ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ತಮ್ಮ ಆರೋಗ್ಯದ ಕುರಿತು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.

ವೈದ್ಯರ ಕಟ್ಟುನಿಟ್ಟಿನ ಸೂಚನೆ ಮೇರೆಗೆ ತಾವು ಕೆಲವು ದಿನಗಳ ಕಾಲ ಸಂಪೂರ್ಣ ವಿಶ್ರಾಂತಿ ಪಡೆಯುತ್ತಿರುವುದಾಗಿ ಅಮಿತಾಭ್​ ಬಚ್ಚನ್​ ತಿಳಿಸಿದ್ದಾರೆ.

ವಿಶ್ರಾಂತಿ ಪಡೆದು ಚೇತರಿಸಿಕೊಳ್ಳಲು ಕೆಲವು ದಿನಗಳ ಕಾಲ ವಿರಾಮ ಪಡೆಯುವಂತೆ ವೈದ್ಯರು ಸಲಹೆ ನೀಡಿರುವುದರಿಂದ, ಸಾಮಾಜಿಕ ಜಾಲತಾಣಗಳಲ್ಲಿ ಎಂದಿನಂತೆ ಬರೆಯಲು ಸಾಧ್ಯವಾಗುತ್ತಿಲ್ಲ ಎಂದಿರುವ ಅವರು, ನಿಯಮಿತವಾಗಿ ತಮ್ಮ ಬರಹಗಳನ್ನು ಓದುವ ಅಭಿಮಾನಿಗಳಿಗೆ ಕ್ಷಮೆ ಕೋರಿದ್ದಾರೆ.

ಆದರೆ, ವೈದ್ಯರು ವಿಶ್ರಾಂತಿ ಪಡೆಯುವಂತೆ ಸೂಚಿಸಲು ಕಾರಣವಾದ ಆರೋಗ್ಯ ಸಮಸ್ಯೆಯ ಬಗ್ಗೆ ಬಿಗ್ಗ ಬಿ ಯಾವುದೇ ಮಾಹಿತಿ ನೀಡಿಲ್ಲ. ಹೀಗಾಗಿ, ಅಭಿಮಾನಿಗಳು ಅವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತಿದ್ದಾರೆ.

ತಮ್ಮ ಎಕ್ಸ್ ಖಾತೆಯಲ್ಲಿ ಈ ಕುರಿತು ಬರೆದಿರುವ ಅವರು, ನನ್ನನ್ನು ಕ್ಷಮಿಸಿ. ವಿಶ್ರಾಂತಿ ಪಡೆದು ಚೇತರಿಸಿಕೊಳ್ಳಲು ಕೆಲವು ದಿನಗಳ ವಿರಾಮ ತೆಗೆದುಕೊಳ್ಳುವಂತೆ ನನಗೆ ಸಲಹೆ ನೀಡಲಾಗಿದೆ. ಹೀಗಾಗಿ, ಸದ್ಯಕ್ಕೆ ಏನನ್ನೂ ಬರೆಯಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

ಇದಕ್ಕೂ ಒಂದು ದಿನ ಮೊದಲು ತಮ್ಮ ವೈಯಕ್ತಿಕ ಬ್ಲಾಗ್‌ನಲ್ಲಿಯೂ ಇದೇ ರೀತಿಯ ಸಂದೇಶವನ್ನು ಹಂಚಿಕೊಂಡಿದ್ದರು. ದಸರಾ ಹಬ್ಬದ ಶುಭಾಶಯಗಳನ್ನು ತಿಳಿಸುವುದರ ಜೊತೆಗೆ, ಸದ್ಯ ಚೇತರಿಕೆಗೆ ಹೆಚ್ಚಿನ ಆದ್ಯತೆ ನೀಡಬೇಕು ಮತ್ತು ಕೆಲವು ದಿನಗಳ ಕಾಲ ಸಂವಹನದಿಂದ ದೂರವಿರಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಹೇಳಿದ್ದರು.

ಎಲ್ಲರಿಗೂ ಮೊದಲಿಗೆ ದಸರಾ ಹಬ್ಬದ ಶುಭಾಶಯಗಳು. ಪ್ರೀತಿ, ಸಂತೋಷ, ಸಂತೃಪ್ತಿ ಮತ್ತು ಪ್ರಾರ್ಥನೆಗಳು ನಿಮ್ಮದಾಗಲಿ. ಸದ್ಯ ಕಟ್ಟುನಿಟ್ಟಿನ ವಿಶ್ರಾಂತಿ ಮತ್ತು ಚೇತರಿಕೆಯಲ್ಲಿದ್ದೇನೆ. ಹಾಗಾಗಿ, ಸಂವಹನ ನಡೆಸಲು ಅನುಮತಿಯಿಲ್ಲ. ದಯವಿಟ್ಟು ಕ್ಷಮಿಸಿ ಎಂದು ಬರೆದುಕೊಂಡಿದ್ದರು.

ಆದರೆ, ಇದನ್ನೇ ನನ್ನ ಗೌರವಪೂರ್ವಕ ಪ್ರತಿಕ್ರಿಯೆ ಎಂದು ಪರಿಗಣಿಸಿ. ಸಾಧ್ಯವಾದರೆ, ಮುಂದಿನ ದಿನಗಳಲ್ಲಿ ಮತ್ತೆ ಬರೆಯುತ್ತೇನೆ ಎಂದೂ ತಿಳಿಸಿದ್ದಾರೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ