡಿದ್ದಾರೆ. ಈ ಬಗ್ಗೆ ಕಾರ್ಯಕ್ರಮದ ಮುಖ್ಯಸ್ಥರು ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ಈ ಎಲ್ಲಾ ಅಂಶಗಳನ್ನ ಪರಿಗಣಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ