ಜಾಗೀರ್ದಾರ್*

ಹುಟ್ಟುಹಬ್ಬದ ಸಂಭ್ರಮದಲ್ಲಿರುವ ನಟಿ ರಾಗಿಣಿ ದ್ವಿವೇದಿ ಅವರಿಗೆ ಚಿತ್ರರಂಗ ಮತ್ತು ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಇನ್ನು ತಮ್ಮ ಹುಟ್ಟುಹಬ್ಬದ ಪ್ರಯುಕ್ತ ನಟಿ ರಾಗಿಣಿ ದ್ವಿವೇದಿ, ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಯಲ್ಲಿ ಪಡಿತರ ಚೀಟಿದಾರರಿಗೆ ದಿನಸಿ ವಿತರಿಸುವ  ಮೂಲಕ ಗಮನ ಸೆಳೆದಿದ್ದಾರೆ.

ಹೌದು, ನಟಿ ರಾಗಿಣಿ ದ್ವಿವೇದಿ ಸದ್ಯ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದಲ್ಲಿ ಅಭಿನಯಿಸುತ್ತಿರುವುದು ಅನೇಕರಿಗೆ ಗೊತ್ತಿರಬಹುದು. ಈ ಚಿತ್ರದಲ್ಲಿ ನಟಿ ರಾಗಿಣಿ ದ್ವಿವೇದಿ ಹಳ್ಳಿಯ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಯ ಲೋಪ-ದೋಷಗಳನ್ನು ಎತ್ತಿ ಹಿಡಿಯುವ ಪಾತ್ರ ರಾಗಿಣಿ ಅವರದ್ದು.

ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ನಟಿ ರಾಗಿಣಿ ದ್ವಿವೇದಿ, ತಮ್ಮ ಮುಂಬರುವ ಸಿನಿಮಾ ಮತ್ತು ಪಾತ್ರಕ್ಕೆ ತಕ್ಕಂತೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಗೆ ಅಡಿಯಿಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ ಪ್ರದೇಶದ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಯಲ್ಲಿ ತಾವೇ ಖುದ್ದಾಗಿ ನಿಂತುಕೊಂಡು ಪಡಿತರ ಚೀಟಿದಾರರಿಗೆ ದಿನಸಿ ಸಾಮಾನುಗಳನ್ನು ವಿತರಿಸುವ ಮೂಲಕ ಪಡಿತರ ವಿತರಣೆ ವ್ಯವಸ್ಥೆಯನ್ನು ತಿಳಿದುಕೊಂಡರು. ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಯಲ್ಲಿ ಪಡಿತರ ಚೀಟಿದಾರರು ಮತ್ತು ವಿತರಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಕಣ್ಣಾರೆ ಕಂಡುಕೊಳ್ಳುವ ಪ್ರಯತ್ನ ಮಾಡಿದ್ದಾರೆ.

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರತಂಡದ ಜೊತೆಗೆ ತಮ್ಮ ಹುಟ್ಟುಹಬ್ಬದ ಪ್ರಯುಕ್ತ ನಟಿ ರಾಗಿಣಿ ದ್ವಿವೇದಿ ಇಂಥದ್ದೊಂದು ವಿಭಿನ್ನ ರೀತಿಯ ಕಾರ್ಯಕ್ರಮ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು.

ಹುಟ್ಟು ಹಬ್ಬದ ಶುಭಾಶಯಗಳು*

 

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ