- ರಾಘವೇಂದ್ರ ಅಡಿಗ ಎಚ್ಚೆನ್.

‘ಸು ಫ್ರಮ್ ಸೋ’ ಸಿನಿಮಾವನ್ನು ನಿರ್ದೇಶಿಸಿ ಅಪಾರ ಜನಪ್ರಿಯತೆ ಪಡೆದ ನಿರ್ದೇಶಕ ಜೆಪಿ ತುಮ್ಮಿನಾಡು ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.‌ ರಶ್ಮಿಕಾ ಎಂಬ ಯುವತಿಯನ್ನು ಅವರು ವಿವಾಹವಾಗಿದ್ದು, ಹೊಸ ಜೀವನಕ್ಕೆ ಕುಟುಂಬದವರು ಮತ್ತು ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರ ಹರಿದುಬರುತ್ತಿದೆ.

director 3

ಮದುವೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದ್ದು, ಜೆಪಿ ಹಾಗೂ ರಶ್ಮಿಕಾ ಜೋಡಿ ಎಲ್ಲರ ಗಮನ ಸೆಳೆದಿದೆ. ಆಪ್ತರು ಹಾಗೂ ಕುಟುಂಬದವರ ಸಮ್ಮುಖದಲ್ಲಿ ಸರಳ ಹಾಗೂ ಸಂಭ್ರಮದ ವಾತಾವರಣದಲ್ಲಿ ಈ ವಿವಾಹ ನೆರವೇರಿದೆ. ಮಂಟಪವೂ ಅದ್ದೂರಿಯಾಗಿ ಅಲಂಕರಿಸಲ್ಪಟ್ಟಿರುವುದು ಗಮನಾರ್ಹವಾಗಿದೆ.

director 4

‘ಸು ಫ್ರಮ್ ಸೋ’ ಚಿತ್ರದ ಯಶಸ್ಸಿನ ಬಳಿಕ ಸ್ವಲ್ಪ ವಿರಾಮ ತೆಗೆದುಕೊಂಡಿದ್ದ ಜೆಪಿ ತುಮಿನಾಡು ಇದೀಗ ವೈಯಕ್ತಿಕ ಜೀವನದ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಕರಾವಳಿ ಭಾಗದ ಪ್ರತಿಭೆಯಾಗಿರುವ ಜೆಪಿ, ಸಿನಿಮಾ ಕ್ಷೇತ್ರಕ್ಕೆ ಪ್ರವೇಶಿಸುವ ಮೊದಲು ಸುಮಾರು 14 ವರ್ಷಗಳ ಕಾಲ

director

ರಂಗಭೂಮಿಯಲ್ಲಿ ತೊಡಗಿಸಿಕೊಂಡಿದ್ದರು. ಈ ಅವಧಿಯಲ್ಲಿ ಅವರು ಅನೇಕ ನಾಟಕಗಳನ್ನು ರಚಿಸಿ, ನಿರ್ದೇಶಿಸಿ ಹಾಗೂ ಅಭಿನಯಿಸಿದ್ದಾರೆ. ವಿಶೇಷವಾಗಿ ಹಾಸ್ಯ ನಾಟಕಗಳಲ್ಲಿ ಅವರ ಹಿಡಿತ ಗಮನಾರ್ಹವಾಗಿದೆ.

director 1

ಅವರ ನಿರ್ದೇಶನದ ‘ಸು ಫ್ರಮ್ ಸೋ’ ಸಿನಿಮಾ ಕೂಡ ಹಾಸ್ಯ ಪ್ರಧಾನವಾಗಿದ್ದು, ಪ್ರೇಕ್ಷಕರ ಮೆಚ್ಚುಗೆ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ ಸುಮಾರು 100 ಕೋಟಿ ರೂಪಾಯಿ ವರೆಗೆ ವಸೂಲಿ ಮಾಡಿದೆ. ಈ ಚಿತ್ರದಲ್ಲಿ ರಾಜ್ ಬಿ. ಶೆಟ್ಟಿ ಅವರು ಗುರೂಜಿ ಪಾತ್ರದಲ್ಲಿ ಅಭಿನಯಿಸಿದ್ದರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ