ಜಾಗೀರ್ದಾರ್*
ಶಮಿಕ ಎಂಟರ್ ಪ್ರೈಸಸ್ ಲಾಂಛನದಲ್ಲಿ ರಾಧಿಕಾ ಕುಮಾರಸ್ವಾಮಿ ನಿರ್ಮಿಸಿ, ನಾಯಕಿಯಾಗೂ ನಟಿಸಿದ್ದ “ಭೈರಾದೇವಿ” ಶೂಟಿಂಗನ್ನು ಮರೆಯುವಂತೆಯೇ ಇಲ್ಲ
ನಿರ್ದೇಶಕರು ಹೆಣ್ಣು ಅಘೋರಿಯ ಬಗ್ಗೆ ಪುಸ್ತಕದಲ್ಲಿ ಓದಿದ್ದು. ಅದರ ಬಗ್ಗೆ ಒಂದು ಕಥೆಯನ್ನು ಸಿದ್ದಮಾಡಿಕೊಂಡು.. ಕಥೆಯನ್ನು ರೆಕಾರ್ಡ್ ಮಾಡಿಕೊಂಡು ರಾಧಿಕಾ ಕುಮಾರಸ್ವಾಮಿ ಅವರಿಗೆ ಕಥೆ ಕೇಳಿಸಲಾಗಿತ್ತು. ಕಥೆ ಇಷ್ಟಪಟ್ಟ ರಾಧಿಕಾ ಕುಮಾರಸ್ವಾಮಿ ಅವರು “ಭೈರಾದೇವಿ” ಚಿತ್ರಕ್ಕೆ ಚಾಲನೆ ನೀಡಿದ್ದರು..
'ನನಗೆ ಮೊದಲಿನಿಂದಲೂ ಸ್ವಲ್ಪ ಭಯದ ಸ್ವಭಾವ. ಅದರಲ್ಲೂ ಸ್ಮಶಾನ ಎಂದರೆ ಇನ್ನೂ ಭಯ. ನಿರ್ದೇಶಕರು ಈ ಚಿತ್ರದ ಕಥೆ ಹೇಳಿದಾಗ ಹೆಚ್ಚಿನ ಭಾಗದ ಚಿತ್ರೀಕರಣ ಸ್ಮಶಾನದಲ್ಲೇ ನಡೆಯುತ್ತದೆ ಎಂದರು ನಾನು ಸೆಟ್ ಹಾಕೋಣ ಎಂದೆ. ಕೊನೆಗೂ ನನ್ನನ್ನು ನಿರ್ದೇಶಕರು ಹಾಗೂ ನನ್ನ ಸಹೋದರ ಒಪ್ಪಸಿ ಸ್ಮಶಾನದಲ್ಲೇ ಚಿತ್ರೀಕರಣ ಮಾಡಿಸಿದರು. ಈ ಚಿತ್ರ ಆದ ಮೇಲೆ ಒಬ್ಬಳೇ ಸ್ಮಶಾನಕ್ಕೆ ಹೋಗಿ ಬರುವ ಧೈರ್ಯ ಬಂದಿತ್ತು...
ಎನ್ನುವ ರಾಧಿಕಾ ಕುಮಾರಸ್ವಾಮಿ ತಮ್ಮ ತಾರಾವೃತ್ತಿಯಲ್ಲೇ 'ಭೈರಾದೇವಿ ' ಸ್ಪೆಷಲ್ ಚಿತ್ರವಂತೆ