*ಕಲ್ಪವೃಕ್ಷ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಶ್ರೀಮತಿ ಜಯಮ್ಮ ಪದ್ಮರಾಜ್ ನಿರ್ಮಿಸಿರುವ, ರಾಮಪ್ಪ ಸೋಮಪ್ಪ ಮೇಗಲಮನಿ, ಸೋಮಶೇಖರ್ ಜಿ ಪಟ್ಟಣಶೆಟ್ಟಿ ಅವರ ಸಹ ನಿರ್ಮಾಣವಿರುವ ಹಾಗೂ MJ ಜಯರಾಜ್ ಅವರು ನಿರ್ದೇಶನದ ಜೊತೆಗೆ ನಾಯಕನಾಗೂ ನಟಿಸಿರುವ "ದೈವ" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ನಿರ್ದೇಶಕರ ತಾಯಿ ಹಾಗೂ ನಿರ್ಮಾಪಕಿ ಜಯಮ್ಮ ಪದ್ಮರಾಜ್ ಅವರೆ ಟ್ರೇಲರ್ ಬಿಡುಗಡೆ ಮಾಡಿ, ಮಗ MJ ಜಯರಾಜ್ ನಿರ್ದೇಶನದ ಜೊತೆಗೆ ನಾಯಕನಾಗಿಯೂ ನಟಿಸಿರುವ "ದೈವ" ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಕುತೂಹಲ ಮೂಡಿಸಿದ್ದು, ಚಿತ್ರ ನೋಡುವ ಕಾತುರವನ್ನು ಹೆಚ್ಚಿಸಿದೆ‌. ಟ್ರೇಲರ್ ಅನಾವರಣದ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.*

daivas

*ಇಂಜಿನಿಯರ್ ಕಾಲೇಜಿನ ಅಸುಸ್ಟೆಂಟ್ ಪ್ರೊಫೆಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ನಾನು, ಕೆಲವು ದಿನಗಳ ನಂತರ ಕೆಲಸಕ್ಕೆ ರಾಜಿನಾಮೆ ನೀಡಿ ನಿರ್ದೇಶಕ ರವಿ ಶ್ರೀವತ್ಸ ಅವರ ಬಳಿ ಸಹಾಯಕ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಲು ಆರಂಭ ಮಾಡಿದೆ. ನಂತರ ಸಿನಿಮಾ ಬಗ್ಗೆ ತಿಳಿದುಕೊಂಡು ಈ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ನಾಯಕನಾಗಿಯೂ ನಟಿಸಿದ್ದೇನೆ. ನಮ್ಮ ತಾಯಿ ನಿರ್ಮಾಣ ಮಾಡಿದ್ದಾರೆ‌. "ದೈವ" ಎಂದರೆ ಹೆಚ್ಚಾಗಿ ನೆನಪಾಗುವುದು ರಿಷಭ್ ಶೆಟ್ಟಿ ಅವರ "ಕಾಂತಾರ" ಸಿನಿಮಾ. ಅದರಲ್ಲಿ ಅವರು ದಕ್ಷಿಣ ಕನ್ನಡದ ದೈವಗಳ ಬಗ್ಗೆ ಹೇಳಿದ್ದಾರೆ. ನಾನು ಈ ಚಿತ್ರದಲ್ಲಿ ಮಂಡ್ಯ ಜಿಲ್ಲೆಯ ಜೋಗಿಗಳ ಬಗ್ಗೆ ಹೇಳಿದ್ದೇನೆ. ಇದೊಂದು ಪಕ್ಕಾ ಹಳ್ಳಿ ಸೊಗಡಿನ ಸಿನಿಮಾ ಕೂಡ‌. ಯಾವುದೇ ಸೆಟ್ ಹಾಕದೆ, ಶಿರಸಿ ಬಳಿಯ ಹಳ್ಳಿಯೊಂದರಲ್ಲಿ ಚಿತ್ರದ ಹೆಚ್ಚಿನ ಭಾಗದ ಚಿತ್ರೀಕರಣ ಮಾಡಿದ್ದೇನೆ. ಎರಡು ಶೇಡ್ ಗಳಲ್ಲಿ ನನ್ನ ಪಾತ್ರವಿರುತ್ತದೆ. ಈಗಾಗಲೇ ಟೀಸರ್ ಹಾಗೂ ಹಾಡುಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಟ್ರೇಲರ್ ಗೂ ಮೆಚ್ಚುಗೆ ದೊರಕಿದೆ. ಚಿತ್ರತಂಡದ ಸಹಕಾರದಿಂದ ಉತ್ತಮವಾಗಿ ಮೂಡಿಬಂದಿರುವ ನಮ್ಮ ಚಿತ್ರ ಫೆಬ್ರವರಿ 12 ರಂದು ಬಿಡುಗಡೆಯಾಗುತ್ತಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.*

*ಗ್ರಾಮೀಣ ಸೊಗಡಿನ ಈ ಚಿತ್ರದಲ್ಲಿ ನನ್ನದು NGO ಮೂಲಕ ಹಳ್ಳಿಯ ಮಕ್ಕಳಿಗೆ ಶಿಕ್ಷಣವನ್ನು ನೀಡುವ ಶಿಕ್ಷಕನ ಪಾತ್ರ ಮಾಡಿದ್ದಾರೆ ಹಾಗೂ ಚಿತ್ರದ ಸಹ ನಿರ್ದೇಶಕನಾಗಿಯೂ ಕೆಲಸ ಮಾಡಿದ್ದೇನೆ ಎಂದು ಪತ್ರಕರ್ತ, ನಟ, ಮಂಜುರಾಜ್ ಸೂರ್ಯ(ವಿಸಿಎನ್ ಮಂಜು) ಹೇಳಿದರು. ನಾಯಕಿಯರಾದ ನೀತು ರಾಯ್, ಸುರಭಿ ರೆಡ್ಡಿ, ನಟ ಅರುಣ್ ಬಚ್ಚನ್ ಸಂಗೀತ ನಿರ್ದೇಶಕ ವಿಜೇತ್ ಮಂಜಯ್ಯ ಹಾಗೂ ಛಾಯಾಗ್ರಾಹಕ ಸಿದಾರ್ಥ್ ಸೇರಿದಂತೆ ಚಿತ್ರತಂಡದ ಅನೇಕ ಸದಸ್ಯರು "ದೈವ" ಚಿತ್ರದ ಕುರಿತು ಮಾತನಾಡಿದರು.*

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ