ಜಾಗೀರ್ದಾರ್*

ಕರುನಾಡ ಚಕ್ರವರ್ತಿ ಶಿವರಾಜ್‍ಕುಮಾರ್ ಅವರು ನಾಯಕರಾಗಿ ನಟಿಸುತ್ತಿರುವ ಹಾಗೂ ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ "ಡ್ಯಾಡ್" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗಷ್ಟೇ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ನಂದಿ ದೇವಸ್ಥಾನದಲ್ಲಿ ನೆರವೇರಿತ್ತು. ಪ್ರಸ್ತುತ ಅರಮನೆ ನಗರಿ ಮೈಸೂರಿನಲ್ಲೇ "ಡ್ಯಾಡ್" ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯದಲ್ಲೇ ಎರಡನೇ ಹಂತದ ಚಿತ್ರೀಕರಣ ಪ್ರಾರಂಭವಾಗಲಿದೆ.

ಹರೀಶ್‍ ಪೆದ್ದಿ ಅವರು ಮೈರಾ ಕ್ರಿಯೇಷನ್ಸ್ ಲಾಂಛನದಡಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ತೆಲುಗಿನ ಖ್ಯಾತ ನಿರ್ದೇಶಕ ಅನಿಲ್‍ ಕನ್ನೆಗಂಟಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ನಿರ್ಮಾಪಕರಿಗೆ ಹಾಗೂ, ನಿರ್ದೇಶಕರಿಗೆ ಇದು ಕನ್ನಡದಲ್ಲಿ ಮೊದಲ ಚಿತ್ರ. ಬಿ.ಎಸ್‍. ಸುಧೀಂದ್ರ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಶಿವರಾಜ್‍ಕುಮಾರ್ ಅವರು ಅನೇಕ ವರ್ಷಗಳ ನಂತರ ಈ ಚಿತ್ರದಲ್ಲಿ ವೈದ್ಯನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಶರ್ಮಿಳಾ ಮಾಂಡ್ರೆ, ಬೇಬಿ ನಕ್ಷತ್ರ, ಬಾಬು, ಮಲಯಾಳಂ ನಟ ಸೂರಜ್‍ ವೆಂಜರಮೂಡು ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಕನ್ನಡ, ತೆಲುಗು ಮತ್ತು ಮಲಯಾಳಂನಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಅರ್ಜುನ್‍ ಜನ್ಯ ಅವರ ಸಂಗೀತ ನಿರ್ದೇಶನ ಹಾಗೂ ಬಿ.ರಾಜಶೇಖರ್ ಅವರ ಛಾಯಾಗ್ರಹಣವಿದೆ.

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ