ಸರಸ್ವತಿ ಜಾಗೀರ್ದಾರ್*
ಸುರಮ್ ಮೂವೀಸ್ ಲಾಂಛನದಲ್ಲಿ ಜಯರಾಮ ದೇವಸಮುದ್ರ ನಿರ್ಮಿಸಿರುವ, ಸುರಾಗ್ ನಿರ್ದೇಶನದ ಹಾಗೂ ಪ್ರವೀರ್ - ರಿಷಿಕಾ ನಾಯಕ ನಾಯಕಿಯಾಗಿ ನಟಿಸಿರುವ "ನಿದ್ರಾದೇವಿ next door" ಚಿತ್ರ ಈ ವಾರ(ಸೆಪ್ಟೆಂಬರ್ 12) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಹಾಡುಗಳು, ಟೀಸರ್ ಹಾಗೂ ಟ್ರೇಲರ್ ಮೂಲಕ ಜನಪ್ರಿಯವಾಗಿರುವ ಈ ಚಿತ್ರವನ್ನು ತೆರೆಯ ಮೇಲೆ ನೋಡಲು ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ.
ನಿದ್ರಾದೇವಿ next door ಸಿನಿಮಾದಲ್ಲಿ ಪ್ರವೀರ್ ಗೆ ಜೋಡಿಯಾಗಿ ರಿಷಿಕಾ ನಟಿಸಿದ್ದಾರೆ. ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಶ್ರುತಿ ಹರಿಹರನ್, ಹಿರಿಯ ನಟ ಕೆ.ಎಸ್.ಶ್ರೀಧರ್, ಸುಧಾರಾಣಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಶ್ರೀವತ್ಸ, ಅನೂಪ್, ಐಶ್ವರ್ಯಾ ಗೌಡ, ಮಾಸ್ಟರ್ ಸುಜಯ್ ರಾಮ್, ಕಾರ್ತಿಕ್ ಪತ್ತಾರ್ ಮತ್ತು ಅನುರಾಗ್ ಪಾಟೀಲ್ ಸೇರಿದಂತೆ ಇತರರು ತಾರಾಬಳಗದಲ್ಲಿದ್ದಾರೆ.
ನಿರ್ಮಾಪಕ ಜಯರಾಮ ದೇವಸಮುದ್ರ ಅವರು ಈ ಹಿಂದೆ ಇದೇ ಬ್ಯಾನರ್ ನಲ್ಲಿ "ರೇವ್ ಪಾರ್ಟಿ" ಮತ್ತು "ಎಂಗೇಜ್ಮೆಂಟ್" ಚಿತ್ರಗಳನ್ನು ನಿರ್ಮಿಸಿದ್ದರು.
ನಕುಲ್ ಅಭಯಂಕರ್ ಅವರ ಸಂಗೀತ ನಿರ್ದೇಶನವಿರುವ ಬಹು ನಿರೀಕ್ಷಿತ ಈ ಚಿತ್ರಕ್ಕೆ ಅಜಯ್ ಕುಲಕರ್ಣಿ ಛಾಯಾಗ್ರಹಣ, ಉಲ್ಲಾಸ್ ಹೈದೂರ್ ಅವರ ಪ್ರೊಡಕ್ಷನ್ ಡಿಸೈನ್, ಅರ್ಜುನ್ ರಾಜ್ ಸಾಹಸ ನಿರ್ದೇಶನ ಮತ್ತು ಹೇಮಂತ್ ಕುಮಾರ್ ಡಿ ಅವರ ಸಂಕಲನವಿದೆ.