- ರಾಘವೇಂದ್ರ ಅಡಿಗ ಎಚ್ಚೆನ್.

ಹಲವು ವರ್ಷಗಳ ಬಳಿಕ ದಿಢೀರ್ ಪ್ರತ್ಯಕ್ಷಗೊಂಡ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ವಿರುದ್ಧ ಇದೀಗ ಗಂಭೀರ ಆರೋಪಗಳು ಕೇಳಿಬಂದಿವೆ.

ನಟ ದರ್ಶನ್ ಅವರ ಸಹೋದರ ದಿನಕರ್ ತೂಗುದೀಪ ಸೋಶಿಯಲ್ ಮೀಡಿಯಾದಲ್ಲಿ ಕಿಡಿಕಾರಿದ್ದು, ಮಲ್ಲಿಕಾರ್ಜುನ್ ಅವರನ್ನು “ಚೀಟರ್ ಮಲ್ಲು, ದೊಡ್ಡ ಫ್ರಾಡ್” ಎಂದು ಕರೆದಿದ್ದಾರೆ.

ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಾಕಿರುವ ದಿನಾಕರ್‌ ತೂಗುದೀಪ್‌,

‘ಮಲ್ಲಿಕಾರ್ಜುನ್ ಗದಗ ಅಲಿಯಾಸ್ ಚೀಟರ್ ಮಲ್ಲು ಎಂಬ ಫ್ರಾಡ್ ಎಂಟು ವರ್ಷಗಳ ಹಿಂದೆ ನಮಗೂ ಹಣಕಾಸಿನಲ್ಲಿ ಮೋಸ ಮಾಡಿ ನನ್ನ ಹೆಸರನ್ನು, ದರ್ಶನ್ ಅವರ ಹೆಸರನ್ನು ಮತ್ತು ನಮ್ಮ ತೂಗುದೀಪ ಸಂಸ್ಥೆ ಹೆಸರನ್ನು ದುರ್ಬಳಕೆ ಮಾಡಿ, ನಮ್ಮ ಪರಿಚಯದವರ, ಸ್ನೇಹಿತರ ಹಾಗೂ ನಮ್ಮ ಸಂಪರ್ಕದಲ್ಲಿದ್ದ ಅನೇಕ ವ್ಯಕ್ತಿಗಳ ಬಳಿ ಸುಳ್ಳು ಹೇಳಿ ಹಣ ಪಡೆದು ವಂಚಿಸಿ ಪರಾರಿಯಾಗಿದ್ದವನು ಈಗ ದಿಢೀರನೆ ಪ್ರತ್ಯಕ್ಷನಾಗಿ 16-04-2026 ರಂದು ಪತ್ರಿಕಾಗೋಷ್ಠಿ ನಡೆಸಿರುತ್ತಾನೆ.’

‘ಅದರಲ್ಲಿ ಜನರನ್ನು ನಂಬಿಸಲು ತನಗೆ ಬೇಕಾದಂತೆ ಹೇಳಿಕೆ ಕೊಟ್ಟಿರುತ್ತಾನೆ. ತನಗೆ ಏನೇನೆಲ್ಲಾ ಆಯಿತು ಎಂದು ಹೇಳುತ್ತಿರುವ ಈತ ತನ್ನಿಂದ ಯಾರಿಗೆಲ್ಲ ಏನು ಅನಾಹುತ ಆಯಿತು ಎಂದು ಹೇಳಿರುವುದಿಲ್ಲ. ಈತ ಮಹಾ ಮೋಸಗಾರ. ಆ ಪತ್ರಿಕಾಗೋಷ್ಠಿಯಲ್ಲಿ ತನ್ನ ಲಾಭಕ್ಕೆ ತಕ್ಕಂತೆ ಪದೇ ಪದೇ ನಮ್ಮ ತೂಗುದೀಪ ಸಂಸ್ಥೆಯ ಹೆಸರು, ದರ್ಶನ್ ಅವರ ಹೆಸರು ಮತ್ತು ನನ್ನ ಹೆಸರನ್ನು ದುರ್ಬಳಕೆ ಮಾಡಿರುತ್ತಾನೆ.’

‘ನಮ್ಮ ನಂಬಿಕೆಗೆ ದ್ರೋಹ ಮಾಡಿರುವ ಮೋಸಗಾರ ಇವನು. ಮೋಸ ಮಾಡುವ ಮುನ್ನ ಈತ ಬಳಸುವ ದಾಳವೇ ಸಿಂಪತಿ. ಅದನ್ನು ಪಡೆಯಲು ಈತ ಹೇಳುವುದೇ ಕಟ್ಟು ಕತೆಗಳು. ಇವನನ್ನು ಯಾರೂ ನಂಬಬೇಡಿ. ನಾನಾಗಲಿ, ನಮ್ಮ ತೂಗುದೀಪ ಸಂಸ್ಥೆ, ದರ್ಶನ್ ಅವರು ಯಾರೂ ಈತನನ್ನು ಸೇರಿಸುವುದಿಲ್ಲ. ಈ ನಂಬಿಕೆ ದ್ರೋಹಿಗೂ ನಮಗೂ ಯಾವುದೇ ಸಂಬಂಧವಿರುವುದಿಲ್ಲ.’

‘ಈತ ಎಲ್ಲಾದರೂ ನಮ್ಮ ಒಡನಾಟದ ಬಗ್ಗೆ ಹೇಳಿಕೊಂಡು ಲಾಭ ಮಾಡಲು ಬಂದರೆ ಯಾಮಾರಬೇಡಿ. ದರ್ಶನ್ ಅವರ ಹೆಸರನ್ನು ಬಳಸಿ ದುಡ್ಡು ಮಾಡುವ ಇನ್ನೊಂದು ಹುನ್ನಾರವಷ್ಟೇ. ದಯವಿಟ್ಟು ಯಾರೂ ಇವನ ಮಾತನ್ನು ನಂಬಿ ಮೋಸ ಹೋಗಬೇಡಿ. ಇಂತಿ ನಿಮ್ಮ, ದಿನಕರ್ ತೂಗುದೀಪ’ ಎಂದು ಅವರು ಪೋಸ್ಟ್ ಮಾಡಿದ್ದಾರೆ.

ಈ ವಿವಾದ ಇದೀಗ ಮತ್ತಷ್ಟು ತೀವ್ರವಾಗುವ ಸಾಧ್ಯತೆ ಇದ್ದು, ಮಲ್ಲಿಕಾರ್ಜುನ್ ಇದಕ್ಕೆ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಲಾಗುತ್ತಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ