-  ರಾಘವೇಂದ್ರ ಅಡಿಗ ಎಚ್ಚೆನ್.

ಪಡ್ಡೆಹುಲಿ ಖ್ಯಾತಿಯ ಶ್ರೇಯಸ್ ಮಂಜು ನಾಯಕನಾಗಿ ನಟಿಸಿರುವ ಚಿತ್ರ `ದಿಲ್‌ದಾರ್'. ಮಧು ಗೌಡ ಗಂಗೂರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾದ ಫಸ್ಟ್ ಲುಕ್ ಟೀಸರ್ ಇದೀಗ ಬಿಡುಗಡೆಗೊಂಡಿದೆ. ಈಗಾಗಲೇ ಮಾಸ್ ಪಾತ್ರಗಳ ಮೂಲಕ ಗಮನ ಸೆಳೆದಿರುವ ಶ್ರೇಯಸ್ ಮಂಜು, ಈ ಚಿತ್ರದಲ್ಲಿ ಮತ್ತೊಂದೊಂದು ಹಂತದ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿರುವ ಸುಳಿವೊಂದು ಈ ಮೂಲಕ ಜಾಹೀರಾಗಿದೆ.

ಏನ್ಸಿಯಂಟ್ ಮೂವೀಸ್ ಬ್ಯಾನರಿನಡಿಯಲ್ಲಿ ಆರ್. ಸಂತೋಷ್ ಕುಮಾರ್ (ಎಸ್‌ವಿಟಿ) ನಿರ್ಮಾಣ ಮಾಡಿರುವ ದಿಲ್‌ದಾರ್ ಚಿತ್ರವೀಗ ಚಿತ್ರೀಕರಣವನ್ನೆಲ್ಲ ಮುಗಿಸಿಕೊಂಡು ಬಿಡುಗಡೆಯ ಹೊಸ್ತಿಲಲ್ಲಿದೆ. ಈ ಹಂತದಲ್ಲಿ ಫಸ್ಟ್ ಲುಕ್ ಟೀಸರ್ ಮೂಲಕ ಪ್ರೇಕ್ಷಕರನ್ನು ತಲುಪಲು ಚಿತ್ರತಂಡ ಪ್ರಯತ್ನಿಸಿದೆ. ಈ ಹಿಂದೆಯೇ ಶ್ರೇಯಸ್ ಮಂಜು ಈ ಹಿಂದೆಂದೂ ಕಾಣಿಸಿಕೊಂಡಿರದಿದ್ದ ಪಾತ್ರದಲ್ಲಿ ನಟಿಸಿದ್ದಾರೆಂದು ಚಿತ್ರತಮಡ ಹೇಳಿಕೊಂಡಿತ್ತು. ಅದರ ಚಹರೆ ಈ ಟೀಸರ್ ಮೂಲಕ ಅನಾವರಣಗೊಂಡಿದೆ.

ಇದು ಭಿನ್ನವಾದೊಂಣದು ಪ್ರೇಮ ಕಥಾನಕವನ್ನೊಳಗೊಂಡಿರೋ ಪಕ್ಕಾ ಆಕ್ಷನ್ ಚಿತ್ರವೆಂಬ ಬಗ್ಗೆ ಚಿತ್ರತಂಡ ಹೇಳಿಕೊಂಡಿದೆ. ನಟ ಶರಣ್ ಅವರ ತಂಗಿ ಮಗಳಾದ ಕೀರ್ತಿ ಕೃಷ್ಣ ಈ ಚಿತ್ರದ ಮೂಲಕವೇ ನಾಯಕಿಯಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ. ಸಾಧು ಕೋಕಿಲಾ, ಚಂದ್ರಪ್ರಭ, ಕಾರ್ತಿಕ್, ಚಿಲ್ಲರ್ ಮಂಜು ಮುಂತಾದ ಹಾಸ್ಯ ನಟರ ದಂಡೇ ಈ ಚಿತ್ರದಲ್ಲಿದೆ. ಕೆಜಿಎಫ್ ಖ್ಯಾತಿಯ ಆಂಡ್ರೋ ಅವಿನಾಶ್, ಭಜರಂಗಿ ಲೋಕಿ, ಅರ್ಪಿತ್ ಖಳ ನಟರಾಗಿ ಅಬ್ಬರಿಸಿದ್ದಾರೆ. ಹರೇಕೃಷ್ಣ ರೆಡ್ಡಿ ಎಸ್ ಕರ್ಯಕಾರಿ ನಿರ್ಮಾಪಕರಾಗಿ ಜೊತೆಯಾಗಿದ್ದಾರೆ. ದಿಲ್ ದಾರ್ ಕುರಿತಾದ ಮತ್ತಷ್ಟು ಮಾಹಿತಿಗಳು ಶೀಘ್ರದಲ್ಲಿಯೇ ಪ್ರೇಕ್ಷಕರನ್ನು ತಲುಪಲಿವೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ