- ರಾಘವೇಂದ್ರ ಅಡಿಗ ಎಚ್ಚೆನ್.

ಕನ್ನಡ ಚಿತ್ರರಂಗದ ಜನಪ್ರಿಯ ನಟ ದಿಗಂತ್ ಅವರು ಇತ್ತೀಚೆಗೆ ತಮ್ಮ ಹೊಸ ಸಿನಿಮಾ “ರುದ್ರ ಕಾಲ” ಮುಹೂರ್ತ ಕಾರ್ಯಕ್ರಮದಲ್ಲಿ ಚಿತ್ರರಂಗದ ಸ್ಥಿತಿ ಕುರಿತು ಮನಬಿಚ್ಚಿ ಮಾತನಾಡಿದ್ದಾರೆ.
ಇಪ್ಪತ್ತು ವರ್ಷಕ್ಕೂ ಹೆಚ್ಚು ಕಾಲ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ದಿಗಂತ್, ಈಗಲೂ ಕೆಲವು ಸಿನಿಮಾಗಳಲ್ಲಿ ನಟಿಸುತ್ತಿದ್ದರೂ, ಇತ್ತೀಚಿನ ದಿನಗಳಲ್ಲಿ ಅವಕಾಶಗಳ ಕೊರತೆ ತೀವ್ರವಾಗಿದೆ ಎಂದು ಹೇಳಿದ್ದಾರೆ. “ಕನ್ನಡ ಚಿತ್ರರಂಗ ಹಲವು ಸವಾಲುಗಳನ್ನು ಎದುರಿಸುತ್ತಿದೆ. ನಿರ್ಮಾಪಕರು ಸಿನಿಮಾ ಮಾಡಲು ಮುಂದೆ ಬರುತ್ತಿಲ್ಲ. ಸಿನಿಮಾಗಳು ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಕಾಣುತ್ತಿಲ್ಲ. ಒಟಿಟಿಗಳಿಂದಲೂ ಕನ್ನಡ ಚಿತ್ರಗಳಿಗೆ ದೊಡ್ಡ ಮಟ್ಟದ ಸಹಾಯ ಸಿಗುತ್ತಿಲ್ಲ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಅವರು ಮುಂದುವರೆದು, “ನನಗೂ ಅವಕಾಶಗಳ ಕೊರತೆ ಎದುರಾಗಿದೆ. ಕೆಲವೊಮ್ಮೆ ನಟನೆ ಬಿಟ್ಟು ಊರಿಗೆ ಹೋಗಿ ಕೃಷಿಯಲ್ಲಿ ತೊಡಗಿಕೊಳ್ಳೋಣ ಎನ್ನುವ ಮಟ್ಟಿಗೆ ಯೋಚನೆ ಬರುತ್ತದೆ” ಎಂದು ಹೇಳಿದ್ದಾರೆ.
ದಿಗಂತ್ ಪ್ರಕಾರ, ಕೆಲವು ತಿಂಗಳ ಹಿಂದೆ ಇಬ್ಬರು ನಿರ್ಮಾಪಕರು ಸಿನಿಮಾ ಪ್ರಸ್ತಾಪ ಮಾಡಿದರೂ ನಂತರ ಹಿಂಜರಿದಿದ್ದಾರೆ. “ಸಮಯ ಸರಿಯಿಲ್ಲ ಎಂದು ಹಿಂದೆ ಸರಿದರು. ಈಗ ಪರಿಸ್ಥಿತಿ ತುಂಬಾ ಬದಲಾಗಿದೆ” ಎಂದು ಅವರು ತಿಳಿಸಿದ್ದಾರೆ.
ತಮ್ಮ ವೈಯಕ್ತಿಕ ಜೀವನದ ಉದಾಹರಣೆ ನೀಡಿದ ಅವರು, ನಂದಿ ಬೆಟ್ಟದ ಬಳಿ ಇರುವ ಗೇಟೆಡ್ ಕಮ್ಯೂನಿಟಿಯ ಮನೆಯನ್ನು ಬಾಡಿಗೆಗೆ ನೀಡಿ ಅದರಿಂದ ಜೀವನ ನಡೆಸಬೇಕಾದ ಪರಿಸ್ಥಿತಿ ಬಂದಿತ್ತು ಎಂದು ಹೇಳಿದ್ದಾರೆ. “ತೀರ್ಥಹಳ್ಳಿಗೆ ಹೋಗಿ ಕೃಷಿ ಮಾಡೋಣ, ನಟನೆ ಬಿಡೋಣ ಎಂಬ ನಿರ್ಧಾರಕ್ಕೂ ಬಂದಿದ್ದೆ” ಎಂದು ಅವರು ಹೇಳಿದ್ದಾರೆ.
ಪ್ರಸ್ತುತ ದಿಗಂತ್ “ರುದ್ರ ಕಾಲ” ಸಿನಿಮಾದಲ್ಲಿ ನಟಿಸುತ್ತಿದ್ದು, ಜೊತೆಗೆ ತೆಲುಗು ಚಿತ್ರರಂಗದಲ್ಲೂ ಸಮಂತಾ ಅವರೊಂದಿಗೆ “ಮಾ ಇಂಟಿ ಬಂಗಾರಂ” ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಗಳ ನಂತರ ತೆಲುಗು ಚಿತ್ರರಂಗದಲ್ಲಿ ಹೆಚ್ಚಿನ ಅವಕಾಶಗಳ ನಿರೀಕ್ಷೆಯಲ್ಲಿದ್ದಾರೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ