Sj*

ಸನ್ಮಾನ್ಯ ಮುಖ್ಯಮಂತ್ರಿ ಶ್ರೀಸಿದ್ದರಾಮಯ್ಯ ಅವರಿಗೆ ಧನ್ಯವಾದ ತಿಳಿಸಿದ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ* . ರಾಜ್ಯದಲ್ಲಿ ಚಲನಚಿತ್ರ ಹಾಗೂ ಇತರೆ ಚಿತ್ರೀಕರಣಗಳಿಗೆ ಬೇಕಾಗಿರುವ ಅನುಮತಿಯನ್ನು ಒಂದೇ ವೇದಿಕೆಯಲ್ಲಿ ಪಡೆಯಲು "ಸಿನಿ ಮಿತ್ರ" ಎಂಬ ಆನ್ ಲೈನ್ ಡಿಜಿಟಲ್ ವ್ಯವಸ್ಥೆ ಜಾರಿಗೊಳಿಸುವುದು. ರಾಜ್ಯದ ಪ್ರವಾಸಿ ತಾಣಗಳು, ಐತಿಹಾಸಿಕ ಸ್ಮಾರಕಗಳು, ಚಿತ್ರೀಕರಣ ಮಾಹಿತಿಗಳ ಸ್ಥಳಗಳ ಮಾಹಿತಿ ಬಗ್ಗೆ ಕರ್ನಾಟಕ ಫಿಲ್ಮ್ ಲೋಕೇಷನ್ ಮ್ಯಾಪ್ ಒಂದು ಕೋಟಿ ರೂಗಳಲ್ಲಿ ಅಭಿವೃದ್ಧಿ ಪಡಿಸುವುದು. ಗುಣಾತ್ಮಕ ಚಿತ್ರಗಳಿಗೆ ನೀಡುತ್ತಿರುವ ಸಹಾಯಧನ ಕೆಲವು ವರ್ಷಗಳಿಂದ ಸ್ಥಗಿತಗೊಂಡಿದ್ದು, ಈ ವರ್ಷ ಮೂರು ವರ್ಷಗಳ ಚಲನಚಿತ್ರಗಳನ್ನು ಗುರುತಿಸಿ ಸಹಾಯಧನ ನೀಡಲು 20 ಕೋಟಿ ರೂಪಾಯಿ ಬಿಡುಗಡೆ ಮಾಡುತ್ತಿರುವುದು. ಇಲಾಖೆಯಲ್ಲಿ ಲಭ್ಯವಿರುವ ಛಾಯಾಚಿತ್ರಗಳನ್ನು, ಡಾಕ್ಯುಮೆಂಟರಿಗಳನ್ನು ಡಿಜಿಟಲ್ ಮಾದರಿಗೆ ಪರಿವರ್ತಿಸಲು "ಡಿಜಿಟಲ್ ದೃಶ್ಯ ಕರ್ನಾಟಕ" ವೇದಿಕೆ ಕಲ್ಪಿಸಲು ಐದು ಕೋಟಿ ರೂಪಾಯಿ ಬಿಡುಗಡೆ ಮಾಡುತ್ತಿರುವುದು. ಮೈಸೂರಿನ ಫಿಲ್ಮ್ ಸಿಟಿಯನ್ನು ಸ್ಥಾಪಿಸಲು ಈ ಮೊದಲು 500 ಕೋಟಿ ರೂಗಳಿಗೆ ಅನುಮೋದನೆ ನೀಡಲಾಗಿತ್ತು. ಫಿಲ್ಮ್ ಸಿಟಿ ಸೌಲಭ್ಯ ಸೇರಿದಂತೆ ಪ್ರವಾಸಿಗರಿಗೆ ಅನುಕೂಲವಾಗುವಂತೆ ಪಿಪಿಪಿ ಮಾದರಿಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಿ ವಹಿವಾಟುದಾರರನ್ನು ನೇಮಿಸುವುದು . ಈ ಮೇಲ್ಕಂಡ ವಿಷಯಗಳನ್ನು ಮುಖ್ಯಮಂತ್ರಿಗಳು ಈ ಸಲದ ಬಜೆಟ್ ನಲ್ಲಿ ಚಿತ್ರರಂಗಕ್ಕೆ ಕೊಡುಗೆಯಾಗಿ ನೀಡಿದ್ದಾರೆ. ಚಿತ್ರರಂಗಕ್ಕೆ ಹಲವು ಕೊಡುಗೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಪರವಾಗಿ ಧನ್ಯವಾದ ತಿಳಿಸುತ್ತೇವೆ ಎಂದು ನಿರ್ಮಾಪಕರ ಸಂಘದ ಅಧ್ಯಕ್ಷರಾದ ಎಂ.ಜಿ.ರಾಮಮೂರ್ತಿ ಹೇಳಿದ್ದಾರೆ.

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ