ರಾಘವೇಂದ್ರ ಅಡಿಗ ಎಚ್ಚೆನ್.

ಇಂದು ಮಂಗಳವಾರ ಬೆಳಗ್ಗೆಯೇ ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ ಎಂಬ ಸುದ್ದಿ ಮಾಧ್ಯಮಗಳಲ್ಲೆಲ್ಲಾ ಹರಿದಾಡಿತು. ಆದರೆ ಅದು ಸುಳ್ಳು, ಅವರೀಗ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಸ್ವತಃ ಅವರ ಪುತ್ರಿ ಇಶಾ ಡಿಯೋಲ್ ಸೋಷಿಯಲ್ ಮೀಡಿಯಾ ಮೂಲಕ ಸ್ಪಷ್ಟನೆ ನೀಡಿದ್ದಾರೆ.
89 ವರ್ಷದ ಬಾಲಿವುಡ್ ಶೋಮ್ಯಾನ್ ಧರ್ಮೇಂದ್ರ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಇರುವುದರಿಂದ ಅವರ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡುವುದನ್ನು ನಿಲ್ಲಿಸುವಂತೆ ಮಾಧ್ಯಮಗಳನ್ನು ಒತ್ತಾಯಿಸಿದ್ದಾರೆ.
ಮಾಧ್ಯಮಗಳು ಅತಿರೇಕದ ಸುಳ್ಳು ಸುದ್ದಿಗಳನ್ನು ಹರಡುತ್ತಿವೆ. ನನ್ನ ತಂದೆ ಆರೋಗ್ಯ ಸ್ಥಿರವಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ನಮ್ಮ ಕುಟುಂಬದವರಿಗೆ ಗೌಪ್ಯತೆಯನ್ನು ಕಾಪಾಡಿಕೊಳ್ಳಲು ಅವಕಾಶ ನೀಡುವಂತೆ ನಾವು ವಿನಂತಿಸುತ್ತೇವೆ. ಅಪ್ಪನ ಶೀಘ್ರ ಚೇತರಿಕೆಗಾಗಿ ಪ್ರಾರ್ಥನೆ ಸಲ್ಲಿಸಿದ್ದಕ್ಕಾಗಿ ಧನ್ಯವಾದಗಳು” ಎಂದು ಇಶಾ ಇನ್‌ಸ್ಟಾಗ್ರಾಮ್‌ನಲ್ಲಿ ಬರೆದಿದ್ದಾರೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ