ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಆಸ್ಪತ್ರೆಗೆ ದಾಖಲಾಗಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಕೆಲವು ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳಲ್ಲಿ ಧರ್ಮೇಂದ್ರ ನಿಧನದ ಸುದ್ದಿ ಪ್ರಸಾರ ಮಾಡಿದ ಬೆನ್ನಲ್ಲೇ ಧರ್ಮೇಂದ್ರ ಪತ್ನಿ ನಟಿ, ಸಂಸದೆ ಹೇಮಾಮಾಲಿನಿ ಟ್ವೀಟ್ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ.
ನಟ ಧರ್ಮೇಂದ್ರ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿರುವ ಧರ್ಮೇಂದ್ರ ಅವರಿಗೆ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಮುಂದುವರೆದಿದೆ. ಆದರೆ ಕೆಲ ಮಾಧ್ಯಮಗಳು ಧರ್ಮೇಂದ್ರ ನಿಧನ ಹೊಂದಿದ್ದಾರೆ ಎಂದು ವರದಿ ಪ್ರಸಾರ ಮಾಡಿದ್ದವು. ಇದನ್ನು ಗಮನಿಸಿ ಸಾಮಾಜಿಕ ಜಾಲತಾಣಗಳಲ್ಲಿಯೂ ಸಹ ಅಭಿಮಾನಿಗಳು ಶೋಕ ಸಂದೇಶ ಹಂಚಿಕೊಳ್ಳಲು ಆರಂಭಿಸಿದ್ದರು. ಆದರೆ ಈ ವಿಷಯ ಧರ್ಮೇಂದ್ರ ಕುಟುಂಬದವರಿಗೆ ತೀವ್ರ ನೋವುಂಟು ಮಾಡಿದೆ. ವಿಶೇಷವಾಗಿ ನಟಿ, ಸಂಸದೆ ಹೇಮಾಮಾಲಿನಿ, ಮಾಧ್ಯಮಗಳು ಹಾಗೂ ಸುಳ್ಳು ಸುದ್ದಿ ಹರಡುತ್ತಿರುವವರ ಮೇಲೆ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

`ಈ ರೀತಿ ಆಗುತ್ತಿರುವುದು ಕ್ಷಮೆಗೆ ಅರ್ಹವಾದುದಲ್ಲ. ಚಿಕಿತ್ಸೆಗೆ ಸ್ಪಂದಿಸುತ್ತಿರುವ ಮತ್ತು ಚೇತರಿಸಿಕೊಳ್ಳುತ್ತಿರುವ ವ್ಯಕ್ತಿಯ ಬಗ್ಗೆ ಜವಾಬ್ದಾರಿಯುತ ಚಾನೆಲ್‌ಗಳು ಸುಳ್ಳು ಸುದ್ದಿಗಳನ್ನು ಹೇಗೆ ಹರಡಬಹುದು? ಇದು ಅತ್ಯಂತ ಅಗೌರವ ಮತ್ತು ಬೇಜವಾಬ್ದಾರಿ. ದಯವಿಟ್ಟು ಕುಟುಂಬಕ್ಕೆ ಮತ್ತು ಅದರ ಗೌಪ್ಯತೆಗೆ ಸರಿಯಾದ ಗೌರವವನ್ನು ನೀಡಿ’ ಎಂದು ಹೇಮಾಮಾಲಿನಿ ಆಕ್ರೋಶದಿಂದ ಟ್ವೀಟ್ ಮಾಡಿದ್ದಾರೆ.
ನಟ ಧರ್ಮೇಂದ್ರ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಆದಷ್ಟು ಬೇಗ ಚೇತರಿಸಿಕೊಂಡು ಸಹಜ ಸ್ಥಿತಿಗೆ ಬರಲೆಂದು ಅವರ ಕುಟುಂಬಸ್ಥರು, ಆಪ್ತರು ಹಾಗೂ ಅಭಿಮಾನಿಗಳು ಪ್ರಾರ್ಥಿಸಿದ್ದಾರೆ.
ಬಾಲಿವುಡ್‌ನ 'ಹೀ-ಮ್ಯಾನ್' ಖ್ಯಾತಿಯ ಹಿರಿಯ ನಟ ಧರ್ಮೇಂದ್ರ (89) ಮಂಗಳವಾರ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಡಿತ್ತು.
ಭಾರತೀಯ ಚಿತ್ರರಂಗದ ಶ್ರೇಷ್ಠ ನಟರಲ್ಲಿ ಒಬ್ಬರೆಂದು ಪರಿಗಣಿಸಿರುವ ಧರ್ಮೇಂದ್ರ, 1960 ರಲ್ಲಿ 'ದಿಲ್ ಭಿ ತೇರಾ ಹಮ್ ಭಿ ತೇರೆ' ಚಿತ್ರದ ಮೂಲಕ ತಮ್ಮ ವೃತ್ತಿಜೀವನ ಆರಂಭಿಸಿದವರು. 2012 ರಲ್ಲಿ ಅವರಿಗೆ 'ಪದ್ಮಭೂಷಣ' ನೀಡಿ ಗೌರವಿಸಲಾಗಿತ್ತು. ತಮ್ಮ ಸುದೀರ್ಘ ವೃತ್ತಿಜೀವನದಲ್ಲಿ 'ಯಾದೋಂ ಕೀ ಬಾರಾತ್', 'ಮೇರಾ ಗಾಂವ್ ಮೇರಾ ದೇಶ್', 'ನೌಕರ್ ಬೀವಿ ಕಾ', 'ಫೂಲ್ ಔರ್ ಪತ್ಥರ್', 'ಬೇತಾಬ್' ಮತ್ತು 'ಘಾಯಲ್' ನಂತಹ ಹಲವಾರು ಸೂಪರ್ ಹಿಟ್ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.
ಧರ್ಮೇಂದ್ರ ತಮ್ಮ ಇಳಿ ವಯಸ್ಸಿನಲ್ಲೂ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿದ್ದಾರೆ. ಆರೋಗ್ಯಕರ ಜೀವನ, ಸಾವಯವ ಕೃಷಿ ಪದ್ಧತಿಗಳನ್ನು ಉತ್ತೇಜಿಸುವ ವೀಡಿಯೊಗಳನ್ನು ಆಗಾಗ ಹಂಚಿಕೊಳ್ಳುತ್ತಿರುತ್ತಾರೆ. ಟ್ರ್ಯಾಕ್ಟರ್ ಓಡಿಸುವುದು, ತೋಟದ ಮನೆಯಲ್ಲಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು, ಸರಳ ಜೀವನ ಪಾಠಗಳು, ಕೃಷಿ ಸಲಹೆಗಳನ್ನು ನೀಡುವುದು ಅವರ ಇನ್‌ಸ್ಟಾಗ್ರಾಮ್ ಪೋಸ್ಟ್‌ಗಳಲ್ಲಿ ಕಂಡುಬರುತ್ತವೆ.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್