- ರಾಘವೇಂದ್ರ ಅಡಿಗ ಎಚ್ಚೆನ್.

ದೇಶಾದ್ಯಂತ ಭಾರಿ ಕುತೂಹಲ ಮೂಡಿಸಿದ್ದ ಬಾಲಿವುಡ್ ಬಿಗ್ ಬಜೆಟ್ ಸಿನಿಮಾ ‘ಧುರಂಧರ್ 2’ ಇದೀಗ ಕನ್ನಡದಲ್ಲಿಯೂ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಆರಂಭಿಕ ದಿನಗಳಲ್ಲಿ ಕನ್ನಡ ಆವೃತ್ತಿ ಬಿಡುಗಡೆಯಾಗದ ಕಾರಣ ಅಭಿಮಾನಿಗಳಲ್ಲಿ ನಿರಾಸೆ ಮೂಡಿದ್ದರೂ, ತಾಂತ್ರಿಕ ಅಡಚಣೆಗಳು ನಿವಾರಣೆಯಾದ ಬಳಿಕ ಚಿತ್ರ ರಾಜ್ಯದಲ್ಲಿ ಯಶಸ್ವಿಯಾಗಿ ಓಡುತ್ತಿದೆ.
ಮಾರ್ಚ್ 19ರಂದು ಹಿಂದಿ ಆವೃತ್ತಿ ವಿಶ್ವದಾದ್ಯಂತ ಬಿಡುಗಡೆಯಾದರೂ, ಕನ್ನಡ ಸೇರಿದಂತೆ ದಕ್ಷಿಣ ಭಾರತದ ಡಬ್ಬಿಂಗ್ ಆವೃತ್ತಿಗಳು ಅದೇ ದಿನ ತೆರೆಗೆ ಬರಲಿಲ್ಲ. ಪ್ರಾದೇಶಿಕ ಭಾಷೆಗಳ ಸೆನ್ಸಾರ್ ಪ್ರಮಾಣಪತ್ರ ವಿಳಂಬ ಹಾಗೂ ಡಿಜಿಟಲ್ ಕಂಟೆಂಟ್ (DCP) ಚಿತ್ರಮಂದಿರಗಳಿಗೆ ತಲುಪುವಲ್ಲಿ ಉಂಟಾದ ತೊಂದರೆ ಪ್ರಮುಖ ಕಾರಣಗಳಾಗಿ ಗುರುತಿಸಲಾಗಿದೆ.
ಇದಲ್ಲದೆ, ಡಬ್ಬಿಂಗ್ ಪ್ರಕ್ರಿಯೆಯ ಅಂತಿಮ ಹಂತದ ಕೆಲಸಗಳು ಪೂರ್ಣಗೊಳ್ಳದಿದ್ದುದರಿಂದ ಕೂಡ ಕನ್ನಡ ಆವೃತ್ತಿ ಬಿಡುಗಡೆ ಮುಂದೂಡಬೇಕಾಯಿತು. ಈ ಹಿನ್ನೆಲೆಯಲ್ಲಿ ನಿರ್ದೇಶಕ ಆದಿತ್ಯ ಧರ್ ಸಾಮಾಜಿಕ ಜಾಲತಾಣಗಳಲ್ಲಿ ಕ್ಷಮೆಯಾಚಿಸಿ, “ಎಲ್ಲ ಭಾಷೆಗಳಲ್ಲಿ ಏಕಕಾಲಕ್ಕೆ ಸಿನಿಮಾ ಬಿಡುಗಡೆ ಮಾಡುವ ಉದ್ದೇಶವಿತ್ತು, ಆದರೆ ಅನಿವಾರ್ಯ ಕಾರಣಗಳಿಂದ ವಿಳಂಬವಾಯಿತು” ಎಂದು ಸ್ಪಷ್ಟಪಡಿಸಿದ್ದರು.
ವಿಳಂಬದ ನಂತರ ಬಿಡುಗಡೆಯಾದ ಕನ್ನಡ ಆವೃತ್ತಿಗೆ ಕರ್ನಾಟಕದಲ್ಲಿ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಬೆಂಗಳೂರು, ಮೈಸೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಪ್ರದರ್ಶನಗಳು ಹೌಸ್‌ಫುಲ್ ಆಗುತ್ತಿವೆ.
ಸ್ಪೈ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ರಣವೀರ್ ಸಿಂಗ್, ಸಂಜಯ್ ದತ್, ಅರ್ಜುನ್ ರಾಮ್ಪಾಲ್, ಸಾರಾ ಅರ್ಜುನ್ ಹಾಗೂ ಆರ್. ಮಾಧವನ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರದ ಮೇಕಿಂಗ್ ಮತ್ತು ಆ್ಯಕ್ಷನ್ ದೃಶ್ಯಗಳು ಪ್ರೇಕ್ಷಕರನ್ನು ಸೆಳೆಯುತ್ತಿವೆ.
ಮಿಶ್ರ ವಿಮರ್ಶೆಗಳ ನಡುವೆಯೂ ‘ಧುರಂಧರ್ 2’ ಬಾಕ್ಸ್‌ಆಫೀಸ್‌ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿದ್ದು, ಕೇವಲ ನಾಲ್ಕು ದಿನಗಳಲ್ಲಿ ವಿಶ್ವದಾದ್ಯಂತ 600 ಕೋಟಿ ರೂಪಾಯಿಗೂ ಅಧಿಕ ಗಳಿಕೆ ದಾಖಲಿಸಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ