ರಾಘವೇಂದ್ರ ಅಡಿಗ ಎಚ್ಚೆನ್.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್​ನಿಂದ ಮಹತ್ವದ ತೀರ್ಪು ಹೊರಬಿದ್ದಿದೆ. ನಟ ದರ್ಶನ್​​, ಪವಿತ್ರಾ ಗೌಡ ಸೇರಿ 7 ಆರೋಪಿಗಳ ಜಾಮೀನು ರದ್ದು ಮಾಡಿ ನ್ಯಾ.ಜೆ.ಬಿ ಪರ್ದಿವಾಲಾ ಹಾಗೂ ನ್ಯಾ.ಆರ್.ಮಹದೇವನ್ ಅವರ ಪೀಠ ಆದೇಶ ಹೊರಡಿಸಿದೆ. ಈ ಮೂಲಕ ನಟ ದರ್ಶನ್​ ಮತ್ತೆ ಜೈಲಿಗೆ ಹೋಗುವುದು ಫಿಕ್ಸ್‌ ಆಗಿದೆ. ಹೈಕೋರ್ಟ್‌ ತೀರ್ಪಿನಲ್ಲಿ ದೋಷ ಇದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

download (6)

ಹೈಕೋರ್ಟ್ ಆದೇಶದಲ್ಲಿ ದೋಷ’ : ‘ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ಕೆಲ ಕಾರಣಗಳಿಂದ ಜಾಮೀನು ನೀಡಿದ್ದಾರೆ’ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಜೈಲಲ್ಲಿ ಐಷಾರಾಮಿ ಜೀವನ ನಡೆಸಿದ ದರ್ಶನ್ ಬಗ್ಗೆಯೂ ಸುಪ್ರೀಂ ಕಿಡಿಕಾರಿದ್ದು, ಜೈಲು ಸೂಪರಿಂಟೆಂಡ್​ನನ್ನು ಸಸ್ಪೆಂಡ್ ಮಾಡಬೇಕಿತ್ತು’ ಎಂದು ಸುಪ್ರೀಂ ಅಭಿಪ್ರಾಯಪಟ್ಟಿದೆ.
ಆರೋಪಿಗಳಿಗೆ ಜೈಲಿನಲ್ಲಿ ಫೈವ್​​ ಸ್ಟಾರ್​ ಟ್ರೀಟ್‌ಮೆಂಟ್ ಕೊಟ್ಟರೆ ಹುಷಾರ್ ಎಂದು ಜೈಲಾಧಿಕಾರಿಗಳಿಗೆ ಸುಪ್ರೀಂ ಎಚ್ಚರಿಕೆ ಕೊಟ್ಟಿದೆ. ಜೈಲಿಗೆ ಹೋದ ನಂತರ ಆರೋಪಿ ಸಾಮಾನ್ಯ ಕೈದಿಯಂತೆ ಇರಬೇಕು. ಈ ಮುಂಚೆ ದರ್ಶನ್​​ಗೆ ಫೈವ್ ಸ್ಟಾರ್ ಟ್ರೀಟ್‌ಮೆಂಟ್ ಕೊಡಲಾಗಿದೆ. ಇನ್ಮುಂದೆ ಸಾಮಾನ್ಯ ಕೈದಿಯಂತೆ ಇರಬೇಕು.

download (5)

ರಾಜ್ಯ ಸರ್ಕಾರ ಯಾರಿಗಾದರೂ ಫೈವ್​​ ಸ್ಟಾರ್ ಟ್ರೀಟ್‌ಮೆಂಟ್ ನೀಡುತ್ತಿರುವ ಛಾಯಾಚಿತ್ರಗಳು ಅಥವಾ ಯಾವುದೇ ವೀಡಿಯೊವನ್ನು ನಾವು ನೋಡಿದರೆ ಮೊದಲು ನಿಮ್ಮನ್ನು ಸಸ್ಪೆಂಡ್ ಮಾಡಲಾಗುತ್ತದೆ ಎಂದು ಕೋರ್ಟ್ ಖಡಕ್ ವಾರ್ನಿಂಗ್ ನೀಡಿದೆ.
ಸದ್ಯ ಡೆವಿಲ್ ಸಿನಿಮಾ ಶೂಟಿಂಗ್​​ನಲ್ಲಿ ಬ್ಯುಸಿ ಆಗಿದ್ದ ದರ್ಶನ್​ಗೆ ಬಿಗ್ ಶಾಕ್ ಎದುರಾಗಿದ್ದು, ಮತ್ತೆ ನಟ ಜೈಲು ಪಾಲಾಗ್ತಿದ್ದಾರೆ. ದರ್ಶನ್ ಜೊತೆ ಪವಿತ್ರಾ ಗೌಡ, A6, ಜಗದೀಶ್ ಅಲಿಯಾಸ್ ಜಗ್ಗ, A7 ಅನುಕುಮಾರ್ ಅಲಿಯಾಸ್ ಅನು, ಎ14 ಪ್ರದೂಶ್, ಎ11 ನಾಗರಾಜು ಅಲಿಯಾಸ್ ನಾಗ, ಎ12 , ಲಕ್ಷ್ಮಣ್ ಜಾಮೀನು ಕೂಡ ರದ್ದಾಗಿದ್ದು, ಇವರುಗಳು ಕೂಡ ಸೆರವಾಸ ಅನುಭವಿಸಲಿದ್ದಾರೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ