ಕನ್ನಡ ಪ್ರೇಕ್ಷಕರಿಗೆ ಸದಭಿರುಚಿಯ ಸಿನಿಮಾಗಳ ಮೂಲಕ ಉತ್ತಮ ಮನರಂಜನೆ ನೀಡುವ ಉದ್ದೇಶದಿಂದ ಪ್ರಾರಂಭವಾದ ಸಂಸ್ಥೆ  ಪುರಾತನ ಫಿಲಂಸ್. ಈಗಾಗಲೇ ಸನ್ ಆಫ್ ಮುತ್ತಣ್ಣ' ಎಂಬ ಭಾವನಾತ್ಮಕ ಕಥೆಯ ಚಿತ್ರ ನಿರ್ಮಿಸಿರುವ ಪುರಾತನ ಸಂಸ್ಥೆಯ ಈ ಚಿತ್ರ ಇದೇ ಸೆಪ್ಟೆಂಬರ್ 12 ರಂದು ತೆರೆ ಕಾಣಲಿದೆ.

ಪುರಾತನ ಫಿಲಂಸ್ ಮುಂದಿನ ದಿನಗಳಲ್ಲಿ ನಟ ಪ್ರಜ್ವಲ್ ದೇವರಾಜ್ ಅವರ ಜೊತೆಗೂಡಿ ಅತ್ಯುತ್ತಮ ತಾಂತ್ರಿಕತೆಯ ಹಾಗೂ ಸದಭಿರುಚಿಯ  ಸಿನಿಮಾಗಳನ್ನು ನಿರ್ಮಾಣ ಮಾಡಲು ಮುಂದಾಗಿದೆ.

1000674128

ಪುರಾತನ ಫಿಲಂಸ್ ಹಾಗೂ ಪ್ರಜ್ವಲ್ ದೇವರಾಜ್ ಸೇರಿ "P2 ಪ್ರೊಡಕ್ಷನ್ಸ್" ಎಂಬ ನೂತನ ನಿರ್ಮಾಣ ಸಂಸ್ಥೆಯನ್ನು  ಹುಟ್ಟುಹಾಕಿದ್ದು, ಇದರ ಮೂಲಕ ಪ್ರತಿಭಾವಂತ ಕಲಾವಿದರು, ತಂತ್ರಜ್ಞರು ಮತ್ತು ಒಳ್ಳೆಯ ಕಥೆಗಳನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಲಿದೆ.

1000674116

ಇದುವರೆಗೆ ಲವರ್ ಬಾಯ್, ಆಕ್ಷನ್ ಹೀರೋ ಹೀಗೆ ಎಲ್ಲಾ ಥರದ ಪಾತ್ರಗಳನ್ನ ನಿರ್ವಹಿಸುವ ಮೂಲಕ ಗುರುತಿಸಿಕೊಂಡ ನಟ ಪ್ರಜ್ವಲ್ ದೇವರಾಜ್ ಇದೀಗ  ಚಲನಚಿತ್ರ ನಿರ್ಮಾಣದತ್ತ ಹೊಸ ಹೆಜ್ಜೆ ಇಟ್ಟಿದ್ದು, ದೊಡ್ಡ ಸಂಸ್ಥೆಯ‌ ಜತೆ  ಕೈಜೋಡಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಚಿತ್ರ ನಟರು, ನಿರ್ದೇಶಕರು ಹೆಚ್ಚು ಹೆಚ್ಚಾಗಿ ಸಿನಿಮಾ ರಂಗಕ್ಕೆ ಬರುತ್ತಿರುವುದು ನಿಜಕ್ಕೂ ಉತ್ತಮ ಬೆಳವಣಿಗೆ. ಅದರಲ್ಲೂ 30ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿರುವ ಪ್ರಜ್ವಲ್ ದೇವರಾಜ್ ತಂದೆ ದೇವರಾಜ್ ಅವರ ಸಿನಿ ಪಯಣ ನೋಡಿ ಬೆಳೆದವರು, ಇಡೀ ಕುಟುಂಬ ಸಿನಿಮಾ ರಂಗಕ್ಕೆ ಮೂಡಿಪಾಗಿಟ್ಟಿರುವದು ಕೂಡ ವಿಶೇಷ.

1000674118

ಪ್ರಜ್ವಲ್ ದೇವರಾಜ್ ಅವರ ಹೊಸ ಪ್ರಯತ್ನ ಯಶಸ್ವೀಯಾಗಲಿ. P2 ಸಂಸ್ಥೆ ಯಿಂದ ಉತ್ತಮ ಅಭಿರುಚಿಯುಳ್ಳ ಚಿತ್ರಗಳು ಹೊರಬರಲಿ ನಮ್ಮ ಆಶಯ.

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ